ಹೇಮಾವತಿ ನೀರಿಗಾಗಿ ಸಿಎಂ ಬಳಿಗೆ ನಿಯೋಗ

By Kannadaprabha NewsFirst Published Sep 9, 2020, 8:56 AM IST
Highlights

ಹೇಮಾವತಿ ನೀರಿಗಾಗಿ ಬಿಜೆಪಿ ಮುಖಂಡರ ನೇತೃತ್ವದಲ್ಲಿ ನಿಯೋಗ ಒಂದು ಮುಖ್ಯಮಂತ್ರಿ ಯಡಿಯೂರಪ್ಪ ಭೇಟಿಯಾಗಿ ಮನವಿ ಮಾಡಿದೆ.

 ಬೆಂಗಳೂರು (ಸೆ.09):  ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸಜ್ಜಾಗುತ್ತಿರುವ ಬಿಜೆಪಿಯ ಮಾಜಿ ಶಾಸಕ ಸುರೇಶ್‌ ಗೌಡ ನೇತೃತ್ವದಲ್ಲಿ ಶಿರಾ ಕ್ಷೇತ್ರದ ಜನರು ಹೇಮಾವತಿ ನೀರನ್ನು ಮದಲೂರು ಕೆರೆಗೆ ಹರಿಸುವಂತೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.

ದೇಶದ ಮೊಟ್ಟ ಮೊದಲ ಏರ್ ಆ್ಯಂಬುಲೆನ್ಸ್‌ಗೆ ಯಡಿಯೂರಪ್ಪ ಚಾಲನೆ

ಮುಖ್ಯಮಂತ್ರಿಗಳ ಗೃಹಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ನೀರು ಬಿಡುವಂತೆ ಮನವಿ ಮಾಡಿದರು. ಹಲವು ದಿನಗಳಿಂದ ಹೇಮಾವತಿ ನೀರನ್ನು ಮದಲೂರು ಕೆರೆಗೆ ಹರಿಸಬೇಕು ಎಂದು ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ಸ್ಥಳೀಯರಿಗೆ ಕುಡಿಯುವ ನೀರಿನ ಸಮಸ್ಯೆಯಾಗುತ್ತಿದೆ. ಹೀಗಾಗಿ ಮದಲೂರು ಕೆರೆಗೆ ನೀರು ಹರಿಸಿದರೆ ಸುತ್ತಮುತ್ತಲ ಗ್ರಾಮಸ್ಥರಿಗೆ ಕುಡಿಯುವ ನೀರು ಲಭ್ಯವಾಗಲಿದೆ ಎಂದು ಕೋರಿದರು.

ಮೋದಿ ಸಂಕಲ್ಪದ ರಥಕ್ಕೆ ಬಿಎಸ್‌ವೈ ಹೆಗಲು: ವಿಜಯೇಂದ್ರ ...

ಉಪ ಚುನಾವಣೆ ಘೋಷಣೆಯಾಗುವ ವೇಳೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ಉಪಚುನಾವಣೆಗೆ ಟಿಕೆಟ್‌ ಪಡೆದುಕೊಳ್ಳುವ ಉದ್ದೇಶದಿಂದ ಸ್ಥಳೀಯರೊಂದಿಗೆ ಸುರೇಶ್‌ ಗೌಡ ಆಗಮಿಸಿದರು ಎಂಬ ಮಾತುಗಳು ಕೇಳಿಬಂದಿವೆ. ಹೇಮಾವತಿ ನೀರು ಹರಿಸಿ ಚುನಾವಣೆ ಲಾಭ ಪಡೆಯುವ ಉದ್ದೇಶವನ್ನು ಸುರೇಶ್‌ ಗೌಡ ಹೊಂದಿದ್ದಾರೆ ಎನ್ನಲಾಗಿದೆ. ಉಪಚುನಾವಣೆಯಲ್ಲಿ ಶಿರಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಸಿದ್ಧತೆ ನಡೆಸುತ್ತಿದ್ದಾರೆ. ಹೀಗಾಗಿ ನೀರು ಹರಿಸುವ ವಿಚಾರವನ್ನಿಟ್ಟುಕೊಂಡಿದ್ದಾರೆ ಎಂದು ಹೇಳಲಾಗಿದೆ.

click me!