ಮಂಗಳೂರು (ಅ.16): ಕಚೇರಿಯಲ್ಲಿ ಸಹೋದ್ಯೋಗಿ (Colleague) ಯುವತಿ ಮೇಲೆ ಲೈಂಗಿಕ ಕಿರುಕುಳ (Sexual harassment) ನೀಡುತ್ತಿದ್ದ ಆರೋಪದಲ್ಲಿ ದ.ಕ. ಜಿಲ್ಲಾ (Dakshina kannada) ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ (Minorities Development Corporation ) ಜಿಲ್ಲಾ ವ್ಯವಸ್ಥಾಪಕ ಮೊಹಮ್ಮದ್ ಫಾರೂಕ್(45) ಎಂಬಾತನನ್ನು ಪಾಂಡೇಶ್ವರ ಮಹಿಳಾ ಠಾಣೆ ಪೊಲೀಸರು (Police) ಬಂಧಿಸಿದ್ದಾರೆ.
19 ವರ್ಷದ ಯುವತಿ ಪಾಂಡೇಶ್ವರದ (Pandeshwara) ಜಿಲ್ಲಾ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಕಚೇರಿಯಲ್ಲಿ (Office) ಕೆಲಸಕ್ಕಿದ್ದಳು. ಆಕೆಯನ್ನು ಆರೋಪಿ ಲೈಂಗಿಕ ಕಿರುಕುಳ ನೀಡಲು ಯತ್ನಿಸಿ, ವಾಟ್ಸಪ್‌ನಲ್ಲಿ(Whatsapp) ನಗ್ನ ಚಿತ್ರಗಳನ್ನು ಕಳುಹಿಸಿ, ತನ್ನೊಂದಿಗೆ ಸಹಕರಿಸುವಂತೆ ಒತ್ತಾಯ ಪಡಿಸುತ್ತಿದ್ದ. ಅಲ್ಲದೆ, ನಿನ್ನ ನಗ್ನ ಚಿತ್ರವನ್ನು ಕಳುಹಿಸುವಂತೆ ಆರೋಪಿ ಒತ್ತಾಯಿಸುತ್ತಿದ್ದ. ಇದಕ್ಕೆ ಸೊಪ್ಪು ಹಾಕದ ಯುವತಿ, ಆತನಿಂದ ದೂರವಿದ್ದಳು. ಈ ನಡುವೆ ಕೆಲಸ ಮಾಡುತ್ತಿದ್ದ ಕಚೇರಿಯಲ್ಲಿ ಆರೋಪಿ ಆಕೆಯ ಮೈಗೆ ಕೈಹಾಕಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಬಳಿಕ ಕೆಲಸವನ್ನೇ (Work) ಬಿಟ್ಟು ತೆರಳಿದ್ದ ಯುವತಿ ಎರಡು ದಿನಗಳ ಹಿಂದೆ ಅಧಿಕಾರಿ ವಿರುದ್ಧ ಪಾಂಡೇಶ್ವರ ಮಹಿಳಾ ಠಾಣೆಗೆ ದೂರು (Complaint) ನೀಡಿದ್ದಾಳೆ.
undefined
ಯಾವುದು ಲೈಂಗಿಕ ಕಿರುಕುಳ? : ಯಾವಾಗ ದೂರು ನೀಡಬಹುದು..?
ಅಧಿಕಾರಿ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಪೊಲೀಸರು ಬುಧವಾರ ರಾತ್ರಿ ಮೊಹಮ್ಮದ್ ಫಾರೂಕ್‌ನನ್ನು ಬಂಧಿಸಿದ್ದಾರೆ. ಆತನ ವಿರುದ್ಧ 354 ಎ, 364 ಡಿ ಮತ್ತು 506 ಸೆಕ್ಷನ್ ಪ್ರಕಾರ ಕೇಸು ದಾಖಲಾಗಿದೆ. ಕಿರುಕುಳಕ್ಕೆ ಒಳಗಾದ ಸಂತ್ರಸ್ತೆ ಹೊರಗುತ್ತಿಗೆ ನೆಲೆಯಲ್ಲಿ ಪಾಂಡೇಶ್ವರದ ನಿಗಮದ ಕಚೇರಿಯಲ್ಲಿ ಕೆಲಸಕ್ಕೆ ಸೇರಿದ್ದಳು.
ಬಾಲಕಿ ಅತ್ಯಾಚಾರ ಕೇಸ್
ಕೆಲ ದಿನಗಳ ಹಿಂದಷ್ಟೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆಗೆ ತೆರಳುತ್ತಿದ್ದ 16 ವರ್ಷದ ಬಾಲಕಿಯನ್ನು ಕಾರಿನಲ್ಲಿ ಅಪಹರಿಸಿದ ತಂಡವೊಂದು, ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಬಂಟ್ವಾಳ(Bantwal) ಸಮೀಪದ ಅಮ್ಟಾಡಿ ಎಂಬಲ್ಲಿ ನಡೆದಿತ್ತು. 16 ವರ್ಷದ ಬಾಲಕಿ ನೀಡಿದ ದೂರಿನ ಮೇರೆಗೆ ಪೊಲೀಸರು ಪೋಕ್ಸೋ ಕಾಯ್ದೆಯಡಿ(Pocso Act) ಪ್ರಕರಣ ದಾಖಲಿಸಿ ನಾಲ್ವರು ದುರುಳರನ್ನು ಬಂಧಿಸಿದ್ದರು.
ಪಾಪಿ ಅಪ್ಪ: 6 ವರ್ಷದ ಮಗಳ ರೇಪ್ ಮಾಡಲಾಗಲಿಲ್ಲ ಎಂದು ಗುಪ್ತಾಂಗಕ್ಕೆ ಕೋಲು ಹಾಕಿದ!
ಬೆಳಗ್ಗೆ 7 ಗಂಟೆಯ ವೇಳೆಗೆ ಬಾಲಕಿ ಶಾಲೆಗೆ(School) ಹೋಗುತ್ತಿದ್ದಳು. ಈ ವೇಳೆ ಬಿಳಿ ಕಾರಿನಲ್ಲಿ ಬಂದ ಪರಿಚಿತನೊಬ್ಬ, ತನ್ನನ್ನು ಕಾರಿನಲ್ಲಿ ಹತ್ತಿಸಿಕೊಂಡು ಬಳಿಕ ಅಮ್ಟಾಡಿಯ ನಿರ್ಜನ ಪ್ರದೇಶವೊಂದಕ್ಕೆ ಕರೆದೊಯ್ದ. ಜೊತೆಗಿದ್ದವರೊಂದಿಗೆ ಸೇರಿ ಅತ್ಯಾಚಾರ ಎಸಗಿದ ಎಂದು ಬಾಲಕಿ ದೂರು ನೀಡಿದ್ದಳು.