ವಿಜಯಪುರ: ಅಂತ್ಯ ಸಂಸ್ಕಾರಕ್ಕೆ ಹೋದವರು ಮಸಣ ಸೇರಿದರು

By Web Desk  |  First Published May 18, 2019, 6:19 PM IST

ಸಂಬಂಧಿಕರೊಬ್ಬರ ಅಂತ್ಯ ಸಂಸ್ಕಾರಕ್ಕೆ ತೆರಳಿದ್ದವರು ದಾರುಣ ಅಪಘಾತಕ್ಕೆ ಈಡಾಗಿ ಮಸಣ ಸೇರಿದ್ದಾರೆ.


ವಿಜಯಪುರ[ಮೇ. 18]  ಟಾಟಾ ಏಸ್ ವಾಹನ ಪಲ್ಟಿಯಾಗಿದ್ದು ಸ್ಥಳದಲ್ಲೇ 5 ಜನರು ಸಾವನ್ನಪ್ಪಿದ್ದು 10 ಮಂದಿಗೆ ಗಂಭೀರ ಗಾಯಗಳಾಗಿವೆ. ಸಂಬಂಧಿಕರೊಬ್ಬರ ಅಂತ್ಯಕ್ರಿಯೆಗೆ ಬಂದು ವಾಪಸ್ ಹೊರಟಿದ್ದ ವೇಳೆ ಅವಘಡ ಸಂಭವಿಸಿದೆ.

ಸಂಬಂಧಿಯೊಬ್ಬರ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಂಡು ಹೊರಟವರು ಮಸಣ ಸೇರಿದ್ದಾರೆ. ಇಬ್ಬರು ಮಹಿಳೆಯರು, ಮೂವರು ಪುರುಷರು ಸಾವನ್ನಪ್ಪಿರುವ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.

Tap to resize

Latest Videos

ಮೃತರು ಬಾಗಲಕೋಟೆ ಜಿಲ್ಲೆ ಗುಳೇದಗುಡ್ಡ ತಾಲೂಕಿನ ಹಳದೂರ ಗ್ರಾಮದ ನಿವಾಸಿಗಳು. ಎಂಧು ಪತ್ತೆ ಮಾಡಲಾಗಿದೆ. ಗಾಯಾಳುಗಳಿಗೆ ಮುದ್ದೇಬಿಹಾಳ ತಾಲೂಕು ಆಸ್ಪತ್ರೆಯಲ್ಲಿ‌ ಚಿಕಿತ್ಸೆ ನೀಡಲಾಗುತ್ತಿದೆ.

click me!