
ಗದಗ(ಅ.10): ಜಿಲ್ಲೆ ರೋಣ ತಾಲೂಕಿನ ಅಬ್ಬಿಗೇರಿ ಹಿರೇಮಠದ ಶ್ರೀ ಸೋಮಶೇಖರ ಶಿವಾಚಾರ್ಯ ಸ್ವಾಮೀಜಿಗಳು ಇಂದು(ಶನಿವಾರ) ಬೆಳಿಗ್ಗೆ ಲಿಂಗೈಕ್ಯರಾಗಿದ್ದಾರೆ.
ಇಂದು ಬೆಳಗಿನ ಜಾವ ಗದಗ ನಗರದ ಜಿಮ್ಸ್ ಆಸ್ಪತ್ರೆಯಲ್ಲಿ ತೀವ್ರ ಹೃದಯಾಘಾತದಿಂದ ಶ್ರೀ ಸೋಮಶೇಖರ ಶಿವಾಚಾರ್ಯ ಶ್ರೀಗಳು ಇಹಲೋಕ ತ್ಯಜಿಸಿದ್ದಾರೆ.
ಕಾರ್ಮಿಕರ ಅಭಾವಕ್ಕೆ ಎದೆಗುಂದದ ಅನ್ನದಾತ: ರೈತನ ಹೊಸ ಐಡಿಯಾಗೆ ಮಾರು ಹೋದ ಜನ..!
ಶ್ರೀ ಸೋಮಶೇಖರ ಶಿವಾಚಾರ್ಯ ಶ್ರೀಗಳಿಗೆ 69 ವರ್ಷ ವಯಸ್ಸಾಗಿತ್ತು ಎಂದು ತಿಳಿದು ಬಂದಿದೆ. ಇಂದು ಸಂಜೆ ಅಬ್ಬಿಗೇರಿ ಗ್ರಾಮದಲ್ಲಿ ಅಂತ್ಯ ಸಂಸ್ಕಾರ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಶ್ರೀಗಳ ಅಗಲಿಕೆಯಿಂದ ಭಕ್ತವೃಂದ ಶೋಕಸಾಗರದಲ್ಲಿ ಮುಳುಗಿದೆ. ಸೋಮಶೇಖರ ಶಿವಾಚಾರ್ಯ ಸ್ವಾಮೀಜಿಗಳು ನಿಧನಕ್ಕೆ ಮಠದ ಭಕ್ತರು ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.