ಗದಗ ಜಿಲ್ಲೆಯ ಶಿರಹಟ್ಟಿ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಅವರ ಲಕ್ಷ್ಮೇಶ್ವರದ ನಿವಾಸದಲ್ಲಿ ಅವರ ಕಾರ್ ಡ್ರೈವರ್ ಸುನೀಲ್ ಲಮಾಣಿ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದ್ದು, ಲಕ್ಷ್ಮೇಶ್ವರ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಗದಗ (ಜ.10): ಗದಗ ಜಿಲ್ಲೆಯ ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಅವರ ನಿವಾಸದಲ್ಲಿಯೇ ಅವರ ಕಾರ್ ಡ್ರೈವರ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ಚಂದ್ರ ಲಮಾಣಿ ಅವರು ಇತ್ತೀಚೆಗೆ ಲಕ್ಷ್ಮೇಶ್ವರ ಪಟ್ಟಣದ ಮಲ್ಲಾಡ್ ಕಾಲೋನಿಯಲ್ಲಿ ಹೊಸ ಮನೆ ಖರೀದಿ ಮಾಡಿದ್ದರು. ಇದೇ ಮನೆಯಲ್ಲಿ ಕಾರ್ ಡ್ರೈವರ್ 25 ವರ್ಷದ ಸುನೀಲ್ ಲಮಾಣಿ ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎನ್ನಲಾಗಿದ್ದು, ಲಕ್ಷ್ಮೇಶ್ವರ ಪೊಲೀಸರು ಪ್ರಕರಣದ ತನಿಖೆ ಆರಂಭ ಮಾಡಿದ್ದಾರೆ.
ಮೂಲಗಳ ಪ್ರಕಾರ ಕೌಟುಂಬಿಕ ಕಲಹ ಹಿನ್ನಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ಏನು ಅನ್ನೋದು ಇನ್ನೂ ಗೊತ್ತಾಗಿಲ್ಲ. ಮೃತ ಸುನೀಲ್ ಲಮಾಣಿ ಹಾಗೂ ಚಂದ್ರ ಲಮಾಣಿ ಇಬ್ಬರೂ ಸಂಬಂಧಿಗಳಾಗಿದ್ದು, ಯಾವುದೇ ಡೆತ್ ನೋಟ್ ಕೂಡ ಸಿಕ್ಕಿಲ್ಲ. ಮನೆ ಕಟ್ಟುವ ವಿಚಾರದಲ್ಲಿ ಸಹೋದರರ ನಡುವೆ ಕಲಹ ನಡೆದಿತ್ತು. ಇದರಿಂದಲೇ ಅವರು ಈ ಕೃತ್ಯ ಮಾಡಿಕೊಂಡಿರಬಹುದು ಎಂದು ಅಂದಾಜಿಸಲಾಗಿದೆ.
ರಾಜ್ಯದಲ್ಲಿ ಆಗುವ ಪ್ರತಿ ಸಾವುಗಳು ರಾಜಕೀಯ ಸ್ವರೂಪ ಪಡೆದುಕೊಳ್ಳುತ್ತಿರುವ ಹಿನ್ನಲೆಯಲ್ಲಿ ಬಿಜೆಪಿ ಶಾಸಕ ಚಂದ್ರು ಲಮಾಣಿ ಕಾರು ಚಾಲಕ ಸುನೀಲ್ ನಿಗೂಢ ಸಾವು ಕೂಡ ರಾಜಕೀಯ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆಗಳಿದೆ. ಇದನ್ನೇ ಇಟ್ಟುಕೊಂಡು ಕಾಂಗ್ರೆಸ್, ಬಿಜೆಪಿಗೆ ತಿರುಗೇಟು ನೀಡುವ ಸಾಧ್ಯತೆಗಳಿವೆ.
ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ, 7ನೇ ತರಗತಿ ವಿದ್ಯಾರ್ಥಿ ತ್ರಿಶಾಲ್ ನೇಣಿಗೆ ಶರಣು!
ಬೀದರ್‌ನ ಯುವ ಗುತ್ತಿಗೆದಾರ ಸಚಿನ್ ಪಾಂಚಾಳ, ಸಚಿವ ಪ್ರಿಯಾಂಕ್ ಖರ್ಗೆ ಆಪ್ತನ ಹೆಸರು ಬರೆದಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ವಿಚಾರದಲ್ಲಿ ಬಿಜೆಪಿ , ಖರ್ಗೆಯ ರಾಜೀನಾಮೆಗೆ ಒತ್ತಾಯ ಮಾಡುತ್ತಿದೆ. ಇದರ ನಡುವೆ ಬಿಜೆಪಿ ಶಾಸಕನ ಮನೆಯಲ್ಲೇ ಕಾರ್ ಡ್ರೈವರ್‌ನ ನಿಗೂಢ ಸಾವು ಮತ್ತೊಂದು ರಾಜಕೀಯ ಸ್ವರೂಪಕ್ಕೆ ಕಾರಣವಾಗಬಹುದು ಎನ್ನಲಾಗಿದೆ. ಲಕ್ಷ್ಮೇಶ್ವರ ಪೊಲೀಸರು ಭೇಟಿ ಪರಿಶೀಲನೆ ನಡೆಸಿ ಆತ್ಮಹತ್ಯೆ ಬಗ್ಗೆ ತನಿಖೆ ಆರಂಭಿಸಿದ್ದಾರೆ.
ವಂಚನೆ ಕೇಸ್ ಆರೋಪಿ ಐಶ್ವರ್ಯ ಗೌಡ ವಿರುದ್ಧ ಬಲವಂತದ ಕ್ರಮ ಬೇಡ: ಹೈಕೋರ್ಟ್