'ಯಡಿಯೂರಪ್ಪ ನೇತೃತ್ವದಲ್ಲೇ ಮುಂದಿನ ಚುನಾವಣೆ'

Kannadaprabha News   | Asianet News
Published : Oct 27, 2020, 12:21 PM IST
'ಯಡಿಯೂರಪ್ಪ ನೇತೃತ್ವದಲ್ಲೇ ಮುಂದಿನ ಚುನಾವಣೆ'

ಸಾರಾಂಶ

ಕಾಂಗ್ರೆಸ್‌ನ ಐವರು ಶಾಸಕರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂಬ ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದು ಸತ್ಯಕ್ಕೆ ಸಮೀಪವಾಗಿದೆ. ಕಾಂಗ್ರೆಸ್‌ ಅಷ್ಟೇ ಅಲ್ಲ, ಇನ್ನೂ ಬೇರೆ ಬೇರೆ ಪಕ್ಷಗಳ ನಾಯಕರು ಬಿಜೆಪಿ ಸೇರಲಿದ್ದಾರೆ ಎಂದ ಶಂಕರಗೌಡ ಪಾಟೀಲ

ಬೆಳಗಾವಿ(ಅ.27): ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ಕೆಲವರು ಹಗಲುಗನಸು ಕಾಣುತ್ತಿದ್ದಾರೆ. ಆದರೆ ಮುಂದಿನ ಮೂರು ವರ್ಷಗಳ ಕಾಲ ಯಡಿಯೂರಪ್ಪನವರೇ ಸಿಎಂ ಆಗಿ ಮುಂದುವರಿಯಲಿದ್ದಾರೆ. ಅಲ್ಲದೇ ಮುಂಬರುವ ಚುನಾವಣೆಯನ್ನೂ ಅವರ ನೇತೃತ್ವದಲ್ಲಿಯೇ ಎದುರಿಸಲಾಗುವುದು ಎಂದು ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಶಂಕರಗೌಡ ಪಾಟೀಲ ಸ್ಪಷ್ಟಪಡಿಸಿದ್ದಾರೆ. 

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕಾಶ ಹುಕ್ಕೇರಿ ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳುವ ಕುರಿತು ರಾಜ್ಯಾಧ್ಯಕ್ಷ ನಳೀನಕುಮಾರ ಕಟೀಲ್‌, ಪ್ರಧಾನ ಕಾರ್ಯದರ್ಶಿ ಸಂಘಟನಾ ಮಹಾಮಂತ್ರಿ ಅರುಣ ಸೇರಿ ಹಿರಿಯ ನಾಯಕರು ನಿರ್ಧಾರ ಕೈಗೊಳ್ಳುತ್ತಾರೆ ಎಂದರು. 

ಕೈ ಮುಖಂಡನಿಂದ ಬಿಜೆಪಿ ಪರ ಬ್ಯಾಟಿಂಗ್‌! ಪಕ್ಷಾಂತರದ ಸುಳಿವು..?

ಕಾಂಗ್ರೆಸ್‌ನ ಐವರು ಶಾಸಕರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂಬ ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದು ಸತ್ಯಕ್ಕೆ ಸಮೀಪವಾಗಿದೆ. ಕಾಂಗ್ರೆಸ್‌ ಅಷ್ಟೇ ಅಲ್ಲ, ಇನ್ನೂ ಬೇರೆ ಬೇರೆ ಪಕ್ಷಗಳ ನಾಯಕರು ಬಿಜೆಪಿ ಸೇರಲಿದ್ದಾರೆ ಎಂದು ತಿಳಿಸಿದರು.
 

PREV
click me!

Recommended Stories

'ನಿಮ್ಮ ಸುರಕ್ಷತೆ ನನಗೂ ಮುಖ್ಯ..' ಮಹಿಳಾ ಪ್ರಯಾಣಿಕರ ಮನ ಗೆದ್ದ ಆಟೋ ಚಾಲಕ, ಸಂದೇಶ ವೈರಲ್ ಮಾಡಿದ ಬೆಂಗಳೂರು ಪೊಲೀಸರು!
ಕಾರವಾರ: ಉಂಡ‌ ಮನೆಗೆ ದ್ರೋಹ; ಮನೆ ಕೆಲಸದವನಿಂದಲೇ ಲಕ್ಷಾಂತರ ರೂಪಾಯಿ ಕದ್ದವನ ಬಂಧನ