ಅಂಬುತೀರ್ಥ ಪ್ರಸಿದ್ಧ ಪ್ರವಾಸಿ ಕ್ಷೇತ್ರವಾಗಲಿ; ಸಚಿವ ಈಶ್ವರಪ್ಪ

By Kannadaprabha NewsFirst Published Jun 29, 2020, 8:44 AM IST
Highlights

ಕಾವೇರಿ ನದಿ ಉಗಮ ಸ್ಥಾನ ತಲಕಾವೇರಿಯನ್ನು ಅಭಿವೃದ್ಧಿಪಡಿಸಿದ ಮಾದರಿಯಲ್ಲಿಯೇ ಶರಾವತಿ ನದಿ ಉಗಮ ಸ್ಥಾನವಾಗಿರುವ ಅಂಬುತೀರ್ಥವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲು ಸರ್ಕಾರ ಮುಂದಾಗಿದೆ. ಶಿವಮೊಗ್ಗ ಜಿಲ್ಲಾ ಉಸ್ತುವರಿ ಸಚಿವ ಕೆ.ಎಸ್. ಈಶ್ವರಪ್ಪ ಶಂಕುಸ್ಥಾಪನೆ ನೆರವೇರಿಸಿದರು. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ಶಿವಮೊಗ್ಗ(ಜೂ.29): ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಇತಿಹಾಸ ಪ್ರಸಿದ್ಧ ಶರಾವತಿ ನದಿ ಉಗಮಸ್ಥಾನ ಅಂಬುತೀರ್ಥದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಭಾನುವಾರ ಚಾಲನೆ ದೊರಕಿದ್ದು, ಆದಷ್ಟು ಶೀಘ್ರದಲ್ಲಿ ಭಗವಂತ ಹಾಗೂ ಭಕ್ತರನ್ನು ತೃಪ್ತಿಪಡಿಸುವ ರೀತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್‌. ಈಶ್ವರಪ್ಪ ಹೇಳಿದರು.

ಕಾಮಗಾರಿಗಳಿಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ಯೋಜನೆಗೆ ಯಾವುದೇ ಹಣಕಾಸಿನ ಅಡೆತಡೆಯಿರುವುದಿಲ್ಲ. ಇದೊಂದು ಪ್ರವಾಸಿ ತಾಣವಾಗಿಯೂ ರಾಜ್ಯದ ಭೂಪಟದಲ್ಲಿ ಗುರುತಿಸಿಕೊಳ್ಳುವಂತಾಗಬೇಕು. ಈ ಪುಣ್ಯಸ್ಥಳಕ್ಕೆ ಹೆಚ್ಚು ಹೆಚ್ಚು ಜನರು ಬರುವಂತಾಗಬೇಕೆಂದರು. ಚಾಲನೆಯಲ್ಲಿ ಮುಜರಾಯಿ ಖಾತೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹಾಗೂ ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ ಅವರೂ ಪಾಲ್ಗೊಂಡಿದ್ದರು.

ಹಾವೇರಿ ಮೆಡಿಕಲ್‌ ಕಾಲೇಜು ಕಟ್ಟಡ ಕಾಮಗಾರಿ ಶೀಘ್ರ ಆರಂಭ: ಸಚಿವ ಬೊಮ್ಮಾಯಿ

ಕಾವೇರಿ ನದಿ ಉಗಮ ಸ್ಥಾನ ತಲಕಾವೇರಿಯನ್ನು ಅಭಿವೃದ್ಧಿಪಡಿಸಿದ ಮಾದರಿಯಲ್ಲಿಯೇ ಶರಾವತಿ ನದಿ ಉಗಮ ಸ್ಥಾನವಾಗಿರುವ ಅಂಬುತೀರ್ಥವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲು ಸರ್ಕಾರ ಮುಂದಾಗಿದ್ದು, ಈ ನಿಟ್ಟಿನಲ್ಲಿ ಈಗಾಗಲೇ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಸಭೆ ನಡೆದಿದೆ. ಅಲ್ಲದೆ ಕೈಗೊಳ್ಳಬೇಕಿರುವ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಈಗಾಗಲೇ ಅನುಮೋದನೆ ದೊರಕಿದೆ. ಪ್ರಥಮ ಹಂತದಲ್ಲಿ ಸುಮಾರು 10 ರಿಂದ 15 ಕೋಟಿ ರು. ವೆಚ್ಚದಲ್ಲಿ ನದಿಯ ಉಗಮ ಸ್ಥಾನದ ಹಿಂಭಾಗದಲ್ಲಿ ತಡೆಗೋಡೆ ನಿರ್ಮಾಣ, ಸಮುದಾಯ ಭವನ ನಿರ್ಮಾಣ, ಅಂಬುತೀರ್ಥ ಕೆರೆ ಸುತ್ತಲೂ ತಡೆಗೋಡೆ ನಿರ್ಮಾಣ, ಪುಷ್ಕರಣಿ ನಿರ್ಮಾಣ, ದೇಗುಲ ಪುನರ್‌ ನಿರ್ಮಾಣ ಕಾರ್ಯ ಸೇರಿ ಹಲವಾರು ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತದೆ.

ಈ ಸಂದರ್ಭದಲ್ಲಿ ತೀರ್ಥಹಳ್ಳಿ ಕ್ಷೇತ್ರ ಶಾಸಕ ಆರಗ ಜ್ಞಾನೇಂದ್ರ, ಅ.ಪ. ರಾಮಭಟ್‌ ಮತ್ತಿತರರು ಉಪಸ್ಥಿತರಿದ್ದರು.
 

click me!