ಅನಿರ್ದಿಷ್ಠಾವಧಿವರೆಗೆ ಶಿರಾಡಿ ಘಾಟ್ ರಸ್ತೆ ಬಂದ್ : ಹಾಸನ ಎಸ್ಪಿ ಹರಿರಾಂ ಶಂಕರ್ ಆದೇಶ

By Suvarna News  |  First Published Jul 15, 2022, 9:20 PM IST

ಶಿರಾಡಿಘಾಟ್ ರಸ್ತೆಯಲ್ಲಿ ಇಂದು ಮತ್ತೆ ಭೂಕುಸಿತ ಉಂಟಾಗಿದೆ. ಸಕಲೇಶಪುರ ತಾಲೂಕಿನ ದೋಣಿಗಾಲ್ ಬಳಿ ರಸ್ತೆಯ ಒಂದು ಬದಿ ಕುಸಿದಿದೆ. ಮಳೆ ಮುಂದುವರಿದಿರುವುದರಿಂದ ರಸ್ತೆ ಮತ್ತಷ್ಟು ಕುಸಿಯುವ ಆತಂಕ ಹಿನ್ನೆಲೆಯಲ್ಲಿ ಶಿರಾಡಿಘಾಟ್ ರಸ್ತೆಯನ್ನು ಸಂಪೂರ್ಣ ಬಂದ್ ಮಾಡಲಾಗಿದೆ. 


ವರದಿ: ಕೆ.ಎಂ.ಹರೀಶ್, ಏಷ್ಯಾನೆಟ್ ಸುವರ್ಣ ನ್ಯೂಸ್
ಹಾಸನ: ಜಿಲ್ಲೆಯಲ್ಲಿ ಮೇಘ ಸ್ಫೋಟವಾಗುತ್ತಿರುವುದರಿಂದ  ಶಿರಾಡಿಘಾಟ್ ರಸ್ತೆಯಲ್ಲಿ ಇಂದು ಮತ್ತೆ ಭೂಕುಸಿತ ಉಂಟಾಗಿದೆ. ಸಕಲೇಶಪುರ ತಾಲೂಕಿನ ದೋಣಿಗಾಲ್ ಬಳಿ ರಸ್ತೆಯ ಒಂದು ಬದಿ ಕುಸಿದಿದೆ. ಮಳೆ ಮುಂದುವರಿದಿರುವುದರಿಂದ ರಸ್ತೆ ಮತ್ತಷ್ಟು ಕುಸಿಯುವ ಆತಂಕ ಹಿನ್ನೆಲೆಯಲ್ಲಿ ಶಿರಾಡಿಘಾಟ್ ರಸ್ತೆಯನ್ನು ಸಂಪೂರ್ಣ ಬಂದ್ ಮಾಡಲಾಗಿದೆ. 

ಮುಂದಿನ ಆದೇಶದವರೆಗೂ ಈ ಮಾರ್ಗವನ್ನು ಬಂದ್ ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಆದೇಶ ಹೊರಡಿಸಿದ್ದಾರೆ. ಇದರಿಂದ ಈ ಮೂಲಕ ಬೆಂಗಳೂರು-ಮಂಗಳೂರು ಸಂಪರ್ಕ ಕಲ್ಪಿಸುವ ಪ್ರಮುಖ ರಾಷ್ಟ್ರೀಯ ಹೆದ್ದಾರಿ 75 ಕ್ಲೋಸ್ ಆಗಿದೆ. ಸ್ಥಳದಲ್ಲಿ ಪೊಲೀಸರು, ಅಧಿಕಾರಿಗಳು ಮೊಕ್ಕಾಂ ಹೂಡಿದ್ದು, ವಾಹನಗಳನ್ನು  ಹಾನುಬಾಳು- ಚಾರ್ಮಾಡಿ ಘಾಟ್ ಮೂಲಕ ಬದಲಿ  ಮಾರ್ಗದಲ್ಲಿ ಮಂಗಳೂರು ಕಡೆ ಸಂಚರಿಸಲು ಸೂಚಿಸಲಾಗಿದೆ. 

Tap to resize

Latest Videos

Shiradi Ghat : ಹೆಲಿಕಾಪ್ಟರ್ ನಲ್ಲಿ ಓಡಾಡೋರಿಗೆ, ಜನರ ಕಷ್ಟ ಅರ್ಥ ಆಗೋದಿಲ್ಲ

ಕುಶಾಲನಗರ - ಮಡಿಕೇರಿ ಮೂಲಕವೂ ಮಂಗಳೂರು ಕಡೆ ಪ್ರಯಾಣಕ್ಕೆ ಸೂಚನೆ ನೀಡಲಾಗಿದೆ. ಶಿರಾಡಿ ಘಾಟ್ ರಸ್ತೆ ರಾಷ್ಟ್ರೀಯ ಹೆದ್ದಾರಿ 75 ಬೆಂಗಳೂರು ಮಂಗಳೂರು ಸಂಪರ್ಕ ಕಲ್ಪಿಸೋ ಪ್ರಮುಖ ರಸ್ತೆ. ಪ್ರತಿನಿತ್ಯ ಸಾವಿರಾರು ವಾಹನಗಳು ಇಲ್ಲಿ ಸಂಚರಿಸುತ್ತವೆ. ಈಗ ಶಿರಾಡಿ ಘಾಟ್ ರಸ್ತೆ ಬಂದ್ ಮಾಡಿರುವುದರಿಂದ ಪ್ರಯಾಣಿಕರಿಗೆ ಸಾಕಷ್ಟು ತೊಂದರೆ ಉಂಟಾಗಿದೆ. ಆದ್ರೆ ಶಿರಾಡಿ ಘಾಟ್‌ನಲ್ಲಿ ರಸ್ತೆ ಕುಸಿತ ಉಂಟಾಗುತ್ತಿರುವುದರಿಂದ ರಸ್ತೆ ಮಾರ್ಗ ಬಂದ್ ಮಾಡುವ ಕ್ರಮ ಅನಿವಾರ್ಯವಾಗಿದೆ. ವಾಹನ ಸಂಚಾರ ಬಂದ್ ಮಾಡದಿದ್ದರೆ ರಸ್ತೆ ಕುಸಿತ ವೇಳೆ ಅನಾಹುತಗಳು ಸಂಭವಿಸುವ ಸಾಧ್ಯತೆ ಇರುವುದರಿಂದ ಹಾಸನ ಜಿಲ್ಲಾಡಳಿತ‌ ಮುನ್ನೆಚ್ಚರಿಕೆ ಕ್ರಮ ವಹಿಸಿದೆ.

Shiradi Ghat Road ಶಿರಾಡಿ ಘಾಟ್ ರಸ್ತೆ ಮೇಲ್ದರ್ಜೆಗೇರಿಸಲು ಕೇಂದ್ರ ಗ್ರೀನ್ ಸಿಗ್ನಲ್, ಸಿಎಂ ಧನ್ಯವಾದ


 

click me!