Shivamogga airport: ಉದ್ಘಾಟನೆಗೆ ಕನ್ನಡದಲ್ಲೇ ಟ್ವೀಟ್ ಮಾಡಿ ಆಹ್ವಾನಿಸಿದ ಕೇಂದ್ರ ವಿಮಾನಯಾನ ಸಚಿವ

By Ravi Janekal  |  First Published Feb 23, 2023, 10:41 AM IST

ಶಿವಮೊಗ್ಗದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ವಿಮಾನ ನಿಲ್ದಾಣವನ್ನು ಫೆ.27ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ಈ ಹಿನ್ನೆಲೆ ಕೇಂದ್ರ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾಕನ್ನಡದಲ್ಲಿಯೇ  ಟ್ವಿಟ್ ಮಾಡುವ ಮೂಲಕ ಸುದ್ದಿಯಾಗಿದ್ದಾರೆ.


ಶಿವಮೊಗ್ಗ (ಫೆ.23) : ಶಿವಮೊಗ್ಗದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ವಿಮಾನ ನಿಲ್ದಾಣವನ್ನು ಫೆ.27ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ಈ ಹಿನ್ನೆಲೆ ಕೇಂದ್ರ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ(Union Aviation Minister Jyotiraditya Scindia) ಕನ್ನಡದಲ್ಲಿಯೇ  ಟ್ವಿಟ್ ಮಾಡುವ ಮೂಲಕ ಸುದ್ದಿಯಾಗಿದ್ದಾರೆ.

ಶಿವಮೊಗ್ಗ ವಿಮಾನ ನಿಲ್ದಾಣ(Shivamogga airport)ದಲ್ಲಿ ಪ್ರಾಯೋಗಿಕ ವಿಮಾನ ಹಾರಾಟ ಯಶಸ್ವಿ ಲ್ಯಾಂಡಿಂಗ್ ಆಗಿರುವ ವಿಡಿಯೋ ಕ್ಲಿಪ್ ಅನ್ನು ವೀಕ್ಷಿಸಿರುವ ಕೇಂದ್ರ ಸಚಿವ ಜ್ಯೋತಿರಾಧಿತ್ಯ ಸಿಂಧಿಯಾ ಹಾಕಿ ಸಂಸದರ ಟ್ವೀಟ್ ಗೆ  ಕನ್ನಡದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

Tap to resize

Latest Videos

Kuvempu Airport: ಪ್ರಧಾನಿ ಮೋದಿ ಸ್ವಾಗತಕ್ಕೆ ಭರ್ಜರಿ ಸಿದ್ಧತೆ

ಟ್ವೀಟ್‌ನಲ್ಲಿ ಏನಿದೆ? 

"ಕರ್ನಾಟಕದ ಜನರೇ, ನಿಮ್ಮ‌ಭೂಮಿಗೆ 148 ನೇ ವಿಮಾನ ನಿಲ್ದಾಣ ದೊರೆಯುತ್ತಿದ್ದು, ಬನ್ನಿ ನಮ್ಮೊಂದಿಗೆ ಕೈ ಜೋಡಿಸಿ ಎಂದು ಟ್ವೀಟ್ ಮಾಡಿರುವ ಸಚಿವ ಜ್ಯೋತಿರಾಧಿತ್ಯ ಸಿಂಧಿಯಾ.

ಪ್ರಧಾನಿ ನರೇಂದ್ರ ಮೋದಿ(PM Narendra Modi) ಉದ್ಘಾಟನೆಗೆ ಆಗಮಿಸಲಿರುವ ಹಿನ್ನೆಲೆ ಫೆ.21 ರಂದು ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಪ್ರಾಯೋಗಿಕ ವಿಮಾನ ಹಾರಾಟ ನಡೆಸಲಾಗಿತ್ತು. ಭಾರತೀಯ ವಾಯುಪಡೆ ಬೋಯಿಂಗ್ 737 ವಿಮಾನ ಹಾರಾಟ ಮತ್ತು ಲ್ಯಾಂಡಿಂಗ್ ಯಶಸ್ವಿಯಾಗಿಗಿತ್ತು. ವಿಮಾನ ನಿಲ್ದಾಣ ಪ್ರಯೋಗಿಕ ಹಾರಟ ಮತ್ತು ಲ್ಯಾಂಡಿಂಗ್ ವಿಡಿಯೋವನ್ನು ಪ್ರಧಾನಿ ಮೋದಿ, ಪ್ರಲ್ಹಾದ್ ಜೋಶಿ ಸೇರಿದಂತೆ ಹಲವರು ಟ್ವಿಟ್‌ನಲ್ಲಿ ಹಂಚಿಕೊಂಡಿದ್ದರು.

Shivamogga: ಏರ್‌ಪೋರ್ಟ್‌ನಲ್ಲಿ ಯಶಸ್ವಿಯಾಗಿ ಲ್ಯಾಂಡ್‌ ಆದ ಭದ್ರತಾ ಪಡೆ ವಿಮಾನ: ಪ್ರಾಯೋಗಿಕ ವಿಮಾನ ಹಾರಾಟ ಸಕ್ಸಸ್

ಇನ್ನು ಕೇಂದ್ರ ಸಚಿವರು ಕನ್ನಡದಲ್ಲಿ ಮಾಡಿರುವ ಟ್ವೀಟ್ ಗೆ ಸಂಸದ ಬಿ.ವೈ.ರಾಘವೇಂದ್ರ ಧನ್ಯವಾದಗಳನ್ನ ಸಲ್ಲಿಸಿದ್ದಾರೆ. 

ಶಿವಮೊಗ್ಗಕ್ಕೆ ವಿಮಾನ ನಿಲ್ದಾಣ ದೊರೆತಿರುವುದಕ್ಕೆ ರಾಜ್ಯದ ಜನತೆಯ ಪರವಾಗಿ ಹೃತ್ಪೂರಕ ಧನ್ಯವಾದಗಳನ್ನ ಸಲ್ಲಿಸುತ್ತೇನೆ ಎಂದು ಪ್ರತಿಕ್ರಿಯಿಸಿದ್ದಾರೆ.

click me!