ಬೆಂಗಳೂರು: ದೌರ್ಜನ್ಯ ಪ್ರಕರಣಗಳನ್ನು ಶೀಘ್ರ ಇತ್ಯರ್ಥಗೊಳಿಸಿ, ಡಿಸಿ ಆರ್.ಲತಾ

By Girish Goudar  |  First Published Oct 6, 2022, 10:20 PM IST

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿರುದ್ಧದ ದೌರ್ಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ತಿಳಿಸಿದ ಡಿಸಿ ಆರ್.ಲತಾ 


ಬೆಂಗಳೂರು(ಅ.06):  ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಮೇಲೆ ದೌರ್ಜನ್ಯ ಪ್ರಕರಣಗಳು ನಡೆದ 24 ಗಂಟೆಗಳಲ್ಲಿ ಪ್ರಕರಣ ದಾಖಲು ಮಾಡುವುದರೊಂದಿಗೆ, ಪ್ರಕರಣದ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ, ಕ್ರಮ ಕೈಗೊಂಡು ಪರಿಹಾರ ಒದಗಿಸುವ ಮೂಲಕ ಶೀಘ್ರ ಇತ್ಯರ್ಥಗೊಳಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದರು. ಇಂದು(ಗುರುವಾರ) ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಡೆದ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ 2022ನೇ ವರ್ಷದ 3ನೇ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾದ ಕೂಡಲೇ ಪ್ರಥಮ ವರ್ತಮಾನ ವರದಿಯನ್ನು ಹಾಗೂ ಚಾರ್ಜ್‌ಶೀಟ್ ಸಲ್ಲಿಸಲು ಬಾಕಿ ಇರುವ ಪ್ರಕರಣಗಳಿಗೆ ಚಾರ್ಜ್‌ಶೀಟ್ ವರದಿಯನ್ನು ಜಿಲ್ಲಾಡಳಿತಕ್ಕೆ ಹಾಗೂ ಜಿಲ್ಲಾ/ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಗೆ ಸಲ್ಲಿಸಲು ಕ್ರಮವಹಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.

Latest Videos

undefined

ನೂರಾರು ಕಾರ್ಯಕರ್ತರು ಬಿಜೆಪಿ ಸೇರ್ಪಡೆ

ಕಾಲಕಾಲಕ್ಕೆ‌ ಜಾಗೃತಿ‌ ಸಮಿತಿ ಸಭೆ ನಡೆಸಬೇಕು

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿರುದ್ಧದ ದೌರ್ಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು. 
ತಾಲ್ಲೂಕುಗಳಲ್ಲಿ ನಿಗದಿತ ಸಮಯಕ್ಕೆ ನಿಯಮಿತವಾಗಿ ಜಾಗೃತಿ ಹಾಗೂ ಉಸ್ತುವಾರಿ ಸಮಿತಿಯ ಸಭೆಗಳನ್ನು ನಡೆಸಬೇಕು ಎಂದರಲ್ಲದೆ, ಸಭೆಗಳನ್ನು ನಡೆಸುವುದರಿಂದ ಹಲವಾರು ದೌರ್ಜನ್ಯದಂತಹ ಸಮಸ್ಯೆಗಳನ್ನು ತಳಮಟ್ಟದಲ್ಲಿಯೇ ಪರಿಹರಿಸಬಹುದುದಾಗಿದೆ ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.

ಸರ್ಕಾರಿ ಸೌಲಭ್ಯಗಳ ಬಗ್ಗೆ ಅರಿವು‌ ಮೂಡಿಸಿ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉಪಯೋಜನೆ ಕಾರ್ಯಕ್ರಮಗಳ ಅಡಿಯಲ್ಲಿ ಅರ್ಹ ಫಲಾನುಭವಿಗಳನ್ನು ಗುರುತಿಸಿ, ಸೌಲಭ್ಯಗಳನ್ನು ತಲುಪಿಸಬೇಕು ಎಂದು ಹೇಳಿದರಲ್ಲದೆ ಫಲಾನುಭವಿಗಳಿಗೆ ವಿವಿಧ ಯೋಜನೆಗಳನ್ನು ತಲುಪಿಸುವ ಮುನ್ನ, ಫಲಾನುಭವಿಗಳ ಆಯ್ಕೆಗೆ ನಿಗದಿತ ಮಾನದಂಡಗಳನ್ನು ಅನುಸರಿಸಬೇಕು ಎಂದರು.

ಎಂಥ ಅಂದ ಎಂಥ ಚೆಂದ ಬಂಧಮ್ಮ.. ನಿಮ್ಮ ನಿನ್ನ ನೋಡಲೆರಡು ಕಣ್ಣು ನಮಗೆ ಸಾಲದಮ್ಮಾ

ಡಾ. ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ನೀಡಲಾಗುತ್ತಿರುವ ಸಾಲ-ಸೌಲಭ್ಯಗಳನ್ನು ಜರೂರಾಗಿ ಮಂಜೂರು ಮಾಡಬೇಕು. ಹಕ್ಕುಪತ್ರ ವಿತರಣೆ ಬಾಕಿ ಇರುವ ಫಲಾನುಭವಿಗಳಿಗೆ ನಿಯಮಾನುಸಾರ ಹಕ್ಕುಪತ್ರಗಳನ್ನು ವಿತರಿಸಲು ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು. 

ಸಾರ್ವಜನಿಕರು ಭೇಟಿ ನೀಡುವ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಜಿಲ್ಲೆಯ ಎಲ್ಲಾ ತಹಶಿಲ್ದಾರ್ ಕಚೇರಿಗಳಲ್ಲಿ ಶೌಚಾಲಯ ಮತ್ತು ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸುವಂತೆ ಸೂಚಿಸಿರಲ್ಲದೆ, ಪೂರ್ವಾನುಮತಿ ಪಡೆಯದೇ ಸಭೆಗೆ ಗೈರಾದ ಅಧಿಕಾರಿಗಳಿಗೆ ನೊಟೀಸ್ ನೀಡುವಂತೆ ಸಮಾಜ ಕಲ್ಯಾಣಾಧಿಕಾರಿಗೆ ತಿಳಿಸಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ವಿಜಯ.ಈ.ರವಿಕುಮಾರ್ ಸೇರಿದಂತೆ ಎಲ್ಲಾ ತಾಲ್ಲೂಕುಗಳ ತಹಶೀಲ್ದಾರ್‌ಗಳು, ಡಿವೈಎಸ್ಪಿಗಳು, ಸಂಬಂಧಿಸಿದ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಜಿಲ್ಲಾ ಜಾಗೃತಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
 

click me!