ಶಿವಮೊಗ್ಗ ವಿಮಾನ ನಿಲ್ದಾಣದಿಂದ ವಿಮಾನಗಳ ಹಾರಾಟಕ್ಕೆ ಮುಹೂರ್ತ ನಿಗದಿಯಾಗಿದೆ. ಫೆಬ್ರವರಿಯಲ್ಲಿ 27 ರಂದು ಪ್ರಧಾನಿ ನರೇಂದ್ರ ಮೋದಿ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ್ದರು.
ಶಿವಮೊಗ್ಗ (ಜೂ.12): ಮಲೆನಾಡು ಜನರಿಗೆ ಸಿಹಿ ಸುದ್ದಿ ಸಿಕ್ಕಿದೆ. ಶಿವಮೊಗ್ಗ ವಿಮಾನ ನಿಲ್ದಾಣದಿಂದ ವಿಮಾನಗಳ ಹಾರಾಟಕ್ಕೆ ಮುಹೂರ್ತ ನಿಗದಿಯಾಗಿದೆ. ಫೆಬ್ರವರಿಯಲ್ಲಿ 27 ರಂದು ಪ್ರಧಾನಿ ನರೇಂದ್ರ ಮೋದಿ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ್ದರು. ಆದರೆ ಇಲ್ಲಿಯ ತನಕ ಪ್ರಯಾಣಿಕ ವಿಮಾನಗಳ ಸಂಚಾರ ಆರಂಭವಾಗಿರಲಿಲ್ಲ. ಆಗಸ್ಟ್ 11ರಂದು ಶಿವಮೊಗ್ಗ ವಿಮಾನ ನಿಲ್ದಾಣದಿಂದ ವಿಮಾನಗಳ ಹಾರಾಟ ನಡೆಯಲಿದೆ. ಬೆಂಗಳೂರು-ಶಿವಮೊಗ್ಗ ನಡುವೆ ಇಂಡಿಗೋ ಸಂಸ್ಥೆಯ ವಿಮಾನ ಹಾರಾಟ ಆರಂಭಿಸಲಿದೆ. ಕೆಲವೇ ದಿನಗಳಲ್ಲಿ ಬುಕ್ಕಿಂಗ್ ಸಹ ಆರಂಭವಾಗಲಿದೆ. ಆಗಸ್ಟ್ 11ರಂದು ಶಿವಮೊಗ್ಗದ ಸೊಗಾನ ವಿಮಾನ ನಿಲ್ದಾಣದಿಂದ ಸಂಸ್ಥೆಯ ಮೊದಲ ವಿಮಾನ ಬೆಂಗಳೂರಿಗೆ ಹಾರಾಟ ನಡೆಸಲಿದೆ ಎಂದು ಹೇಳಲಾಗಿದೆ.
ಶಿವಮೊಗ್ಗದ ಕುವೆಂಪು ವಿಮಾನ ನಿಲ್ದಾಣ (kuvempu airport shivamogga) ಉದ್ಘಾಟನೆಗೊಂಡು ನಾಲ್ಕೈದು ತಿಂಗಳು ಕಳೆದರೂ ಈವರೆಗೆ ಒಂದೇ ಒಂದು ವಿಮಾನ ಹಾರಾಟ ಸಹ ಮಾಡಿಲ್ಲ. ಈ ಮಧ್ಯೆ ಸರ್ಕಾರ ಬದಲಾವಣೆಯಿಂದ ವಿಮಾನ ಹಾರಾಟ ಇನ್ನಷ್ಟು ವಿಳಂಬವಾಗಲಿದೆ ಎಂದು ಹೇಳಲಾಗಿತ್ತು. ಆದರೆ ಆ.11ರಿಂದಲೇ ಶಿವಮೊಗ್ಗ- ಬೆಂಗಳೂರು ನಡುವೆ ವಿಮಾನ ಸಂಚಾರ ಅಧಿಕೃತವಾಗಿ ಆರಂಭಗೊಳ್ಳುವುದು ಖಚಿತವಾಗಿದೆ.
undefined
ಕರ್ನಾಟಕದಲ್ಲಿ ಹಾದು ಹೋಗುವ ನೈರುತ್ಯ ರೈಲುಗಳ ವೇಳಾಪಟ್ಟಿ ಬದಲಾವಣೆ, ನಿಲುಗಡೆ ರದ್ದು
ಪ್ರತಿ ದಿನ ಹೊರಡುವ ಸಮಯ ಎಷ್ಟು?
ವಿಮಾನ ಪ್ರತಿ ದಿನ ಬೆಳಗ್ಗೆ 9 ಗಂಟೆಗೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು ಶಿವಮೊಗ್ಗಕ್ಕೆ 10.30ಕ್ಕೆ ತಲುಪಲಿದೆ. ಮಧ್ಯಾಹ್ನ 12 ಗಂಟೆಗೆ ಶಿವಮೊಗ್ಗದಿಂದ ಹೊರಡುವ ವಿಮಾನ 1.30ಕ್ಕೆ ಬೆಂಗಳೂರು ತಲುಪಲಿದೆ. ಸದ್ಯ ಇಂಡಿಗೋ ಸಂಸ್ಥೆ ಬೆಂಗಳೂರು-ಶಿವಮೊಗ್ಗ ನಡುವೆ ಒಂದು ವಿಮಾನವನ್ನು ಮಾತ್ರ ಓಡಿಸಲಿದೆ. ಪ್ರಯಾಣಿಕರ ಪ್ರತಿಕ್ರಿಯೆ ನೋಡಿಕೊಂಡು ಮುಂದಿನ ತೀರ್ಮಾನ ಕೈಗೊಳ್ಳಲಾಗುತ್ತದೆ.
2,500ರಿಂದ 3,500 ರೂ. ಟಿಕೆಟ್ ದರ?
ಬೆಂಗಳೂರು- ಶಿವಮೊಗ್ಗ ಮಾರ್ಗಕ್ಕೆ 2,500ರಿಂದ 3,500 ರೂ. ತನಕ ದರ ನಿಗದಿ ಆಗುವ ನಿರೀಕ್ಷೆ ಇದೆ. ಶೀಘ್ರದಲ್ಲೇ ಇಂಡಿಗೋ ವೆಬ್‌ಸೈಟ್ ಮೂಲಕ ಟಿಕೆಟ್ ಬುಕ್ ಕೂಡ ಮಾಡಬಹುದಾಗಿದೆ.
Toll Price Hike: ಸದ್ದಿಲ್ಲದೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ಟೋಲ್ ದರ ಏರಿ
ಒಟ್ಟಿನಲ್ಲಿ ರಾಜಾಹುಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ಕನಸಿನ ಕೂಸು ಶಿವಮೊಗ್ಗ ವಿಮಾನ ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟಿಸಿದ ಆರು ತಿಂಗಳುಗಳ ಬಳಿಕ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ನಾಗರಿಕ ವಿಮಾನಯಾನ ಆರಂಭವಾಗಲಿದೆ.
ಈಗಾಗಲೇ ವಿಮಾನ ಸಂಚಾರಕ್ಕೆ ಇಂಡಿಗೋ ವಿಮಾನಯಾನ ಸಂಸ್ಥೆ, ಸಕಲ ಪೂರ್ವಭಾವಿ ತಯಾರಿ ನಡೆಸಲಾರಂಭಿಸಿದೆ. ಶಿವಮೊಗ್ಗ-ಬೆಂಗಳೂರು ನಡುವೆ 78 ಆಸನ ಸಾಮರ್ಥ್ಯದ ವಿಮಾನ ಹಾರಾಟಕ್ಕೆ ಸಂಸ್ಥೆ ಮುಂದಾಗಿದೆ.