
ಚಿತ್ರದುರ್ಗ (ಡಿ.11): ಲಾರಿಗಳ ನಡುವೆ ನಡೆದ ಸರಣಿ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಸಾವಿಗೀಡಾದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.
ಚಿತ್ರದುರ್ಗ ಜಿಲ್ಲೆಯ ಚಿಕ್ಕಗೊಂಡನಹಳ್ಳಿ ಬಳಿಯಲ್ಲಿ ಲಾರಿಗಳ ಅಪಘಾತ ನಡೆದಿದ್ದು ಓರ್ವ ಲಾರಿ ಚಾಲಕ ಸಾವಿಗೀಡಾಗಿದ್ದು, 7 ಮಂದಿ ಗಾಯಗೊಂಡಿದ್ದಾರೆ.
ಲಾರಿ ಚಾಲಕನ ಬಗ್ಗೆ ಇನ್ನೂ ಕೂಡ ಯಾವುದೇ ರೀತಿಯ ನಿಖರ ಮಾಹಿತಿ ಲಭ್ಯವಾಗಿಲ್ಲ.
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಅಪಘಾತಕ್ಕೆ ಈಡಾದ ಲಾರಿಯಲ್ಲಿ ಈರುಳ್ಳಿ ಸಾಗಿಸಲಾಗುತ್ತಿದ್ದು, ಗಾಯಾಳುಗಳನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ತುರುವನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀರಿ ಪರಿಶೀಲನೆ ನಡೆಸಿದ್ದಾರೆ.