ಸುಳ್ಳು ಸುದ್ದಿ ಹರಡ್ತೀರಾ..? ಕ್ರಿಮಿನಲ್ ಕೇಸ್ ಆಗುತ್ತೆ ಹುಷಾರ್..!

By Kannadaprabha NewsFirst Published Aug 8, 2019, 9:08 AM IST
Highlights

ಮಲೆನಾಡು, ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಸಂದರ್ಭವನ್ನು ದುರುಪಯೋಗ ಪಡಿಸಿಕೊಳ್ತಿರೋ ಕಡಿಗೇಡಿಗಳು ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿದ್ದಾರೆ. ಶಾಲಾ ಕಾಲೇಜುಗಳಿಗೆ ರಜೆ ಸಂಬಂಧ ಸುಳ್ಳು ಸುದ್ದಿಗಳನ್ನು ವಾಟ್ಸ್‌ಪ್‌ಗಳಲ್ಲಿ ಹರಡುತ್ತಿದ್ದು, ಇಂತಹ ವ್ಯಕ್ತಿಗಳ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸುವುದಾಗಿ ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಶಿವಮೊಗ್ಗ(ಆ.08): ಮಲೆನಾಡು, ಉತ್ತರ ಕರ್ನಾಟಕದಲ್ಲಿ ಭಾರೀ ಮಳೆಯಾಗುತ್ತಿದ್ದು, ಕೆಲವು ಕಡಿಗೇಡಿಗಳು ಈ ಸಂದರ್ಭವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಸುಮ್ಮ ಸುಮ್ಮನೆ ಶಾಲಾ ಕಾಲೇಜುಗಳಿಗೆ ರಜೆ ಎಂಬ ವಿಷಯ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿದ್ದಾರೆ.

ಜಿಲ್ಲೆಯಲ್ಲಿ ಉಂಟಾಗಿರುವ ಭಾರೀ ಮಳೆ ಮತ್ತು ಸಂಕಟಗಳ ಬೆನ್ನಲ್ಲೇ ಕಿಡಿಗೇಡಿಗಳ ಗುಂಪೊಂದು ಶಾಲಾ ಕಾಲೇಜುಗಳಿಗೆ ರಜೆ ಸಂಬಂಧ ಸುಳ್ಳು ಸುದ್ದಿಗಳನ್ನು ವಾಟ್ಸ್‌ಪ್‌ಗಳಲ್ಲಿ ಹರಡುತ್ತಿದ್ದು, ಇಂತಹ ವ್ಯಕ್ತಿಗಳ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸುವುದಾಗಿ ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಹವಾಮಾನ ವರದಿ ಬಿಚ್ಚಿಟ್ತು ಮಹಾ ಪ್ರವಾಹದ ಸೀಕ್ರೆಟ್!

ಕೆಲ ವ್ಯಕ್ತಿಗಳು ಜಿಲ್ಲಾಡಳಿತ ಪ್ರಕಟಣೆ ಹೊರಡಿಸುವ ಮುನ್ನವೇ ಶಾಲಾ ಕಾಲೇಜುಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ ಎಂಬ ಸುದ್ದಿ ಹರಿ ಬಿಡುತ್ತಿದ್ದಾರೆ. ಇದರಿಂದ ಸಾರ್ವಜನಿಕರಲ್ಲಿ ಯಾವುದು ಸತ್ಯ, ಯಾವುದು ಸುಳ್ಳು ಎಂಬ ಗೊಂದಲ ಉಂಟಾಗಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಶಿವಕುಮಾರ್‌ ಈ ಎಚ್ಚರಿಕೆ ನೀಡಿದ್ದಾರೆ.

ಶಿವಮೊಗ್ಗ: ಶಾಲೆ-ಕಾಲೇಜುಗಳಿಗೆ ಇಂದು ಕೂಡ ರಜೆ

click me!