
ಮೈಸೂರು(ಆ.01): ಹೂಬ್ಲೋಟ್ ವಾಚ್ ವಿವಾದ ಮುಗಿದು ಹೋದ ಕಥೆ ಮತ್ಯಾಕೆ ಅದು? ನಾನು ಯಡಿಯೂರಪ್ಪ ಹಳೆ ಕೇಸ್ ಬಗ್ಗೆ ಮಾತಾಡ್ಲಾ? ಎನ್ನುವ ಮೂಲಕ ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಅವರು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.
"
ಮೈಸೂರಿನಲ್ಲಿ ಮಾತನಾಡಿದ ಅವರು, ವಾಚ್ ವಿಚಾರ ಮುಗಿದು ಹೋಗಿದೆ. ನಾನು ಸರ್ಕಾರಕ್ಕೆ ಆ ವಾಚ್ ವಾಪಸ್ ಕೊಟ್ಟಿದ್ದೇನೆ. ಎಸಿಬಿ ತನಿಖೆಯಾಗಿ ಕ್ಲೀನ್ ಚಿಟ್ ಸಿಕ್ಕಿದೆ. ಇದು ಜನರನ್ನ ದಾರಿ ತಪ್ಪಿಸುವ ಕೆಲಸ. ನಾನು ವಾಚ್ ಪ್ರಕರಣದ ಬಗ್ಗೆ ಮಾತನಾಡುವುದಿಲ್ಲ ಎಂದು ಹೇಳಿದರು.
ನೂತನ ಶಿಕ್ಷಣ ನೀತಿಯಿಂದ ಉದ್ಯೋಗದಾತರ ಸೃಷ್ಟಿ: ಮೋದಿ
ಜೈಲಿಗೆ ಹೋಗಿ ಬಂದ ಡಿಕೆಶಿ ಪಕ್ಕದಲ್ಲಿ ಸಿದ್ದರಾಮಯ್ಯ ಕುಳಿತಿದ್ದಾರೆಂಬ ಬಿಜೆಪಿ ನಾಯಕರ ಹೇಳಿಕೆಗೆ ಗರಂ ಆದ ಸಿದ್ದರಾಮಯ್ಯ ಅವರು, ಇವರಿಗೇನು ಬಹಳ ನೈತಿಕ ಇದಿಯಾ? ನಾನಿಗ ಅದರ ಬಗ್ಗೆ ಮಾತನಾಡೋಲ್ಲ. ಅದು ರಾಜಕೀಯ ದುರುದ್ದೇಶದಿಂದ ಹಾಕಿರುವ ಕೇಸ್. ಈ ಸಂದರ್ಭದಲ್ಲಿ ಅದರ ಅವಶ್ಯಕತೆ ಇಲ್ಲ ಎಂದರು.
ಬೆಂಗಳೂರಿನ ದೊಡ್ಡ ಕೋವಿಡ್ ಆರೈಕೆ ಕೇಂದ್ರದಲ್ಲಿ ಬೆರಳೆಣಿಕೆ ಸೋಂಕಿತರು..!
ಸರ್ಕಾರದ ಮೇಲೆ ಕೋವಿಡ್ ಭ್ರಷ್ಟಾಚಾರ ಆರೋಪಕ್ಕೆ ನೋಟಿಸ್ ನೀಡಿದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ನೋಟಿಸ್ ಬಂಡವಾಳ ಏನ್ ನನಗೆ ಗೊತ್ತಿಲ್ವಾ? ನಾನು ಲಾಯರ್ ತಾನೆ? ನಾನೇನು ನೋಟಿಸ್‌ಗೆ ಹೆದರಿಕೊಳ್ತಿನಾ? ಅವನ್ಯಾರೋ ನೋಟಿಸ್ ಕೊಟ್ಟಿದ್ದಾನೆ. ನಾನು ಆರೋಪ ಮಾಡಿರೋದು ಸರ್ಕಾರದ ಮೇಲೆ. ಯಾರೋ ನೋಟಿಸ್ ಕೊಟ್ಟರೆ ಏನು ಪ್ರಯೋಜನ ಎಂದು ಕಿಡಿಕಾರಿದರು.