ಬೆಳಗಾವಿ: ಸಾವಿನಲ್ಲೂ ಸಾರ್ಥಕತೆ ಮೆರೆದ ಶಂಕರ ಗಂಭೀರ

By Kannadaprabha News  |  First Published Nov 17, 2023, 1:00 AM IST

ತಮ್ಮ ದೇಹವನ್ನು ವೈದ್ಯಕೀಯ ಅಧ್ಯಯನಕ್ಕೆ ದಾನ ನೀಡುವ ಮೂಲಕ ಅವರು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಇವರು ಬೈಲಹೊಂಗಲದ ರಾಮಣ್ಣವರ ಚಾರಿಟೇಬಲ್ ಟ್ರಸ್ಟ್‌ಗೆ ತಮ್ಮ ದೇಹದಾನದ ಸಂಕಲ್ಪ ಮಾಡಿದ್ದರು. ಅವರ ಇಚ್ಛೆಯಂತೆ ಮೃತದೇಹವನ್ನು ಟ್ರಸ್ಟ್‌ಗೆ ಹಸ್ತಾಂತರಿಸಲಾಯಿತು. 

ಖಾನಾಪುರ(ನ.17):  ತಾಲೂಕಿನ ಹಲಸಿ ಗ್ರಾಮದ ನಿವಾಸಿ, ನಿವೃತ್ತ ಪ್ರೌಢಶಾಲಾ ಶಿಕ್ಷಕ ಶಂಕರ ರಾಮಜಿ ಗಂಭೀರ (84) ಬುಧವಾರ ನಿಧನರಾದರು. ಮೃತರು ಪತ್ನಿ, ಮೂವರು ಪುತ್ರರು ಸೇರಿದಂತೆ ಅಪಾರ ಬಂಧು ಬಳಗ ಅಗಲಿದ್ದಾರೆ.

ತಮ್ಮ ದೇಹವನ್ನು ವೈದ್ಯಕೀಯ ಅಧ್ಯಯನಕ್ಕೆ ದಾನ ನೀಡುವ ಮೂಲಕ ಅವರು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಇವರು ಬೈಲಹೊಂಗಲದ ರಾಮಣ್ಣವರ ಚಾರಿಟೇಬಲ್ ಟ್ರಸ್ಟ್‌ಗೆ ತಮ್ಮ ದೇಹದಾನದ ಸಂಕಲ್ಪ ಮಾಡಿದ್ದರು. ಅವರ ಇಚ್ಛೆಯಂತೆ ಮೃತದೇಹವನ್ನು ಟ್ರಸ್ಟ್‌ಗೆ ಹಸ್ತಾಂತರಿಸಲಾಯಿತು. 

Latest Videos

undefined

ಎಕರೆಗೆ 4 ಕೋಟಿ ಪರಿಹಾರ ನೀಡುವಂತೆ ಪ್ರಸ್ತಾವನೆ ಸಲ್ಲಿಸಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಟ್ರಸ್ಟ್ ಪರವಾಗಿ ಡಾ.ಮಹಾಂತೇಶ ರಾಮಣ್ಣವರ ಮೃತದೇಹವನ್ನು ತಮ್ಮ ಸುಪರ್ದಿಗೆ ತೆಗೆದುಕೊಂಡರು. ಈ ಸಂದರ್ಭದಲ್ಲಿ ಮೃತರ ಸಂಬಂಧಿಗಳು, ಹಲಸಿ ಗ್ರಾಮದ ಹಿರಿಯರು ಇದ್ದರು.

click me!