ಜ.1ರಂದು ಮೆಜೆಸ್ಟಿಕ್‌ನ ಮೆಟ್ರೋ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸಂತ್ರಸ್ತೆ ಮೆಟ್ರೋ ರೈಲು ನಿಲ್ದಾಣದ ಭದ್ರತಾ ಸಿಬ್ಬಂದಿಗೆ ಘಟನೆ ಬಗ್ಗೆ ಮಾಹಿತಿ ನೀಡಿದ್ದು, ಭದ್ರತಾ ಸಿಬ್ಬಂದಿ ಆ ವ್ಯಕ್ತಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಬೆಂಗಳೂರು(ಜ.08): ನಮ್ಮ ಮೆಟ್ರೋ ರೈಲು ನಿಲ್ದಾಣದಲ್ಲಿ ವ್ಯಕ್ತಿಯೊಬ್ಬ ಯುವತಿಯ ಖಾಸಗಿ ಅಂಗಾಂಗ ಸ್ಪರ್ಶಿಸಿ ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿಯನ್ನು ಸಿಬ್ಬಂದಿಯೇ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಕೇಳಿ ಬಂದಿದೆ.
ಜ.1ರಂದು ಮೆಜೆಸ್ಟಿಕ್‌ನ ಮೆಟ್ರೋ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸಂತ್ರಸ್ತೆ ಮೆಟ್ರೋ ರೈಲು ನಿಲ್ದಾಣದ ಭದ್ರತಾ ಸಿಬ್ಬಂದಿಗೆ ಘಟನೆ ಬಗ್ಗೆ ಮಾಹಿತಿ ನೀಡಿದ್ದು, ಭದ್ರತಾ ಸಿಬ್ಬಂದಿ ಆ ವ್ಯಕ್ತಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಬುದ್ಧಿಮಾಂದ್ಯ ಮಗಳ ಮೇಲೆ ತಂದೆಯಿಂದಲೇ ನಿರಂತರ ಅತ್ಯಾಚಾರ; ಗರ್ಭಾವತಿಯಾದ ಬಳಿಕ ಪ್ರಕರಣ ಬಯಲಿಗೆ!
ಆ ವ್ಯಕ್ತಿ ಪೊಲೀಸರ ಬಳಿ ತನ್ನ ತಪ್ಪೊಪ್ಪಿಕೊಂಡಿದ್ದು, ಮುಂದೆ ಹೀಗೆ ನಡೆದುಕೊಳ್ಳುವುದಿಲ್ಲ ಎಂದು ಕ್ಷಮೆಯಾಚಿಸಿದ್ದಾನೆ ಎಂದು ತಿಳಿದು ಬಂದಿದೆ. ಈ ಘಟನೆ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ ಎಂದು ಉಪ್ಪಾರಪೇಟೆ ಠಾಣೆ ಪೊಲೀಸರು ತಿಳಿಸಿದ್ದಾರೆ.