ಭೀಮಾತೀರದಲ್ಲಿ ಮತ್ತೆ ಹರಿದ ನೆತ್ತರು, ಗುಂಡಿನ ದಾಳಿಯಲ್ಲಿ ಓರ್ವ ಸಾವು

Published : Feb 17, 2019, 09:34 PM IST
ಭೀಮಾತೀರದಲ್ಲಿ ಮತ್ತೆ ಹರಿದ ನೆತ್ತರು, ಗುಂಡಿನ ದಾಳಿಯಲ್ಲಿ ಓರ್ವ ಸಾವು

ಸಾರಾಂಶ

ಭೀಮಾತೀರದಲ್ಲಿ ಮತ್ತೊಮ್ಮೆ ಗುಂಡಿನ ಮೊರೆತ ಕೇಳಿಬಂದಿದೆ. ಅಪರಿಚಿತರು ನಡೆಸಿದ ಗುಂಡಿನ ದಾಳಿಯಲ್ಲಿಓರ್ವ ಮೃತಪಟ್ಟಿದ್ದಾನೆ.

ವಿಜಯಪುರ, [ಫೆ.17]: ಜಿಲ್ಲೆಯ ಇಂಡಿ ತಾಲೂಕಿನ ಹಲಸಂಗಿ ಗ್ರಾಮದಲ್ಲಿ ಭಾನುವಾರ ಗುಂಡಿನ ದಾಳಿ ನಡೆದಿದ್ದು,  ದಾಳಿಯಲ್ಲಿ ಓರ್ವ ಸಾವನ್ನಪ್ಪಿದ್ದಾನೆ.

ಅರ್ಜುನ್​ ಡೊಳ್ಳಿ (52) ಮೃತ. ಇಂಡಿ ತಾಲೂಕಿನ ಹಲಸಂಗಿ ಗ್ರಾಮದಲ್ಲಿ ಭಾನುವಾರ ಮಧ್ಯಾಹ್ನ ಈ ದಾಳಿ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. 

ಮೊದಲಿಗೆ ಈತನ ಮೇಲೆ ಗುಂಡಿನ ದಾಳಿ ನಡೆಸಿರುವ ದುಷ್ಕರ್ಮಿಗಳು ಬಳಿಕ ಮಾರಕಾಸ್ತ್ರಗಳಿಂದ ಮನಬಂದಂತೆ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ. 

ಈ ಬಗ್ಗೆ ಝಳಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾಗಿರು ದಾಳಿಕೋರರ ಬಂಧನಕ್ಕೆ ಬಲೆ ಬೀಸಿದ್ದಾರೆ. ಈ ತರಹದ ಹತ್ಯೆ ಇದೇ ಮೊದಲಲ್ಲ. ಈ ಹಿಂದೆ ಹಲವು ಶೂಟೌಟ್ ಗಳಾಗಿರುವ ಪ್ರಕರಣಗಳು ಇವೆ. 

PREV
click me!

Recommended Stories

ಬಸವತತ್ವ ಪ್ರಚಾರಕ, ವಚನ ಶಿಲಾ ಮಂಟಪದ ರೂವಾರಿ ಚನ್ನಬಸವ ಶ್ರೀಗಳು ಲಿಂಗೈಕ್ಯ
ಹಿಂದೂಗಳು ಒಂದಾಗದಿದ್ರೆ ದೇಶ, ಸಂವಿಧಾನ ಉಳಿಯಲ್ಲ: ಶಾಸಕ ಬಸನಗೌಡ ಪಾಟೀಲ ಯತ್ನಾಳ