ತೀರ್ಥಹಳ್ಳಿ:  ತಂಗಿ ನೋಡಬೇಡ ಎಂದಿದ್ದಕ್ಕೆ  ಚಾಕು ಹಾಕಿದ

Published : Nov 23, 2018, 07:51 PM ISTUpdated : Nov 23, 2018, 07:59 PM IST
ತೀರ್ಥಹಳ್ಳಿ:  ತಂಗಿ ನೋಡಬೇಡ ಎಂದಿದ್ದಕ್ಕೆ  ಚಾಕು ಹಾಕಿದ

ಸಾರಾಂಶ

ನನ್ನ ತಂಗಿಯನ್ನು ನೋಡಬೇಡ, ಪ್ರೀತಿಸಬೇಡ ಎಂದ ಅಣ್ಣನನ್ನು ಕಾಲೇಜು ವಿದ್ಯಾರ್ಥಿಯೊಬ್ಬ ಚಾಕುವಿನಿಂದ ಇರಿದಿದ್ದಾನೆ. ಗಾಯಗೊಂಡವನ ಪರಿಸ್ಥಿತಿ ಚಿಂತಾಜನಕವಾಗಿದೆ.

ತೀರ್ಥಹಳ್ಳಿ[ನ.23]  ತನ್ನ ತಂಗಿಯನ್ನು ಪ್ರೀತಿಸ ಬೇಡ ಅಂದಿದ್ದಕ್ಕೆ ಅಣ್ಣನನ್ನೇ ಚಾಕುವಿನಿಂದ ಇರಿದ ಘಟನೆ ತೀರ್ಥಹಳ್ಳಿಯ ಸರ್ಕಾರಿ ಜೂನಿಯರ್ ಕಾಲೇಜು ಬಳಿ ನಡೆದಿದೆ. ಘಟನೆಯಲ್ಲಿ ಹೊಟ್ಟೆಯ ಬಲ ಭಾಗಕ್ಕೆ ಗಂಭೀರ ಗಾಯಗೊಂಡಿರುವ ಬಾಲಕನನ್ನು ತೀರ್ಥಹಳ್ಳಿಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆ ತರಲಾಯಿತಾದರೂ ನಂತರ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ.

ಗಾಯಗೊಂಡವನನ್ನು ಯಡೇಹಳ್ಳಿ ಕೆರೆಯ ದರ್ಶನ್ ಎಂದು ಗುರುತಿಸಲಾಗಿದ್ದು ಚಾಕು ಇರಿದ ಆರೋಪಿ ಅವಿನಾಶ್ ಪಿಂಟೋ ಸ್ಥಳದಿಂದ ಪರಾರಿಯಾಗಿದ್ದು ಆತನ ಪತ್ತೆಗೆ ಪೋಲಿಸರು ಮುಂದಾಗಿದ್ದಾರೆ. ತೀರ್ಥಹಳ್ಳಿ ಜೂನಿಯರ್ ಕಾಲೇಜಿಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ ದರ್ಶನ್  ಸಹೋದರಿಯನ್ನ ಅವಿನಾಶ್ ಪ್ರೀತಿಸುತ್ತಿದ್ದ ದರ್ಶನ್ ಈ ಬಗ್ಗೆ ಅವಿನಾಶ್ ಗೆ ಹಲವು ಬಾರಿ ಎಚ್ಚರಿಸಿದ್ದಾನೆ ಎಂದು ಮಾಹಿತಿ ಲಭ್ಯವಾಗಿದೆ. ಇದೀಗ ಅದರಿಂದ ಸಿಟ್ಟಾದ ಅವಿನಾಶ್ ಪಿಂಟೋ ಏಕಾಏಕಿ ಕಾಲೇಜಿನಿಂದ ಹೊರಗೆ ಕರೆಸಿಕೊಂಡು ದರ್ಶನ್‍ಗೆ ಚಾಕು ಇರಿದಿದ್ದಾನೆ.

ತೀರ್ಥಹಳ್ಳಿ: ಬಾಲಕಿ ಮೊಬೈಲ್‌ನಲ್ಲಿತ್ತು ಅವಳದ್ದೇ ಅಶ್ಲೀಲ ಚಿತ್ರ, ಆರೋಪಿ ಸೆರೆ

ದರ್ಶನ್ ಹೊಟ್ಟೆಗೆ 2ಬಾರಿ, ಕತ್ತಿಗೆ ಸಮೀಪದಲ್ಲಿ ಚಾಕು ಇರಿತದಿಂದ ಗಾಯವಾಗಿದೆ. ಇದರಿಂದ ಗಂಭೀರ ಗಾಯಗೊಂಡಿರುವ ದರ್ಶನ್‍ನನ್ನು ತೀರ್ಥಹಳ್ಳಿಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಶಿವಮೊಗ್ಗದ ಖಾಸಗಿ  ಆಸ್ಪತ್ರೆಗೆ  ದಾಖಲಿಸಲಾಗಿದೆ. ಈಗ ಪರಿಸ್ಥಿತಿ ಚಿಂತಾಜನಕವಾಗಿದ್ದು ಚಿಕಿತ್ಸೆ ನಂತರವಷ್ಟೆ ಮುಂದಿನ ಸ್ಥಿತಿಯನ್ನು ಹೇಳಬಹುದು ಎಂದು ವೈದ್ಯರು ತಿಳಿಸಿದ್ದಾರೆ.

ಚಾಕು ಇರಿತದಿಂದ ಗಲಿಬಿಲಿಗೊಂಡ ಜೂನಿಯರ್ ಕಾಲೇಜಿನ ಬಹುತೇಕ ಎಲ್ಲಾ ವಿದ್ಯಾರ್ಥಿಗಳು  ತೀರ್ಥಹಳ್ಳಿ ಆಸ್ಪತ್ರೆ ಮುಂದೆ ಜಮಾಯಿಸಿದ್ದು ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು ತೀರ್ಥಹಳ್ಳಿಯಲ್ಲಿ ಇತ್ತೀಚಿಗೆ ಹೆಚ್ಚಿನ ಇಂತಹ ಘಟನೆಗಳು ನಡೆಯುತ್ತಿದೆ, ಆರೋಪಿ ಪತ್ತೆಗೆ ತಕ್ಷಣ ಕ್ರಮ ಕೈಗೊಳ್ಳುವುದಾಗಿ ಪೋಲೀಸರು ತಿಳಿಸಿದ್ದಾರೆ.

PREV
click me!

Recommended Stories

ರೈಲ್ವೆ ಮೂಲಸೌಕರ್ಯ ಅಭಿವೃದ್ಧಿಪಡಿಸಲು ಮೋದಿಯಿಂದ ಬದ್ಧತೆಯ ಕಾರ್ಯ: ಸಂಸದ ಬಿ.ವೈ.ರಾಘವೇಂದ್ರ
CM Siddaramaiahಗೆ ಈಶ್ವರಪ್ಪ ವಾರ್ನಿಂಗ್: ಭಗವದ್ಗೀತೆ ಓದಲಿ, ತಾಕತ್ತಿದ್ದರೆ ಕುರಾನ್ ಬಗ್ಗೆ ಮಾತನಾಡಲಿ