ಡಿಕೆಶಿ ಎಲೆಕ್ಷನ್ ಗೆಲ್ಲಲು ಗೂಂಡಾಗಿರಿ ಮಾಡ್ತಿದ್ದಾರೆ : ಗಂಭೀರ ಆರೋಪ

Kannadaprabha News   | Asianet News
Published : Oct 25, 2020, 07:09 AM ISTUpdated : Oct 25, 2020, 07:38 AM IST
ಡಿಕೆಶಿ ಎಲೆಕ್ಷನ್ ಗೆಲ್ಲಲು ಗೂಂಡಾಗಿರಿ ಮಾಡ್ತಿದ್ದಾರೆ : ಗಂಭೀರ ಆರೋಪ

ಸಾರಾಂಶ

ರಾಜ್ಯದಲ್ಲಿ ಇನ್ನು ಕೆಲ ದಿನಗಳಲ್ಲಿ ಚುನಾವಣೆ ನಡೆಯುತ್ತಿದ್ದು ಚುನಾವಣೆ ಗೆಲ್ಲಲ್ಲು ಗೂಂಡಾ ಮಾರ್ಗ ಅನುಸರಿಸಲಾಗುತ್ತಿದೆ ಎಂದು ಆರೋಪಿಸಲಾಗಿದೆ

ಮೈಸೂರು (ಅ.25): ಡಿ.ಕೆ.ಶಿವಕುಮಾರ್‌ ಅವರದು ಯಾವಾಗಲೂ ಗೂಂಡಾ ರಾಜಕಾರಣ. ಆರ್‌.ಆರ್‌.ನಗರ ಕ್ಷೇತ್ರದ ಚುನಾವಣೆಯಲ್ಲೂ ಗೂಂಡಾಗಿರಿ ಮೂಲಕ ಗೆಲ್ಲುವ ಪ್ರಯತ್ನ ನಡೆಸಿದ್ದಾರೆ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್‌.ಆರ್‌.ನಗರ ಕ್ಷೇತ್ರದಲ್ಲಿ ಡಿಕೆಶಿ ತಮ್ಮ ಡಿಕೆ ಸುರೇಶ್‌ ಅವರೇ ಸಂಸದರು.

 ಎಲ್ಲಾ ಗೂಂಡಾಗಳನ್ನು ಬಳಸಿಕೊಂಡು ಕಾನೂನು ಸುವ್ಯವಸ್ಥೆ ಹದಗೆಡಿಸಲು ಯತ್ನಿಸುತ್ತಿದ್ದಾರೆ. ಈ ಬಗ್ಗೆ ಬಿಜೆಪಿ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿದೆ. ಚುನಾವಣೆ ಪಾರದರ್ಶಕವಾಗಿ ನಡೆಯಬೇಕು. ಯಾವುದೇ ಅಕ್ರಮಕ್ಕೆ ಅವಕಾಶ ಕೊಡಬಾರದು. ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್‌ನಲ್ಲಿ ಮುಂದಿನ ಸಿಎಂ ಬಗ್ಗೆ ಚರ್ಚೆ, ಡಿಕೆಶಿ ಮೊದಲ ಪ್ರತಿಕ್ರಿಯೆ...!

ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಕೊರೋನಾ ಲಸಿಕೆಯನ್ನು ಉಚಿತವಾಗಿ ನೀಡುವುದಾಗಿ ಪ್ರಣಾಳಿಕೆ ಬಿಡುಗಡೆ, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿಕೆಯನ್ನು ಸಮರ್ಥಿಸಿಕೊಂಡ ಸಂಸದೆ ಶೋಭಾ ಕರಂದ್ಲಾಜೆ ಅವರು, ನಮ್ಮದೇ ಸರ್ಕಾರ ಇದೆ, ದೇಶದ ಎಲ್ಲರಿಗೂ ಉಚಿತ ಲಸಿಕೆ ನೀಡುವುದು ನಮ್ಮ ಗುರಿ. ಇದಕ್ಕಾಗಿ ಸರ್ಕಾರ ಹಣ ಖರ್ಚು ಮಾಡುತ್ತಿದೆ. ಹೀಗಾಗಿಯೇ ಉಚಿತವಾಗಿ ಕೊಡುತ್ತೇವೆ ಎನ್ನುವುದರಲ್ಲಿ ತಪ್ಪಿಲ್ಲ. ಆದಷ್ಟುಬೇಗ ರಾಜ್ಯದ ಜನರಿಗೆ ಕೊರೋನಾ ಲಸಿಕೆ ಸಿಗಲಿದೆ ಎಂದರು.

PREV
click me!

Recommended Stories

ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ಮಳವಳ್ಳಿಗೆ ಆಗಮನ ನಿರೀಕ್ಷೆ
ಧಾರವಾಡ: ಉದ್ಯೋಗಾಕಾಂಕ್ಷಿಗಳಿಗೆ ಸಿಎಂ ಭೇಟಿ ಮಾಡಿಸಲು ಹೈಕೋರ್ಟ್ ಸೂಚನೆ