ಶ್ರೀರಾಮ ಸೇನೆ ನ. 7 ರಿಂದ ಒಂದು ವಾರ ಕಾಲ ದತ್ತಮಾಲಾ ಅಭಿಯಾನವನ್ನು ಹಮ್ಮಿಕೊಂಡಿದೆ. ನ.7 ರಂದು ದತ್ತಮಾಲೆಯನ್ನು ಧರಿಸಲಿರುವ ದತ್ತ ಭಕ್ತರು ನ. 13ರಂದು ದತ್ತಪೀಠಕ್ಕೆ ಆಗಮಿಸಲಿದ್ದಾರೆ ಎಂದು ಶ್ರೀರಾಮ ಸೇನೆಯ ರಾಜ್ಯ ಕಾರ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಚಿಕ್ಕಮಗಳೂರು (ಅ.12) : ಶ್ರೀರಾಮ ಸೇನೆ ನ. 7 ರಿಂದ ಒಂದು ವಾರ ಕಾಲ ದತ್ತಮಾಲಾ ಅಭಿಯಾನವನ್ನು ಹಮ್ಮಿಕೊಂಡಿದೆ. ನ.7 ರಂದು ದತ್ತಮಾಲೆಯನ್ನು ಧರಿಸಲಿರುವ ದತ್ತ ಭಕ್ತರು ನ. 13ರಂದು ದತ್ತಪೀಠಕ್ಕೆ ಆಗಮಿಸಲಿದ್ದಾರೆ ಎಂದು ಶ್ರೀರಾಮ ಸೇನೆಯ ರಾಜ್ಯ ಕಾರ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
‘ರಕ್ತಚೆಲ್ಲಿಯಾದ್ರೂ ದತ್ತಪೀಠವನ್ನ ಹಿಂದೂ ಪೀಠವಾಗಿಸ್ತೇವೆ’
undefined
ನಾಡಿನ ಸಾಧು ಸಂತರು ಹಾಗೂ ಶ್ರೀರಾಮ ಸೇನೆಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರ ನೇತೃತ್ವದಲ್ಲಿ ನ. 13 ರಂದು ದತ್ತಪೀಠಕ್ಕೆ ತೆರಳಿ ದತ್ತಪಾದುಕೆಗಳ ದರ್ಶನ ಮಾಡಿ ಶ್ರೀ ಗುರು ದತ್ತಾತ್ರೇಯ ಹೋಮ, ಪೂಜೆ ಹಾಗೂ ಸಾಧು ಸಂತರ ಸಾನ್ನಿಧ್ಯದಲ್ಲಿ ಧಾರ್ಮಿಕ ಸಭೆ, ಪ್ರಸಾದ ವಿನಿಯೋಗ ಕಾರ್ಯಕ್ರಮ ಜರುಗಲಿದೆ. ಈ ಎಲ್ಲಾ ಕಾರ್ಯಕ್ರಮಗಳಿಗೆ ಜಿಲ್ಲಾಡಳಿತ ಅನುಮತಿ ನೀಡಬೇಕೆಂದು ಮನವಿ ಮಾಡಿದರು.
ಹಿಂದೂಗಳ ಪವಿತ್ರ ಯಾತ್ರಾ ಕೇಂದ್ರಗಳಲ್ಲಿ ಒಂದಾಗಿರುವ ದತ್ತಪೀಠವನ್ನು ಇಸ್ಲಾಮಿಕರಣದಿಂದ ವಿಮುಕ್ತಿಗೊಳಿಸಿ ಹಿಂದೂಗಳ ಪವಿತ್ರ ಯಾತ್ರಾ ಕೇಂದ್ರವಾಗಿಸಲು ಕೈಗೊಂಡಿರುವ ಹೋರಾಟದ ಭಾಗವಾಗಿ ಕಳೆದ 17 ವರ್ಷಗಳಿಂದ ಶ್ರೀರಾಮ ಸೇನೆಯ ದತ್ತಮಾಲಾ ಅಭಿಯಾನದ ಮೂಲಕ ಅವಿರತ ಹೋರಾಟ ನಡೆಸುತ್ತಿದೆ. ದತ್ತಪೀಠದ ವಿವಾದವನ್ನು ಬಗೆಹರಿಸುವಂತೆ ಸುಪ್ರೀಂ ಕೋರ್ಚ್ ಕಳೆದ ವರ್ಷವೇ ತೀರ್ಪು ನೀಡಿದ್ದರೂ ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ, ಅದ್ದರಿಂದ ದತ್ತಪೀಠದಲ್ಲಿರುವ ಗೋರಿಗಳನ್ನು ಅಲ್ಲಿಂದ 14 ಕಿಮೀ ದೂರದಲ್ಲಿರುವ ನಾಗೇನಹಳ್ಳಿ ಬಾಬಾ ಬುಡನ್ ದರ್ಗಾಕ್ಕೆ ಸ್ಥಳಾಂತರಿಸಿ ದತ್ತಪೀಠವನ್ನು ಹಿಂದೂಗಳಿಗೆ ಬಿಟ್ಟುಕೊಡಬೇಕೆಂದು ಆಗ್ರಹಿಸಿದರು.
ಚಿಕ್ಕಮಗಳೂರು: ವಿಪರೀತ ಕಾಡಾನೆ ಕಾಟ, ಓಡಿಸಲು ಹರಸಾಹಸ ಪಡುತ್ತಿರುವ ಅರಣ್ಯ ಇಲಾಖೆ
ದತ್ತಾತ್ರೇಯ ವಿಗ್ರಹ ಪ್ರತಿಷ್ಠಾಪಿಸಿ:
ದತ್ತಪೀಠದ ಗುಹಾಂತರ ದೇವಾಲಯದಲ್ಲಿ ಶಾಶ್ವತ ಹಿಂದೂ ಅರ್ಚಕರ ನೇಮಕವಾಗಿ ತ್ರಿಕಾಲ ಪೂಜೆ ನಡೆಸಬೇಕು. ದತ್ತಪೀಠದಲ್ಲಿ ಇಸ್ಲಾಂನ ಯಾವುದೇ ಚಟುವಟಿಕೆಗೆ ಅವಕಾಶ ನೀಡಬಾರದು. ಪೀಠದ ಪವಿತ್ರತೆಗೆ ದಕ್ಕೆ ತರುವ ಗೋರಿಗಳನ್ನು ಅಲ್ಲಿಂದ ಸ್ಥಳಾಂತರಿಸಬೇಕು. ದತ್ತಾತ್ರೇಯ ವಿಗ್ರಹವನ್ನು ಕೂಡಲೇ ಪ್ರತಿಷ್ಠಾಪಿಸಲು ಕ್ರಮ ಕೈಗೊಳ್ಳಬೇಕು. ಪೀಠದಲ್ಲಿದ್ದ ಅಮೂಲ್ಯ ವಿಗ್ರಹಗಳು, ಕಾಣಿಕೆ ವಸ್ತುಗಳು ಕಾಣೆಯಾಗಿರುವ ಮತ್ತು ಆಸ್ತಿಪಾಸ್ತಿ ಅಕ್ರಮ ಹಸ್ತಾಂತರ ಹಾಗೂ ಮಾರಾಟವಾಗಿದ್ದರ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಂಡು ಅವುಗಳನ್ನು ಪುನರ್ ಪ್ರತಿಷ್ಠಾಪನೆಯಾಗಬೇಕು, ದತ್ತಪೀಠಕ್ಕೆ ಶ್ರೀ ದತ್ತಾತ್ರೇಯ ಪೀಠ ಎಂಬ ಒಂದೇ ಹೆಸರು ಘೋಷಿಸಬೇಕು. ದತ್ತಮಾಲಾ ಅಭಿಯಾನದ ಸಮಾರೋಪ ಕಾರ್ಯಕ್ರಮದೊಳಗೆ ಅರ್ಚಕರನ್ನು ನೇಮಕ ಮಾಡದೆ ಹೋದರೆ ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರ ಹೋರಾಟ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.