ಜಿಲ್ಲಾ ಕೇಂದ್ರಕ್ಕೆ ಶಿರಾ ನಗರ ಸೂಕ್ತ: ಡಾ.ರಾಜೇಶ್ ಗೌಡ

By Kannadaprabha News  |  First Published Sep 8, 2023, 8:23 AM IST

ತುಮಕೂರು ಜಿಲ್ಲೆಯನ್ನು ವಿಭಜನೆ ಮಾಡಿ ಎರಡು ಜಿಲ್ಲೆ ಮಾಡಿದರೆ ಜಿಲ್ಲಾ ಕೇಂದ್ರಕ್ಕೆ ಅತ್ಯಂತ ಸೂಕ್ತವಾದ ಸ್ಥಳ ಶಿರಾ ನಗರವಾಗಿದೆ. ತುಮಕೂರಿನ ನಂತರ ಶಿರಾ ನಗರವು ಅತ್ಯಂತ ವೇಗವಾಗಿ ಬೆಳೆಯುತ್ತಿರುವುದರಿಂದ ಶಿರಾ ನಗರವನ್ನು ಜಿಲ್ಲಾ ಕೇಂದ್ರವನ್ನಾಗಿ ಘೋಷಣೆ ಮಾಡಬೇಕು ಎಂದು ಮಾಜಿ ಶಾಸಕ ಡಾ.ಸಿ.ಎಂ.ರಾಜೇಶ್ ಗೌಡ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ್, ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರಿಗೆ ಮನವಿ ಮಾಡಿದ್ದಾರೆ.


  ಶಿರಾ :  ತುಮಕೂರು ಜಿಲ್ಲೆಯನ್ನು ವಿಭಜನೆ ಮಾಡಿ ಎರಡು ಜಿಲ್ಲೆ ಮಾಡಿದರೆ ಜಿಲ್ಲಾ ಕೇಂದ್ರಕ್ಕೆ ಅತ್ಯಂತ ಸೂಕ್ತವಾದ ಸ್ಥಳ ಶಿರಾ ನಗರವಾಗಿದೆ. ತುಮಕೂರಿನ ನಂತರ ಶಿರಾ ನಗರವು ಅತ್ಯಂತ ವೇಗವಾಗಿ ಬೆಳೆಯುತ್ತಿರುವುದರಿಂದ ಶಿರಾ ನಗರವನ್ನು ಜಿಲ್ಲಾ ಕೇಂದ್ರವನ್ನಾಗಿ ಘೋಷಣೆ ಮಾಡಬೇಕು ಎಂದು ಮಾಜಿ ಶಾಸಕ ಡಾ.ಸಿ.ಎಂ.ರಾಜೇಶ್ ಗೌಡ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ್, ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರಿಗೆ ಮನವಿ ಮಾಡಿದ್ದಾರೆ.

ಮಹಾನಗರ ಪಾಲಿಕೆ ಬಿಟ್ಟರೆತುಮಕೂರು ಜಿಲ್ಲೆಯನ್ನು ವಿಭಜನೆ ಮಾಡಿ ಎರಡು ಜಿಲ್ಲೆ ಮಾಡಿದರೆ ಜಿಲ್ಲಾ ಕೇಂದ್ರಕ್ಕೆ ಅತ್ಯಂತ ಸೂಕ್ತವಾದ ಸ್ಥಳ ಶಿರಾ ನಗರವಾಗಿದೆ. ತುಮಕೂರಿನ ನಂತರ ಶಿರಾ ನಗರವು ಅತ್ಯಂತ ವೇಗವಾಗಿ ಬೆಳೆಯುತ್ತಿರುವುದರಿಂದ ಶಿರಾ ನಗರವನ್ನು ಜಿಲ್ಲಾ ಕೇಂದ್ರವನ್ನಾಗಿ ಘೋಷಣೆ ಮಾಡಬೇಕು ಎಂದು ಮಾಜಿ ಶಾಸಕ ಡಾ.ಸಿ.ಎಂ.ರಾಜೇಶ್ ಗೌಡ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ್, ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರಿಗೆ ಮನವಿ ಮಾಡಿದ್ದಾರೆ.ಹಾಗೂ ತಿಪಟೂರಿನಲ್ಲಿ ಮಾತ್ರ ನಗರಸಭೆ ಇದ್ದು, ತುಮಕೂರಿನಲ್ಲಿಯೇ ಶಿರಾ ಎರಡನೇ ಅತಿ ದೊಡ್ಡ ತಾಲೂಕಾಗಿದೆ. ಜನಸಂಖ್ಯೆಯಲ್ಲೂ ಹೆಚ್ಚಿದೆ. ಜಿಲ್ಲಾ ಕೇಂದ್ರಕ್ಕೆ ಬೇಕಾದ ಅಗತ್ಯ ಸಂಪರ್ಕ ವ್ಯವಸ್ಥೆ ಇದೆ. ಶಿರಾ ತಾಲೂಕಿನ ಮೂಲಕ ರಾ.ಹೆ.48, ರಾ.ಹೆ. 234 ಹಾಗೂ ಆಂಧ್ರಪ್ರದೇಶದ ಅಮರಾವತಿಯಿಂದ ಶಿರಾವರೆಗೂ ರಸ್ತೆ ಸಂಪರ್ಕದ ಕಾಮಗಾರಿ ನಡೆಯುತ್ತಿದೆ. ಶಿರಾ ತಾಲೂಕಿನಲ್ಲಿ ಉದ್ದೇಶಿತ ವಿಮಾನ ನಿಲ್ದಾಣವನ್ನು ನಿರ್ಮಿಸಲು ಯೋಜಿಸಲಾಗಿದೆ. ಹಾಗೂ ತುಮಕೂರು-ದಾವಣಗೆರೆ ರೈಲ್ವೆ ಮಾರ್ಗದ ಕಾಮಗಾರಿಯನ್ನು ಪ್ರಾರಂಭಿಸಲಾಗುತ್ತಿದೆ. ಈಗಿರುವ ಕೈಗಾರಿಕಾ ವಲಯವನ್ನು ಬಿಟ್ಟು ತಾಲೂಕಿನ ಸೀಬಿ ಬಳಿಯೂ ಕೈಗಾರಿಕೆಗಾಗಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗುತ್ತಿದೆ.

Tap to resize

Latest Videos

ನೀರಾವರಿ ಯೋಜನೆಗಳಲ್ಲಿ ಹೇಮಾವತಿ ನೀರು ಈಗಾಗಲೇ ಹರಿಯುತ್ತಿದೆ. ಭದ್ರಾ ಮೇಲ್ದಂಡೆ ಕಾಮಗಾರಿ ಶೇ. 90 ರಷ್ಟು ಕಾಮಗಾರಿ ಮುಗಿದಿದೆ. ಮುಂದಿನ ದಿನಗಳಲ್ಲಿ ಎತ್ತಿನಹೊಳೆ ಯೋಜನೆಯಿಂದಲೂ ನೀರು ಸಿಗಲಿದೆ. ಹಾಗಾಗಿ ನೀರಿನ ಸಮಸ್ಯೆಯೂ ಉದ್ಭವಿಸುವುದಿಲ್ಲ. ಈಗಾಗಲೇ ಜಿಲ್ಲಾ ಕಚೇರಿಗೆ ಬೇಕಾದ ಮಿನಿ ವಿಧಾನಸೌಧವನ್ನು ವಿಶಾಲವಾದ ಪ್ರದೇಶದಲ್ಲಿ ನಿರ್ಮಿಸಲಾಗಿದೆ. ಇದರ ಜೊತೆಗೆ ಶಿರಾ ಸುತ್ತಮುತ್ತ ಸಾವಿರಾರು ಎಕರೆ ಸರಕಾರಿ ಭೂಮಿ ಇದೆ. ಮಧುಗಿರಿ, ಪಾವಗಡ, ಚಿಕ್ಕನಾಯಕನಹಳ್ಳಿ ತಾಲೂಕುಗಳಿಗೆ ಕೇಂದ್ರ ಸ್ಥಾನದಲ್ಲಿರುವ ಶಿರಾ ತಾಲೂಕನ್ನು ಜಿಲ್ಲಾ ಕೇಂದ್ರವನ್ನಾಗಿ ಮಾಡಿದರೆ ಸಾರ್ವಜನಿಕರ ಕೆಲಸ ಕಾರ್ಯಗಳು ಸುಗಮವಾಗಿ ನಡೆಯಲು ಸಾಧ್ಯವಾಗುತ್ತದೆ. ಆದ್ದರಿಂದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಈಗಾಗಲೇ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಹೊಂದಿರುವ ಶಿರಾ ನಗರವನ್ನು ಜಿಲ್ಲಾ ಕೇಂದ್ರವನ್ನಾಗಿ ಘೋಷಣೆ ಮಾಡಬೇಕೆಂದು ಮನವಿ ಮಾಡಿದ್ದಾರೆ.

click me!