
ಮೈಸೂರು: ಕಾಡಾನೆ ಜೊತೆ ಕಾದಾಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ದಸರಾ ಆನೆ ಗೋಪಾಲಸ್ವಾಮಿ ಬುಧವಾರ ಮೃತಪಟ್ಟಿದೆ. ನಾಗರಹೊಳೆ ಮತ್ತಿಗೋಡು ಆನೆ ಶಿಬಿರದಲ್ಲಿದ್ದ ಗೋಪಾಲಸ್ವಾಮಿ ಆನೆ ಮಂಗಳವಾರ ಕಾಡಿಗೆ ಮೇಯಲು ಹೋಗಿದ್ದಾಗ ಕಾಡಾನೆ ಜೊತೆಗೆ ಕಾದಾಟ ನಡೆಸಿ, ಗಂಭೀರವಾಗಿ ಗಾಯಗೊಂಡಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿರುವುದಾಗಿ ವರದಿಯಾಗಿದೆ.
ಈ ವರ್ಷ ಅದ್ದೂರಿಯಾಗಿ ನಡೆದ ಮೈಸೂರು ದಸರಾ ಮಹೋತ್ಸವದಲ್ಲಿ ಮರದ ಅಂಬಾರಿ ಹೊತ್ತಿದ್ದ ಗೋಪಾಲಸ್ವಾಮಿ. ಒಟ್ಟು 14 ಬಾರಿ ದಸರಾ ಮಹೋತ್ಸವದಲ್ಲಿ ಭಾಗಿಯಾಗಿತ್ತು. ಅಷ್ಟೇ ಅಲ್ಲದೆ ಕಾಡಾನೆ ಹುಲಿಗಳ ಸೆರೆಗೆ ಅರಣ್ಯ ಇಲಾಖೆ ಕಾರ್ಯಾಚರಣೆಯಲ್ಲಿ ಭಾಗಿಯಾಗುತ್ತಿತ್ತು. ಕಾಡಾನೆ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆಗೆ ಗೋಪಾಲಸ್ವಾಮಿಯನ್ನೇ ನೆಚ್ಚಿಕೊಂಡಿದ್ದರು. ಮೈಸೂರು: ಕಾಡಾನೆ ಜತೆಗೆ ಕಾದಾಟದಿಂದ ಗಂಭೀರ ಗಾಯಗೊಂಡಿದ್ದ ಗೋಪಾಲಸ್ವಾಮಿ ಇದೀಗ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದೆ.
ಕಾಡಾನೆ ಹಿಮ್ಮೆಟ್ಟಿಸಲು 4 ಜಿಲ್ಲೆಗಳಲ್ಲಿ ಟಾಸ್ಕ್ ಫೋರ್ಸ್ ರಚನೆ