Covid 19 Spike: ಪವಾಡಪುರುಷ ಸೇವಾಲಾಲ್ ಜಯಂತಿ ಉತ್ಸವ ರದ್ದು: ರೇಣುಕಾಚಾರ್ಯ!

By Suvarna NewsFirst Published Jan 15, 2022, 4:34 PM IST
Highlights

*ರಾಜ್ಯದಲ್ಲಿ ಕೊರೋನಾ ಪ್ರಕರಣ ಏರಿಕೆ
*ಸೇವಾಲಾಲ್ ಜಯಂತಿ ಉತ್ಸವ ರದ್ದು
*ದಾವಣೆಗೆರೆಯಲ್ಲಿ ರೇಣುಕಾಚಾರ್ಯ ಹೇಳಿಕೆ
 

ದಾವಣಗೆರೆ(ಜ. 15): ಕರ್ನಾಟಕದಲ್ಲಿ(Karnataka) ಕೊರೋನಾ ವೈರಸ್ (Corona Virus) ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಕೊರೋನಾ ಸೋಂಕು ಹತೋಟಿಗೆ ತರುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ತಿಂಗಳಾಂತ್ಯದವರೆಗೂ ನಿತ್ಯ ರಾತ್ರಿ ಕರ್ಫ್ಯೂ ಮತ್ತು ವಾರಾಂತ್ಯದಲ್ಲಿ ದಿನಪೂರ್ತಿ (ಸತತ 55 ಗಂಟೆ) ಕರ್ಫ್ಯೂ ಜಾರಿಗೊಳಿಸುತ್ತಿದೆ. ಕೋವಿಡ್ ಹೆಚ್ಚು ಹರಡುತ್ತಿರುವ ಹಿನ್ನಲೆ ಹಲವು ಜಾತ್ರೆ, ಧಾರ್ಮಿಕ ಸಭೆಗಳನ್ನು ರದ್ದು ಮಾಡಲಾಗಿದೆ. ಅದೇ ರೀತಿ ಸೇವಾಲಾಲ್ ಜಯಂತಿಯನ್ನು ರದ್ದು ಮಾಡಲಾಗಿದೆ ಎಂದು ದಾವಣಗೆರೆಯಲ್ಲಿ ಶಾಸಕ ಎಂಪಿ ರೇಣುಕಾಚಾರ್ಯ ಹೇಳಿದ್ದಾರೆ. 

ದೇಶದ ಬಂಜಾರ ಸಮುದಾಯದ ಏಕೈಕ ಸಂತ ಸೇವಾಲಾಲ್ ಜಯಂತ್ಯುತ್ಸವ  ಅದ್ದೂರಿಯಾಗಿ ನ್ಯಾಮತಿ ತಾಲ್ಲೂಕಿನ ಸೂರಗೊಂಡನಕೊಪ್ಪದ ಸೇವಾಲಾಲ್ ಜನ್ಮಸ್ಥಾನದಲ್ಲಿ ನಡೆಯುತ್ತದೆ. ಸೇವಾಲಾಲ್ ಜಯಂತಿ ನಿಮಿತ್ತ  ಲಕ್ಷಾಂತರ ಸೇವಾಲಾಲ್ ಮಾಲಾಧಾರಿಗಳು  ಪುಣ್ಯಕ್ಷೇತ್ರಕ್ಕೆ ಬರುತ್ತಾರೆ. ಹೀಗಾಗಿ ಕೊರೋನಾ ಹರಡುವಿಕೆ ಹೆಚ್ಚಾಗುವ ಸಾಧ್ಯತೆ ಇದೆ. ಈ ಬೆನ್ನಲ್ಲೆ ಜನರು ತಮ್ಮ ತಮ್ಮ ಗ್ರಾಮಗಳಲ್ಲಿ, ಮನೆಗಳಲ್ಲಿ ಸೇವಾಲಾಲ್ ಜಯಂತಿಯನ್ನು ಆಚರಿಸಬೇಕು ಎಂದು ರೇಣುಕಾಚಾರ್ಯ ಮನವಿ ಮಾಡಿದ್ದಾರೆ.

ಇದನ್ನೂ ಓದಿಹಾವೇರಿ: ಮುಚ್ಚಿದ ಗುಹೆಯಲ್ಲಿ ನಿರಾಹಾರಿಯಾಗಿ 62 ದಿನದ ಬಳಿಕ ಹೊರಬಂದ ಸ್ವಾಮೀಜಿ..!

" ಸೂರಗೊಂಡನಕೊಪ್ಪದಲ್ಲಿ ಯಾವುದೇ ಧಾರ್ಮಿಕ ಕಾರ್ಯಕ್ರಮಗಳು ನಡೆಯುವುದಿಲ್ಲ. ನಾನು ಹೋರಿ ಬೆದರಿಸುವ ಕಾರ್ಯಕ್ರಮಕ್ಕೆ ಭಾಗವಹಿಸಿದ್ದಕ್ಕೆ ಕ್ಷಮೆ ಕೇಳಿದ್ದೇನೆ. ಕಾಂಗ್ರೆಸ್ ನವರು ದುರಹಂಕಾರದಿಂದ ಮೆರೆಯುತ್ತಿದ್ದಾರೆ.  ನೀವು ಕೂಡ ಕ್ಷಮೆ ಕೇಳಿ ಅಂದರೆ ಮೊಂಡುತನ ಪ್ರದರ್ಶನ ಮಾಡಿದ್ದಾರೆ. ಕಾಂಗ್ರೆಸ್‌ನ ಪಾದಯಾತ್ರೆಗೆ ಕೇಸ್ ಹಾಕಿದ್ದರೆ ನನ್ನ ಮೇಲೆ ಹಾಕಿ. ಕಾನೂನಿನ ಮುಂದೆ ಎಲ್ಲರೂ ಸಮಾನರು" ಎಂದು ರೇಣುಕಾಚಾರ್ಯ ಹೇಳಿದ್ದಾರೆ.

2ನೇ ವಾರದ ವೀಕೆಂಡ್‌ ಕರ್ಫ್ಯೂ!

ರಾಜ್ಯದಲ್ಲಿ ಸತತ ಎರಡನೇ ವಾರವೂ ವೀಕೆಂಡ್‌ ಕರ್ಫ್ಯೂ ಜಾರಿಯಾಗಿದ್ದು, ಸೋಮವಾರ ಬೆಳಿಗ್ಗೆ 5 ಗಂಟೆವರೆಗೂ ತುರ್ತು ಸಂದರ್ಭ ಹೊರತುಪಡಿಸಿ ಇತರೆ ಎಲ್ಲಾ ಚಟುವಟಿಕೆಗಳಿಗೆ ನಿರ್ಬಂಧವಿರಲಿದೆ. ಕೊರೋನಾ ಸೋಂಕು ಹತೋಟಿಗೆ ತರುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ತಿಂಗಳಾಂತ್ಯದವರೆಗೂ ನಿತ್ಯ ರಾತ್ರಿ ಕರ್ಫ್ಯೂ ಮತ್ತು ವಾರಾಂತ್ಯದಲ್ಲಿ ದಿನಪೂರ್ತಿ (ಸತತ 55 ಗಂಟೆ) ಕರ್ಫ್ಯೂ ಜಾರಿಗೊಳಿಸುತ್ತಿದೆ. ಈಗಾಗಲೇ ಕಳೆದ ಒಂಬತ್ತು ದಿನಗಳಿಂದ (ಜ.6) ರಾತ್ರಿ ಕಫ್ರ್ಯೂ ಮತ್ತು ಕಳೆದ ವಾರಾಂತ್ಯದಲ್ಲಿ ಕರ್ಫ್ಯೂವಿತ್ತು. ಕಳೆದ ವಾರ ಮೊದಲ ವಾರಾಂತ್ಯದ ಕಫ್ರ್ಯೂ ಹಿನ್ನೆಲೆ ಪೊಲೀಸರು ಒಂದಿಷ್ಟುವಿನಾಯ್ತಿಗಳನ್ನು ನೀಡಿದ್ದರು. 

ಇದನ್ನೂ ಓದಿ: Weekend Curfew: ಕ್ಯಾರೇ ಎನ್ನದ ಬಳ್ಳಾರಿ ಜನ, ಎಪಿಎಂಸಿ ಮಾರುಕಟ್ಟೆಯಲ್ಲಿ ಜನ ಜಾತ್ರೆ!

ಆದರೆ, ಈ ವಾರ ಕೊರೋನಾ ಸೋಂಕು ಹೊಸ ಪ್ರಕರಣಗಳು 30 ಸಾವಿರ ಆಸುಪಾಸಿಗೆ ಹೆಚ್ಚಳವಾಗಿದೆ. ಇತ್ತೀಚೆಗೆ ನಡೆದ ಸಭೆಯಲ್ಲಿ ಮುಖ್ಯಮಂತ್ರಿಗಳು ನಿರ್ಬಂಧಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಜಿಲ್ಲಾಧಿಕಾರಿಗಳು, ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದ್ದರು. ಹೀಗಾಗಿ, ಮತ್ತಷ್ಟುಬಿಗಿ ನಿಯಮ ಜಾರಿಗೊಳಿಸಲು ಪೊಲೀಸ್‌ ಇಲಾಖೆ ಮುಂದಾಗಿದೆ. ಅಗತ್ಯ ಸೇವೆಗಳನ್ನು ಹೊರತು ಪಡಿಸಿ ಉಳಿದಂತೆ ಎಲ್ಲಾ ವಾಣಿಜ್ಯ ಚಟುವಟಿಕೆಗಳಿಗೆ ಸಂಪೂರ್ಣ ಕಡಿವಾಣ ಬೀಳಲಿದೆ.

ಕರ್ನಾಟಕದಲ್ಲಿ ಕೊರೋನಾ ಏರಿಕೆ

ಶುಕ್ರವಾರ ರಾಜ್ಯದಲ್ಲಿ 28,723 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಅಲ್ಲದೇ 14 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.ಈ ಮೂಲಕ ಕರ್ನಾಟಕದಲ್ಲಿ ಕೊರೋನಾ ಸೋಂಕಿತರ ಒಟ್ಟು ಸಂಖ್ಯೆ 31,53,247ಕ್ಕೆ ಏರಿಕೆಯಾಗಿದೆ. ಈ ಪೈಕಿ ಇದುವರೆಗೆ ಒಟ್ಟು 29,73,470 ಜನರು ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.  ರಾಜ್ಯದಲ್ಲಿ ಪಾಸಿಟಿವಿಟಿ ದರ  12.98ರಷ್ಟಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

click me!