ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಮತ್ತು ಶಾಸಕಿ ಹೆಬ್ಬಾಳಕರ ನಡುವಿನ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಈ ವಿಚಾರವು ರಾಜ್ಯಮಟ್ಟದಲ್ಲಿಯೂ ತೀವ್ರ ಚರ್ಚೆಗೆ ಗ್ರಾಸವಾಗಿತ್ತು.
ಬೆಳಗಾವಿ(ಮಾ.05): ಬೆಳಗಾವಿ ಗ್ರಾಮೀಣ ಕ್ಷೇತ್ರದ ರಾಜಹಂಸಗಡ ಕೋಟೆ ಆವರಣದಲ್ಲಿರುವ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈಗಾಗಲೇ ಅಧಿಕೃತವಾಗಿ ಲೋಕಾರ್ಪಣೆಗೊಳಿಸಿದ್ದು, ಕಾರ್ಯಕ್ರಮಕ್ಕೆ ಗೈರಾಗಿ ತಮ್ಮ ಅಸಮಾಧಾನವನ್ನು ಹೊರಹಾಕಿದ್ದ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರಿಂದ ಮತ್ತೊಮ್ಮೆ ಶಿವಾಜಿ ಪ್ರತಿಮೆ ಅನಾವರಣಕ್ಕೆ ವೇದಿಕೆ ಸಿದ್ಧವಾಗಿದೆ.
ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಮತ್ತು ಶಾಸಕಿ ಹೆಬ್ಬಾಳಕರ ನಡುವಿನ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಈ ವಿಚಾರವು ರಾಜ್ಯಮಟ್ಟದಲ್ಲಿಯೂ ತೀವ್ರ ಚರ್ಚೆಗೆ ಗ್ರಾಸವಾಗಿತ್ತು.
ಬೆಳಗಾವಿಯಲ್ಲಿ ಕಾಂಗ್ರೆಸ್, ಬಿಜೆಪಿ ನಡುವೆ ಶಿವಾಜಿ ಪ್ರತಿಮೆ ಜಟಾಪಟಿ
ಈಗ ಶಾಸಕಿಯು ತಮ್ಮ ನಿರ್ಣಯದಂತೆ ಈಗಾಗಲೇ ಲೋಕಾರ್ಪಣೆಗೊಂಡಿರುವ ಶಿವಾಜಿ ಪ್ರತಿಮೆಯನ್ನು ಮಾ.5ರಂದು ಮರು ಲೋಕಾರ್ಪಣೆ ಮಾಡಲು ಸಿದ್ಧತೆ ಮಾಡಿಕೊಂಡಿದ್ದು, ಭಾನುವಾರ ಬೆಳಗ್ಗೆ 9 ಗಂಟೆಗೆ ಶಿವಾಜಿ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಚಾಲನೆ ಸಿಗಲಿದೆ.