ಎಲ್.ಕೆ.ಅಡ್ವಾಣಿ ಅವರಿಗೆ ಭಾರತ ರತ್ನ ಕೊಡಲಿ ಬಿಡಿ ಪಾಪ, ಕೊಡಬೇಡಿ ಅಂದವರು ಯಾರು?’ ಎಂದ ಅವರು ಸಿದ್ಧಗಂಗಾ ಶ್ರೀಗಳಿಗೆ ಭಾರತ ರತ್ನ ಸಿಗದ ಕುರಿತು ಬೇಸರ ವ್ಯಕ್ತಪಡಿಸಿದರು. ಸಿದ್ಧಗಂಗಾ ಶ್ರೀಗಳಿಗೂ ಭಾರತ ರತ್ನ ನೀಡುವಂತೆ ಕೇಂದ್ರಕ್ಕೆ ನಾವು ಪತ್ರಬರೆದಿದ್ದೆವು: ಮುಖ್ಯಮಂತ್ರಿ ಸಿದ್ದರಾಮಯ್ಯ
ದಾವಣಗೆರೆ(ಫೆ.04): ಬಿಜೆಪಿ ಹಿರಿಯ ಮುಖಂಡ ಎಲ್.ಕೆ.ಅಡ್ವಾಣಿ ಅವರಿಗೆ ಭಾರತ ರತ್ನ ಘೋಷಣೆಯಾದ ಬೆನ್ನಲ್ಲೇ ತ್ರಿವಿಧ ದಾಸೋಹಿ ಸಿದ್ಧಗಂಗಾ ಶ್ರೀಗಳಿಗೂ ದೇಶದ ಈ ಅತ್ಯುನ್ನತ ಗೌರವ ಸಿಗಬೇಕೆಂಬ ಬೇಡಿಕೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೆ ಪ್ರಸ್ತಾಪಿಸಿದ್ದಾರೆ.
ಶನಿವಾರ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ‘ಎಲ್.ಕೆ.ಅಡ್ವಾಣಿ ಅವರಿಗೆ ಭಾರತ ರತ್ನ ಕೊಡಲಿ ಬಿಡಿ ಪಾಪ, ಕೊಡಬೇಡಿ ಅಂದವರು ಯಾರು?’ ಎಂದ ಅವರು ಸಿದ್ಧಗಂಗಾ ಶ್ರೀಗಳಿಗೆ ಭಾರತ ರತ್ನ ಸಿಗದ ಕುರಿತು ಬೇಸರ ವ್ಯಕ್ತಪಡಿಸಿದರು. ಸಿದ್ಧಗಂಗಾ ಶ್ರೀಗಳಿಗೂ ಭಾರತ ರತ್ನ ನೀಡುವಂತೆ ಕೇಂದ್ರಕ್ಕೆ ನಾವು ಪತ್ರಬರೆದಿದ್ದೆವು ಎಂದು ಹೇಳಿದರು.
Breaking: ಬಿಜೆಪಿಯ ಭೀಷ್ಮ ಎಲ್ ಕೆ ಅಡ್ವಾಣಿಗೆ ಭಾರತರತ್ನ ಘೋಷಣೆ
ಸಿದ್ದರಾಮಯ್ಯ ಅವರು ಈ ಹಿಂದೆ ಮುಖ್ಯಮಂತ್ರಿಯಾಗಿದ್ದಾಗಲೂ ಸಿದ್ಧಗಂಗಾ ಶ್ರೀಗಳಿಗೆ ಭಾರತ ರತ್ನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದರು.