ಶರಾವತಿ ನೀರನ್ನು ಬೆಂಗಳೂರಿಗೆ ಹರಿಸುವುದನ್ನು ವಿರೋಧಿಸಿ ಶಿವಮೊಗ್ಗ ಬಂದ್ ಗೆ ಕರೆ ನೀಡಲಾಗಿದೆ. ಹೋರಾಟ ಹಿನ್ನೆಲೆ ಜಿಲ್ಲೆ ಸಂಪೂರ್ಣ ಸ್ತಬ್ಧವಾಗಲಿದೆ.
ಶಿವಮೊಗ್ಗ[ಜು. 09] : ಶರಾವತಿ ನದಿ ನೀರನ್ನು ಬೆಂಗಳೂರಿಗೆ ಬಿಡಲು ಸಾಧ್ಯವಿಲ್ಲ ಎಂದು ಶಿವಮೊಗ್ಗ ಜನತೆ ಒಂದುಗೂಡಿದ್ದು, ಜು.10 ರಂದು ಬಂದ್ ಗೆ ಹಲವು ಸಂಘಟನೆಗಳು ಕರೆ ನೀಡಿವೆ.
ಸಾಹಿತಿ ನಾ. ಡಿಸೋಜಾ ಅಧ್ಯಕ್ಷತೆಯಲ್ಲಿ ಒಕ್ಕೂಟ ರಚನೆಯಾಗಿದೆ. ಜಿಲ್ಲೆಯ ಬಹುತೇಕ ಎಲ್ಲ ಸಂಘಟನೆಗಳು, ರೈತ, ದಲಿತ, ಕನ್ನಡಪರ, ಪತ್ರಕರ್ತರು, ಬಸ್ ಮಾಲಿಕರು, ಹೋಟೆಲ್ ಮಾಲೀಕರು, ಆಟೋ, ಅಣ್ಣಾ ಹಜಾರೆ, ಎಲ್ಲ ರಾಜಕೀಯ ಪಕ್ಷಗಳು ಬೆಂಬಲ ನೀಡಿವೆ. ಈ ನಿಟ್ಟಿನಲ್ಲಿ ಜಿಲ್ಲೆ ಜು. 10 ರ ಬುಧವಾರ ಸಂಪೂರ್ಣ ಸ್ತಬ್ಧವಾಗಲಿದೆ.
ಶಿವಮೊಗ್ಗ, ಸಾಗರ, ತೀರ್ಥಹಳ್ಳಿ, ಸೊರಬ, ಶಿಕಾರಿಪುರ, ಹೊಸನಗರ, ತಾಳಗುಪ್ಪ ಸೇರಿದಂತೆ ಎಲ್ಲಾ ಕಡೆಯಲ್ಲಿಯೂ ಹೋರಾಟಕ್ಕೆ ವೇದಿಕೆ ಸಿದ್ಧವಾಗಿದೆ.
ಚಿಂತಕರು, ಸಾಹಿತಿಗಳು, ರಂಗಕರ್ಮಿಗಳು, ರೈತರು, ಪತ್ರಕರ್ತರ ಆದಿಯಾಗಿ ವಿವಿಧ ಹೋರಾಟಗಳಲ್ಲಿ ತೊಡಗಿಸಿಕೊಂಡವರು ಶರಾವತಿ ಉಳಿವಿಗೆ ಹೋರಾಟ ಆರಂಭಿಸಿದ್ದಾರೆ. ಜನರನ್ನು ಜಾಗೃತಗೊಳಿಸುವ ಕೆಲಸ ನಿರಂತರವಾಗಿದೆ.