‘ಬಹುದೊಡ್ಡ ಮತಗಳ ಅಂತರದಲ್ಲಿ ಹೆಬ್ಬಾರ್ ಗೆಲುವು’ : ಚುನಾವಣೆಗೆ ಮುನ್ನ ವಿಜಯದ ಭವಿಷ್ಯ

By Suvarna NewsFirst Published Dec 3, 2019, 1:40 PM IST
Highlights

ಇನ್ನೆರಡು ದಿನದಲ್ಲಿ ರಾಜ್ಯದಲ್ಲಿ ಉಪ ಚುನಾವಣೆ ನಡೆಯಲಿದ್ದು, ಇದೇ ವೇಳೆ ರಾಜ್ಯದಲ್ಲಿ ಅಭ್ಯರ್ಥಿಗಳ ಚುನಾವಣಾ ಭವಿಷ್ಯ ನುಡಿಯಲಾಗಿದೆ. 

ಕಾರವಾರ [ಡಿ.03]: ರಾಜ್ಯದಲ್ಲಿ ಉಪ ಚುನಾವಣೆಗೆ ಇನ್ನೆರಡು ದಿನಗಳು ಮಾತ್ರ ಬಾಕಿ ಉಳಿದಿದ್ದು, ಇದೇ ವೇಳೆ ಜಿದ್ದಾ ಜಿದ್ದಿ ಇನ್ನೂ ಹೆಚ್ಚಾಗಿದೆ. ಅಭ್ಯರ್ಥಿಗಳು ತಮ್ಮದೇ ಗೆಲುವಿನ ಭರವಸೆಯಲ್ಲಿದ್ದಾರೆ. 

ಇತ್ತ ಉತ್ತರ ಕನ್ನಡದ ಯಲ್ಲಾಪುರದ ಬಿಜೆಪಿ ಅಭ್ಯರ್ಥಿ ಶಿವರಾಮ್ ಹೆಬ್ಬಾರ್ ಬಿರುಸಿನ ಪ್ರಚಾರದಲ್ಲಿ ತೊಡಗಿದ್ದು, ಕ್ಷೇತ್ರದಲ್ಲಿ ಹೆಬ್ಬಾರ್ ಬಹುದೊಡ್ಡ ಮತಗಳ ಅಂತರದಿಂದ ಗೆಲುವು ಸಾಧಿಸುತ್ತಾರೆ ಎಂದು ಕೋಟಾ ಶ್ರೀನಿವಾಸ್ ಪೂಜಾರ್ ಭರವಸೆ ವ್ಯಕ್ತಪಡಿಸಿದ್ದಾರೆ. 

ಬಹಿರಂಗ ಪ್ರಚಾರ ಇಂದು ಕೊನೆಗೊಳ್ಳಲಿದ್ದು, ಈ ನಿಟ್ಟಿನಲ್ಲಿ ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡಿರುವ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಮಾಡತನಾಡಿ, ಅಸಹಾಯಕತೆಯಿಂದ ಕಾಂಗ್ರೆಸ್ ಕ್ಷೇತ್ರದಲ್ಲಿ ಅಪಪ್ರಚಾರ ಮಾಡುತ್ತಿದೆ. ಕಾಂಗ್ರೆಸಿಗರು ಅಭಿವೃದ್ಧು ಹಾಗೂ ಸೈದ್ಧಾಂತಿಕ ವಿಚಾರಗಳ ಮೇಲೆ ಚುನಾವಣೆ ಎದುರಿಸಬೇಕು ಎಂದು ಹೇಳಿದರು. 

ನಿಮ್ಮ ಜಿಲ್ಲಾ ಸುದ್ದಿಗಳಿಗೆ ಇಲ್ಲಿ ಕ್ಲಿಕ್ಕಿಸಿ

ಕಾಂಗ್ರೆಸ್ ಮುಖಂಡರು ಅಪಪ್ರಚಾರದ ಮಾರ್ಗಕ್ಕೆ ಇಳಿಯದೇ ಆರೋಗ್ಯಕರ ರೀತಿಯಲ್ಲಿ ಚುನಾವಣೆ ಎದುರಿಸಲಿ ಎಂದು ಕೋಟಾ ಹೇಳಿದರು. 

ಡಿ.5 ರಂದು ಖಾಸಗಿ, ಸರ್ಕಾರಿ ಸಂಸ್ಥೆಗಳಿಗೆ ವೇತನ ಸಹಿತ ರಜೆ...

ಇನ್ನು ಯಲ್ಲಾಪುರದ ಕ್ಷೇತ್ರದ ತಮ್ಮ ಅಭ್ಯರ್ಥಿ ಶಿವರಾಜ್ ಹೆಬ್ಬಾರ್ ಅವರ ಗೆಲುವು ಖಚಿತ ಎಂದು ಭರವಸೆ ವ್ಯಕ್ತಪಡಿಸಿದರು.

ಡಿಸೆಂಬರ್ 5 ರಂದು ಉಪ ಚುನಾವಣೆ ನಡೆಯಲಿದ್ದು 15 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

click me!