ರಾಜ್ಯದಲ್ಲಿ ನಿಯಂತ್ರಣ ತಪ್ಪಿರುವ ಡೆಂಘೀ ಮಹಾಮಾರಿಗೆ ಶಿವಮೊಗ್ಗದ ಮಹಿಳೆ ಬಲಿಯಾಗಿದ್ದಾಳೆ.
ಶಿವಮೊಗ್ಗ (ಜು.09): ರಾಜ್ಯದಲ್ಲಿ ಕಳೆದೊಂದು ತಿಂಗಳಲ್ಲಿ ಮಹಾಮಾರಿ ಡೆಂಘೀ ಜ್ವರ ಕಾಣಿಸಿಕೊಂಡಿದ್ದರೂ ಆರೋಗ್ಯ ಇಲಾಖೆ ಮಾತ್ರ ಗಂಭೀರವಾಗಿ ಕ್ರಮ ಕೈಗೊಳ್ಳದೇ ಸಾರ್ವಜನಿಕರ ಸಾವಿಗೆ ಕಾರಣವಾಗುತ್ತಿದೆ. ಇಂದು ಶಿವಮೊಗ್ಗ ಜಿಲ್ಲೆಯ ರಶ್ಮಿ ಆರ್ ನಾಯಕ್ ಎಂಬ ಮಹಿಳೆ ಡೆಂಘೀ ಜ್ವರದಿಂದ ಬಳಲಿ ಸಾವನ್ನಪ್ಪಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ನಿವಾಸಿ ರಶ್ಮಿ ಆರ್ ನಾಯಕ್ (42) ಮಹಾಮಾರಿ ಡೆಂಘೀಗೆ ಬಲಿಯಾಗಿದ್ದಾರೆ. ಕಳೆದ ಕಳೆದ 15-20 ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಮಹಿಳೆ ರಶ್ಮಿ ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಕೆಲವು ದಿನಗಳಿಂದ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೂ ಚೇತರಿಸಿಕೊಂಡಿರಲಿಲ್ಲ. ಆದರೆ, ಮಂಗಳವಾರ ಮಧ್ಯಾಹ್ನ ಚಿಕಿತ್ಸೆ ಫಲಿಸದೆ ಕೊನೆಯುಸಿರು ಬಿಟ್ಟಿದ್ದಾರೆ. ಮೃತ ಮಹಿಳೆಗೆ ಪತಿ ಹಾಗೂ ಇಬ್ಬರು ಪುತ್ರರಿದ್ದಾರೆ.
undefined
ಡೆಂಘೀ ಎಮರ್ಜೆನ್ಸಿ ಘೋಷಣೆ ಸ್ಥಿತಿ ಬಂದಿಲ್ಲ: ಸಚಿವ ದಿನೇಶ್ ಗುಂಡೂರಾವ್
ಈಗಾಗಲೇ ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಸಾಕಷ್ಟು ಡೆಂಘೀ ಪ್ರಕರಣಗಳು ಪತ್ತೆಯಾಗಿವೆ. ಆದರೂ ಸಾರ್ವಜನಿಕರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಯಾವುದೇ ಮುನ್ನೆಚ್ಚರಿಕಾ ಕಗ್ರಮಗಳನ್ನು ಕೈಗೊಂಡಿಲ್ಲ. ಜೊತೆಗೆ, ಡೆಂಘೀ ಜ್ವರಕ್ಕೆ ಕಾರಣವಾಗುವ ಸೊಳ್ಳೆಗಳ ನಿಯಂತ್ರಣಕ್ಕೆ ಕ್ರಮವಹಿಸದೇ ಆರೋಗ್ಯ ಇಲಾಖೆ ನಿರ್ಲಕ್ಷ್ಯವಹಿಸುತ್ತಿದೆ. ಸರ್ಕಾರದಿಂದ ರಶ್ಮಿ ಅವರ ಸಾವಿಗೆ ನ್ಯಾಯ ಕೊಡಿಸಬೇಕು. ಜೊತೆಗೆ, ಆರೋಗ್ಯ ಇಲಾಖೆಯು ಡೆಂಘೀ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಸಿಬ್ಬಂದಿಯನ್ನು ಕೆಳ ಹಂತಕ್ಕಿಳಿದು ಕೆಲಸ ಮಾಡಲು ಆದೇಶ ಹೊರಡಿಸಬೇಕು ಎಂದು ಸ್ಥಳೀಯ ಸಾರ್ವಜನಿಕರು ಆಗ್ರಹ ಮಾಡಿದ್ದಾರೆ.
ಮಂಡ್ಯ ನಗರಕ್ಕೆ ರಿಂಗ್ ರಸ್ತೆ ನಿರ್ಮಾಣ ಪ್ರಸ್ತಾವನೆ ಸಲ್ಲಿಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ!
ವೈದ್ಯಕೀಯ ತುರ್ತು ಪರಿಸ್ಥಿತಿ ಘೋಷಿಸುವ ಸ್ಥಿತಿಯಿಲ್ಲ:
ಡೆಂಘೀ ಹೆಚ್ಚಳದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ವೈದ್ಯಕೀಯ ತುರ್ತು ಪರಿಸ್ಥಿತಿ ಘೋಷಿಸಬೇಕು ಎಂಬ ಬಿಜೆಪಿ ನಾಯಕರು ಹೇಳುತ್ತಿದ್ದಾರೆ. ಆದರೆ, ರಾಜ್ಯದಲ್ಲಿ ಡೆಂಘೀ ಪ್ರಕರಣ ಹೆಚ್ಚಾಗಿರುವುದು ಸತ್ಯ. ಅವುಗಳನ್ನು ಕಡಿಮೆ ಮಾಡಲು ಏನೆಲ್ಲಾ ಕ್ರಮ ಕೈಗೊಳ್ಳಬೇಕು ಎಂಬ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮಕ್ಕೆ ಸೂಚಿಸಲಾಗಿದೆ. ಸಂಸದ ಡಾ.ಸಿ.ಎನ್. ಮಂಜುನಾಥ್ ಅವರೊಂದಿಗೂ ನಾನೇ ಖುದ್ದಾಗಿ ಮಾತನಾಡಿ ಸಲಹೆ ಪಡೆದಿದ್ದೇನೆ. ಜತೆಗೆ ಸೊಳ್ಳೆ ನಿಯಂತ್ರಣಾ ಕ್ರಮ ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಡೆಂಘೀ ಜತೆಗೆ ಝೀಕಾ ವೈರಸ್ ಕೂಡ ಹರಡುತ್ತಿದೆ. ಆದರೆ ವೈದ್ಯಕೀಯ ತುರ್ತು ಪರಿಸ್ಥಿತಿ ಘೋಷಿಸುವ ಸ್ಥಿತಿಯಿಲ್ಲ. ಜನರಲ್ಲಿ ವಿನಾಕಾರಣ ಆತಂಕ ಸೃಷ್ಟಿಸುವ ಪ್ರಯತ್ನ ಮಾಡಬೇಡಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.