ಪಾಪನಾಶ ಶಿವಲಿಂಗ ದೇವಸ್ಥಾನದ ಕಲ್ಯಾಣ ಮಂಟಪದೊಳಗೆ ದುಷ್ಕರ್ಮಿಗಳು ಪೂಜಾರಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.
ಬೀದರ್, [ಜೂನ್. 11]: ಬೀದರ್ನ ಐತಿಹಾಸಿಕ ಶ್ರೀ ಕ್ಷೇತ್ರ ಪಾಪನಾಶ ಶಿವಲಿಂಗ ದೇವಸ್ಥಾನದ ಅರ್ಚಕರನ್ನು ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ.
ರಮೇಶ್ ಸ್ವಾಮಿ(52) ಕೊಲೆಯಾದ ಅರ್ಚಕ. ಬೀದರ್ ನಗರದಲ್ಲಿರುವ ಪ್ರಸಿದ್ಧ ಪಾಪನಾಶ ಶಿವಲಿಂಗ ದೇವಸ್ಥಾನದ ಕಲ್ಯಾಣ ಮಂಟಪದೊಳಗೆ ದುಷ್ಕರ್ಮಿಗಳು ರಮೇಶ್ರನ್ನು ಹತ್ಯೆ ಮಾಡಿದ್ದಾರೆ.
ಕೊಲೆಗೆ ಕಾರಣ ಏನೆಂಬುದು ಇನ್ನು ತಿಳಿದುಬಂದಿಲ್ಲ. ಪೊಲೀಸ್ ತನಿಖೆಯ ನಂತರವಷ್ಟೇ ಪ್ರಕರಣದ ಹಿಂದಿನ ಕಾರಣ ಬಹಿರಂಗವಾಗಲಿದೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಶ್ರೀಧರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬೀದರ್ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.