ಸದಾಶಿವ ಆಯೋಗದ ಜಾರಿಗೊಳಿಸಿ: ಮಾಜಿ ಡಿಸಿಎಂ ಕಾರಜೋಳ

By Kannadaprabha News  |  First Published Dec 15, 2023, 3:00 AM IST

ಮಾದಿಗ ಸಮಾಜವು ಆರ್ಥಿಕವಾಗಿ ಅತ್ಯಂತ ಹಿಂದುಳಿದಿದೆ‌. ನಮ್ಮ ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ಆಯೋಗದ ವರದಿಯನ್ನು ಕೇಂದ್ರಕ್ಕೆ ಶಿಫಾರಸು ಮಾಡಿದನ್ನು ಇದೇ ಸಂದರ್ಭದಲ್ಲಿ ಸ್ಮರಿಸಿದ ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ 


ಬೆಳಗಾವಿ(ಡಿ.15): ಅನ್ಯಾಯಕ್ಕೆ ಒಳಗಾಗಿರುವ ಮಾದಿಗ ಸಮುದಾಯಕ್ಕೆ ನ್ಯಾ. ಸದಾಶಿವ ಆಯೋಗದ ವರದಿವನ್ನು ಜಾರಿಗೊಳಿಸುವ ಮೂಲಕ ನ್ಯಾಯ ಒದಗಿಸಬೇಕೆಂದು ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು.

ನಗರದ ಕುಮಾರ ಗಂಧರ್ವ ಕಲಾ ಭವನದಲ್ಲಿ ಗುರುವಾರ ಹಮ್ಮಿಕೊಂಡ ಮಾದಿಗ ಮುನ್ನೆಡೆ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ಮಾದಿಗ ಸಮಾಜವು ಆರ್ಥಿಕವಾಗಿ ಅತ್ಯಂತ ಹಿಂದುಳಿದಿದೆ‌. ನಮ್ಮ ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ಆಯೋಗದ ವರದಿಯನ್ನು ಕೇಂದ್ರಕ್ಕೆ ಶಿಫಾರಸು ಮಾಡಿದನ್ನು ಇದೇ ಸಂದರ್ಭದಲ್ಲಿ ಸ್ಮರಿಸಿದರು.

Tap to resize

Latest Videos

ಬಿ.ಎಸ್.ಯಡಿಯೂರಪ್ಪ ಸದನಕ್ಕೆ ಬಂದು ಮಾತಾಡಲಿ: ಡಿ.ಕೆ.ಶಿವಕುಮಾರ್ ಟಾಂಗ್

ಶಾಸಕ ದುರ್ಯೋಧನ ಐಹೊಳೆ ಮಾತನಾಡಿ, ಮಾದಿಗ ಸಮಾಜ ಶೈಕ್ಷಣಿಕ, ಆರ್ಥಿಕ ಹಾಗೂ ರಾಜಕೀಯವಾಗಿ ಬಹಳ ಹಿಂದುಳಿದಿದೆ. ನ್ಯಾ. ಸದಾಶಿವ ಆಯೋಗ ವರದಿ ಮಂಡಿಸಿ ನ್ಯಾಯ‌ ಒದಗಿಸಬೇಕಿದೆ. ಜನರನ್ನು ಮೇಲೆತ್ತುವ ಕೆಲಸ ಮಾಡಬೇಕು ಎಂದರು.

ಈ ಸಂದರ್ಭದಲ್ಲಿ ಶಾಸಕ ಬಸವರಾಜ ಮತ್ತಿಮಡು, ಭಾರತಿ ಮರುಳು, ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಮುಖಂಡರಾದ ಉಮೇಶ ಕಾರಜೋಳ, ಮುತ್ತಣ್ಣ ಬೆನ್ನೂರ, ಬಾಳಪ್ಪ ಬೂದಿಹಾಳ, ಚಂದ್ರಕಾಂತ ಕಾಂತಿಕಾರ, ಸುಧಾಕರ ಸೂರ್ಯವಂಶಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

click me!