ತುಮಕೂರು: ಇಂದು ಲಿಂ.ಶಿವಕುಮಾರಸ್ವಾಮಿಗಳ 116ನೇ ಜನ್ಮದಿನೋತ್ಸವ, ಮಠದಲ್ಲಿ ವಿಶೇಷ ಪೂಜೆ

By Girish Goudar  |  First Published Apr 1, 2023, 8:38 AM IST

116 ಮಕ್ಕಳಿಗೆ ಶಿವಕುಮಾರ ಶ್ರೀಗಳ ಹೆಸರು ನಾಮಕರಣ ಮಾಡಲಾಗುವುದು. ನಾಮಕರಣ ಮಾಡಲು ಹೆಸರು  ಪೋಷಕರು ನೋಂದಾಯಿಸಿಕೊಂಡಿದ್ದಾರೆ. ಶಿವಕುಮಾರ ಶ್ರೀಗಳ ಗದ್ದುಗೆ, ಮಠದ ಆವರಣಗಳನ್ನು ಫಲಪುಷ್ಪಗಳಿಂದ ವಿಶೇಷವಾಗಿ ಅಲಂಕರಿಸಲಾಗಿದೆ. 


ತುಮಕೂರು(ಏ.01):  ಇಂದು ಲಿಂ.ಶಿವಕುಮಾರಸ್ವಾಮಿಗಳ 116ನೇ ಜನ್ಮದಿನೋತ್ಸವ ಇರುವ ಹಿನ್ನಲೆಯಲ್ಲಿ ಸಿದ್ದಗಂಗಾ ಮಠದಲ್ಲಿ ಶ್ರೀಗಳ ಹುಟ್ಟುಹಬ್ಬ ಆಚರಣೆ ಮಾಡಲಾಗುತ್ತಿದೆ. ಬೆಳಗ್ಗೆಯಿಂದ ಶ್ರೀಗಳ ಗದ್ದುಗೆ ವಿಶೇಷ ಪೂಜೆ ಸಲ್ಲಿಸಲಾಗಿದೆ. ಶಿವಕುಮಾರ ಶ್ರೀಗಳ ಗದ್ದಿಗೆಗೆ ಅಭಿಷೇಕ ನೆರವೇರಿಸಲಾಗಿದೆ. 

ಬೆಳಗ್ಗೆ 11  ಗಂಟೆಗೆ ಗೋಸಲ ಸಿದ್ದೇಶ್ವರ ವೇದಿಕೆಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ನೀತಿ ಸಂಹಿತೆ ಜಾರಿ ಇರುವ  ಹಿನ್ನೆಲೆಯಲ್ಲಿ ರಾಜಕಾರಣಿಗಳು, ಜನಪ್ರತಿನಿಧಿಗಳು ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗೋದಿಲ್ಲ. ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್, ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಪ್ರಭಾಕರ್ ಕೋರೆ ಸೇರಿದಂತೆ ವಿವಿಧ ಗಣ್ಯರು ಉಪಸ್ಥಿತಿ ಇರಲಿದ್ದಾರೆ. 

Tap to resize

Latest Videos

ರೈತರಿಗೆ ಅರಿವು ಮೂಡಿಸಲು ಇಂದಿನಿಂದ ಹೋರಾಟ: ಯೋಗೀಶ್ವರ ಸ್ವಾಮಿ

ಸಿದ್ದಗಂಗಾ ಮಠಾಧ್ಯಕ್ಷ‌ ಸಿದ್ದಲಿಂಗ ಸ್ವಾಮಿಜಿ, ಸುತ್ತೂರು ಶ್ರೀಗಳ ಸಾನಿಧ್ಯದಲ್ಲಿ ನಡೆಯಲಿರುವ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. 

116 ಮಕ್ಕಳಿಗೆ ಶಿವಕುಮಾರ ಶ್ರೀಗಳ ಹೆಸರು ನಾಮಕರಣ ಮಾಡಲಾಗುವುದು. ನಾಮಕರಣ ಮಾಡಲು ಹೆಸರು  ಪೋಷಕರು ನೋಂದಾಯಿಸಿಕೊಂಡಿದ್ದಾರೆ. ಶಿವಕುಮಾರ ಶ್ರೀಗಳ ಗದ್ದುಗೆ, ಮಠದ ಆವರಣಗಳನ್ನು ಫಲಪುಷ್ಪಗಳಿಂದ ವಿಶೇಷವಾಗಿ ಅಲಂಕರಿಸಲಾಗಿದೆ. ಸಾವಿರಾರು ಭಕ್ತರು ಮಠಕ್ಕೆ ಆಗಮನ ನಿರೀಕ್ಷೆ ಇದೆ. ಮಠಕ್ಕೆ ಬರುವ ಭಕ್ತರಿಗೆ ಮಠದಲ್ಲಿ ಊಟದ ವ್ಯವಸ್ಥೆ‌ ಮಾಡಲಾಗಿದೆ. 

click me!