ಶಿವಕುಮಾರ ಸ್ವಾಮೀಜಿ ಸಿದ್ಧಗಂಗಾ ಆಸ್ಪತ್ರೆಗೆ ಶಿಫ್ಟ್

Published : Jan 03, 2019, 08:56 PM IST
ಶಿವಕುಮಾರ ಸ್ವಾಮೀಜಿ ಸಿದ್ಧಗಂಗಾ ಆಸ್ಪತ್ರೆಗೆ  ಶಿಫ್ಟ್

ಸಾರಾಂಶ

ಹೆಚ್ಚಿನ ಚಿಕಿತ್ಸೆಗಾಗಿ ಶಿವಕುಮಾರ ಸ್ವಾಮೀಜಿ ಅವರನ್ನು ತುಮಕೂರಿನ ಸಿದ್ಧಗಂಗಾ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ.

ತುಮಕೂರು, [ಜ.03]:  'ನಡೆದಾಡುವ ದೇವರು' ಶಿವಕುಮಾರ ಸ್ವಾಮೀಜಿ ಅವರನ್ನು ಹೆಚ್ಚಿನ ಚಿಕಿತ್ಸೆಗೆ ತುಮಕೂರಿನ ಸಿದ್ಧಗಂಗಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ಶ್ವಾಸಕೋಶದ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಚೆನ್ನೈನ ರೇಲಾ ಆಸ್ಪತ್ರೆಯ ಸೋಂಕು ತಜ್ಞ ಡಾ. ಸುಬ್ರ ಸೂಚನೆ ಮೇರೆಗೆ ತುಮಕೂರಿನ ಸಿದ್ಧಗಂಗಾ ಆಸ್ಪತ್ರೆಗೆ ಶ್ರೀಗಳನ್ನು ಸ್ಥಳಾಂತರ ಮಾಡಲಾಗಿದೆ.

ಸಿದ್ದಗಂಗಾ ಶ್ರೀ ಆರೋಗ್ಯ ತಪಾಸಣೆಗೆ ಚೆನ್ನೈ ಡಾಕ್ಟ್ರು ದೌಡು

ಶಿವಕುಮಾರ ಸ್ವಾಮೀಜಿಗಳಿಗೆ ಪದೇ-ಪದೇ ಶ್ವಾಸಕೋಶದ ಸೋಂಕು ಕಾಣಿಸಿಕೊಳ್ಳುತ್ತಿದ್ದರಿಂದ ಇಂದು [ಗುರುವಾರ]  ಚೆನ್ನೈನ ರೇಲಾ ಆಸ್ಪತ್ರೆಯ ಶ್ವಾಸಕೋಶ ಸೋಂಕು ತಜ್ಞ ಡಾ. ಸುಬ್ರ ಅವರನ್ನು ಮಠಕ್ಕೆ ಕರೆಸಲಾಗಿತ್ತು.

ಚೆನ್ನೈನದಿಂದ ಆಗಮಿಸಿದ ಡಾ. ಸುಬ್ರ ಅವರು ಮಠದಲ್ಲಿಯೇ  ಶ್ರೀಗಳ ಆರೋಗ್ಯ ತಪಾಸಣೆ ನಡೆಸಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆ ಸ್ಥಳಾಂತರಿಸುವುದು ಒಳ್ಳೆಯದು ಎಂದು ಅಭಿಪ್ರಾಯಪಟ್ಟಿದ್ದಾರೆ.

ಅದರಂತೆ  ಶಿವಕುಮಾರ ಸ್ವಾಮೀಜಿಗಳನ್ನು ಸಿದ್ಧಗಂಗಾ ಆಸ್ಪತ್ರೆಗೆ ದಾಖಲಿಸಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.

PREV
click me!

Recommended Stories

ವ್ಯವಹಾರಕ್ಕೆ ಕ್ಯಾಲೆಂಡರ್, ಬದುಕಿಗೆ ಸಂಸ್ಕೃತಿ ಮುಖ್ಯ: ಸಿದ್ಧಗಂಗಾ ಶ್ರೀಗಳಿಂದ ಹೊಸ ವರ್ಷದ ಸಂದೇಶವೇನು?
ಸಿಎಂ ದೆಹಲಿ ಪ್ರಯಾಣದ ನಂತರ ಸಂಪುಟ ಪುನಾರಚನೆ: ಮಾಜಿ ಸಚಿವ ಕೆ.ಎನ್.ರಾಜಣ್ಣ