ಇಡೀ ದೇಶವೇ ಮಹಾಮಾರಿ ಕೊರೋನಾ ವಿರುದ್ಧ ಹೋರಾಡುತ್ತಿದೆ| ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೋವಿಡ್ ನಿಯಂತ್ರಿಸಲು ಸಾಕಷ್ಟು ಪರಿಶ್ರಮ ಪಡುತ್ತಿದ್ದಾರೆ| ಹುಟ್ಟುಹಬ್ಬದ ನಿಮಿತ್ತ ನೂರಾರು ಆಪ್ತರೊಂದಿಗೆ ಹಾಗೂ ಸ್ನೇಹಿತರೊಂದಿಗೆ ಮೋಜು, ಮಸ್ತಿ ಮಾಡಿದ ಸಚಿವ ಶ್ರೀರಾಮುಲು ಆಪ್ತ ಎಸ್.ಎಚ್. ಶಿವನಗೌಡರ|
ಗದಗ(ಜು.14): ರಾಜ್ಯದಲ್ಲಿ ಮಹಾಮಾರಿ ಕೋವಿಡ್ -19 ಹೆಚ್ಚಿದ ಸಂದರ್ಭದಲ್ಲಿಯೂ ನಿಯಮ ಮೀರಿ, ನೂರಾರು ಜನರನ್ನು ಸೇರಿಸಿ ಹುಟ್ಟುಹಬ್ಬದ ಪಾರ್ಟಿ ಆಯೋಜಿಸಿದ್ದ ಸಚಿವ ಶ್ರೀರಾಮುಲು ಆಪ್ತ ಎಸ್.ಎಚ್. ಶಿವನಗೌಡರ ಅವರನ್ನು ಬಿಜೆಪಿಯಿಂದ ಅಮಾನತುಗೊಳಿಸಿ ಬಿಜೆಪಿ ಜಿಲ್ಲಾಧ್ಯಕ್ಷ ಮೋಹನ ಮಾಳಶೆಟ್ಟಿ ಆದೇಶ ಹೊರಡಿಸಿದ್ದಾರೆ.
ಇಡೀ ದೇಶವೇ ಮಹಾಮಾರಿ ಕೊರೋನಾ ವಿರುದ್ಧ ಹೋರಾಡುತ್ತಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೋವಿಡ್ ನಿಯಂತ್ರಿಸಲು ಸಾಕಷ್ಟು ಪರಿಶ್ರಮ ಪಡುತ್ತಿದ್ದಾರೆ. ಪಕ್ಷದ ಕಾರ್ಯಕರ್ತರೂ ಮಹಾಮಾರಿಯ ವಿರುದ್ಧ ಪಕ್ಷದ ಸೂಚನೆಯಂತೆ ನಿರಂತರವಾಗಿ ಹೋರಾಟದಲ್ಲಿ ತೊಡಗಿಸಿಕೊಂಡಿದ್ದಾರೆ. ಆದರೆ, ಪಕ್ಷದ ಜವಾಬ್ದಾರಿಯುತ ಕಾರ್ಯಕರ್ತರಾಗಿ ಹುಟ್ಟುಹಬ್ಬದ ನಿಮಿತ್ತ ಗದಗ ನಗರದ ರಿಂಗ್‌ರೋಡ್‌ನಲ್ಲಿರುವ ಶ್ರೀನಿವಾಸ್ ಭವನದಲ್ಲಿ ನೂರಾರು ಆಪ್ತರೊಂದಿಗೆ ಹಾಗೂ ಸ್ನೇಹಿತರೊಂದಿಗೆ ಮೋಜು, ಮಸ್ತಿ ಮಾಡಿದ್ದಾರೆ.
undefined
ಕೊರೋನಾ ಭೀತಿ ಮಧ್ಯೆ ಬೇಕಿತ್ತಾ ಮೋಜು, ಮಸ್ತಿ?: ಸಚಿವ ಶ್ರೀರಾಮುಲು ಆಪ್ತನಿಂದ ಗುಂಡು ಪಾರ್ಟಿ..!
ಈ ಕುರಿತು ರಾಜ್ಯದಲ್ಲೆಡೆ ಸುದ್ದಿಯಾಗಿ ಪಕ್ಷ ಮುಜುಗರ ಎದುರಿಸಬೇಕಾದ ಹಿನ್ನೆಲೆಯಲ್ಲಿ ಪಕ್ಷದ ವರಿಷ್ಠರ ಸೂಚನೆಯಂತೆ ಪಕ್ಷವು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಶಿವನಗೌಡರ್ ಅವರನ್ನು ಪಕ್ಷದಿಂದ ಅಮಾನತುಗೊಳಿಸಿದೆ ಎಂದು ಮೋಹನ ಮಾಳಶೆಟ್ಟಿ ಆದೇಶ ಹೊರಡಿಸಿದ್ದಾರೆ.