ಸಿದ್ದು ವಿರುದ್ಧ ಪ್ರಾಸಿಕ್ಯೂಷನ್: ತನಿಖೆ ಎದುರಿಸಬೇಕೆ ಹೊರತು ರಾಜ್ಯಪಾಲರಿಗೆ ಅಗೌರವ ತೋರಿಸಬಾರದು, ಭೈರಪ್ಪ

By Kannadaprabha NewsFirst Published Aug 25, 2024, 6:38 AM IST
Highlights

ರಾಜ್ಯಪಾಲರು ಥಾವರಚಂದ್ ಗಹ್ಲೋತ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದಾಗ ಅದನ್ನು ರಾಜ್ಯ ಸರ್ಕಾರ ಸಮರ್ಥವಾಗಿ ಎದುರಿಸುವ ಬದಲಿಗೆ ಅಗೌರವ ತರುವಂತೆ ನಡೆದುಕೊಳ್ಳುವುದು ಸರಿಯಲ್ಲ. ಇಂತಹ ದೂರುಗಳು ಬಂದಾಗ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಆದೇಶ ನೀಡಬಹುದು. ಆರೋಪ ಹೊತ್ತವರು ಪ್ರಾಮಾಣಿಕರಿದ್ದರೆ ಎದುರಿಸಬೇಕಷ್ಟೆ: ಹಿರಿಯ ಸಾಹಿತಿ ಡಾ.ಎಸ್.ಎಲ್. ಭೈರಪ್ಪ 
 

ಮೈಸೂರು(ಆ.25):  ಆರೋಪ ಹೊತ್ತವರು ಪ್ರಾಮಾಣಿಕರಾಗಿದ್ದರೆ ತನಿಖೆ ಎದುರಿಸಬೇಕೆ ಹೊರತು, ಅದನ್ನು ಬಿಟ್ಟು ರಾಜ್ಯಪಾಲರ ಹುದ್ದೆಗೆ ಅಗೌರವ ತೋರಿಸಬಾರದು ಎಂದು ಹಿರಿಯ ಸಾಹಿತಿ ಡಾ.ಎಸ್.ಎಲ್. ಭೈರಪ್ಪ ಅಭಿಪ್ರಾಯಪಟ್ಟರು. ನಗರದ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಶನಿವಾರ ಮೇಘಾಲಯ ರಾಜ್ಯಪಾಲ ಸಿ.ಎಚ್. ವಿಜಯಶಂಕರ್ ಅವರಿಗೆ ಅಭಿನಂದನೆ ಸಲ್ಲಿಸಿ ಅವರು ಮಾತನಾಡಿದರು.

ರಾಜ್ಯಪಾಲರು ಥಾವರಚಂದ್ ಗಹ್ಲೋತ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದಾಗ ಅದನ್ನು ರಾಜ್ಯ ಸರ್ಕಾರ ಸಮರ್ಥವಾಗಿ ಎದುರಿಸುವ ಬದಲಿಗೆ ಅಗೌರವ ತರುವಂತೆ ನಡೆದುಕೊಳ್ಳುವುದು ಸರಿಯಲ್ಲ. ಇಂತಹ ದೂರುಗಳು ಬಂದಾಗ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಆದೇಶ ನೀಡಬಹುದು. ಆರೋಪ ಹೊತ್ತವರು ಪ್ರಾಮಾಣಿಕರಿದ್ದರೆ ಎದುರಿಸಬೇಕಷ್ಟೆ ಎಂದರು.

Latest Videos

ಭೈರಪ್ಪನವರಂತಹ ಲೇಖಕರಿಗೂ ಅಂಕಣ ಬರೆಯೋದು ಕಷ್ಟವಾಯ್ತು: ವಿಶ್ವೇಶ್ವರ ಭಟ್

ರಾಜ್ಯಪಾಲರ ಹುದ್ದೆಯು ಪರಮೋಚ್ಛ ಸಂವಿಧಾನಿಕ ಹುದ್ದೆ. ಕಾಲಾನಂತರ ಅದು ಗಂಡಾಂತರಕಾರಿ ಸ್ಥಾನವಾಗಿದೆ. ದೇಶದಲ್ಲಿ ವಿರೋಧ ಪಕ್ಷಗಳು ಹುಟ್ಟಿಕೊಂಡ ಮೇಲೆ ರಾಜ್ಯಪಾಲರು ತಮ್ಮನ್ನು ನೇಮಿಸಿದ ಪಕ್ಷದ ಪರವಾಗಿ ಹಾಗೂ ವಿರೋಧ ಪಕ್ಷದ ನಿಲುವಿಗೆ ವಿರುದ್ಧವಾಗಿ ವರ್ತಿಸುತ್ತಾರೆ ಎಂಬ ಆರೋಪ ಬರಲಾರಂಭಿಸಿತು. ಬಳಿಕ ರಾಜ್ಯಪಾಲರು ಭ್ರಷ್ಟಾಚಾರ ತಡೆಯಲು ಸಾಧ್ಯವಾಗದ ಸನ್ನಿವೇಶ ಸೃಷ್ಟಿಯಾಯಿತು ಎಂದು ಅವರು ಹೇಳಿದರು.

ದ್ವಾರಕ ದೇವಸ್ಥಾನ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕೆಲವು ಎಡಪಂಥೀಯರು ನ್ಯಾಯಾಲಯಕ್ಕೆ ನೀಡಿದ ತಪ್ಪು ಮಾಹಿತಿ ನೀಡಿದವರಿಗೆ ಯಾವುದೇ ಶಿಕ್ಷೆ ನೀಡಲಿಲ್ಲ ಎಂದರು.

ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಮಾತನಾಡಿ, ಹೊರಗಿನಿಂದ ರಾಜ್ಯಪಾಲರಾಗಿ ಬಂದವರಿಗೆ ನಾವೇ ಅವಮಾನ ಮಾಡಬಾರದು. ನಾನಾ ಸಂವಿಧಾನಿಕ ಹುದ್ದೆಯನ್ನು ಅಲಂಕರಿಸಿ ಅಪಾರ ಅನುಭವ ಹೊಂದಿರುವ ಆಧಾರದ ಮೇಲೆ ಅವರನ್ನು ರಾಜ್ಯಪಾಲರ ಹುದ್ದೆಗೆ ಆಯ್ಕೆ ಮಾಡಲಾಗಿರುತ್ತದೆ. ಅದನ್ನು ಅರಿತು ಅವರನ್ನು ಗೌರವಿಸಬೇಕು ಎಂದು ಸಲಹೆ ನೀಡಿದರು.

click me!