ಸೋಮವಾರಪೇಟೆ ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಿರುವ ಡಾ.ಶಿವಕುಮಾರ ಸ್ವಾಮೀಜಿ ಬಸ್ ನಿಲ್ದಾಣವನ್ನು ತುಮಕೂರಿನ ಸಿದ್ಧಗಂಗಾ ಮಠಾಧ್ಯಕ್ಷರಾದ ಸಿದ್ದಲಿಂಗ ಮಹಾಸ್ವಾಮೀಜಿ ಶಾಸಕರಾದ ಎಂ.ಪಿ. ಅಪ್ಪಚ್ಚುರಂಜನ್ ಹಾಗೂ ಪರಮಪೂಜ್ಯ ಸ್ವಾಮೀಜಿಗಳು ಸೋಮವಾರ ಸಾರ್ವಜನಿಕರಿಗೆ ಸಮರ್ಪಿಸಿದರು.
ಕೊಡಗು (ಜ.09): ಸೋಮವಾರಪೇಟೆ ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಿರುವ ಡಾ.ಶಿವಕುಮಾರ ಸ್ವಾಮೀಜಿ ಬಸ್ ನಿಲ್ದಾಣವನ್ನು ತುಮಕೂರಿನ ಸಿದ್ಧಗಂಗಾ ಮಠಾಧ್ಯಕ್ಷರಾದ ಸಿದ್ದಲಿಂಗ ಮಹಾಸ್ವಾಮೀಜಿ ಶಾಸಕರಾದ ಎಂ.ಪಿ. ಅಪ್ಪಚ್ಚುರಂಜನ್ ಹಾಗೂ ಪರಮಪೂಜ್ಯ ಸ್ವಾಮೀಜಿಗಳು ಸೋಮವಾರ ಸಾರ್ವಜನಿಕರಿಗೆ ಸಮರ್ಪಿಸಿದರು. ಬಳಿಕ ಸೋಮವಾರಪೇಟೆಯ ಡಾ.ಶಿವಕುಮಾರ ಸ್ವಾಮೀಜಿ ಜಯಂತ್ಯುತ್ಸವ ಸಮಿತಿ ವತಿಯಿಂದ ಸಾಕ್ಷಿ ಕನ್ವೆನ್ಷನ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಗುರುವಂದನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಡಾ.ಶಿವಕುಮಾರ ಸ್ವಾಮೀಜಿ ಅವರ ಬದುಕು ಶಿಸ್ತು ಬದ್ಧ ಜೀವನ ಸ್ಮರಣೀಯ, ಜ್ಞಾನ, ಪ್ರಸಾದ ಮತ್ತು ಸಮಾಜದ ಕಾಯಕಕ್ಕೇ ಹೆಚ್ಚಿನ ಒತ್ತು ನೀಡಿದ್ದರು.
ಗ್ರಾಮೀಣ ಪ್ರದೇಶದ ಬಡ ಮಕ್ಕಳಿಗೆ ಹೆಚ್ಚಿನ ಶಿಕ್ಷಣ ನೀಡಲು ಶ್ರಮಿಸಿದರು ಎಂದರು. ಆಕಾಶ, ಸಮುದ್ರವನ್ನು ಹೇಗೆ ಒಂದಕ್ಕೊಂದು ಹೋಲಿಕೆ ಮಾಡಲು ಸಾಧ್ಯವಿಲ್ಲವೋ ಹಾಗೆಯೇ ಶಿವಕುಮಾರ ಸ್ವಾಮೀಜಿಗೆ ಅವರೇ ಹೋಲಿಕೆ. ಲಕ್ಷಾಂತರ ಜನರ ಬದುಕಿಗೆ ದಾರಿದೀಪ ಬೆಳಗಿದ್ದಾರೆ ಎಂದು ಸಿದ್ದಲಿಂಗ ಮಹಾಸ್ವಾಮೀಜಿ ಅವರು ನುಡಿದರು. ಸೋಮವಾರಪೇಟೆಯಲ್ಲಿ ನಿರ್ಮಿಸಲಾಗಿರುವ ಶಿವಕುಮಾರ ಸ್ವಾಮೀಜಿ ಅವರ ಬಸ್ಸು ನಿಲ್ದಾಣ ಅದೊಂದು ಪ್ರಾರ್ಥನಾ ಮಂದಿರ ಎಂದು ವರ್ಣಿಸಿದರು. ಸ್ಥಳೀಯ ಶಾಸಕರು ಜಾತಿ, ಮತ, ಮಂಥವನ್ನು ಬಿಟ್ಟು ರಾಜಕೀಯ ಮುತ್ಸದ್ದಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಜನಹಿತ ಕಾರ್ಯ ಮಾಡುತ್ತಿದ್ದಾರೆ ಎಂದು ಸಿದ್ದಲಿಂಗ ಮಹಾಸ್ವಾಮೀಜಿ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
undefined
ರಾಜ್ಯದ ಯಾವುದೇ ಶಾಸಕರು ಮಾಡದ ಸಾಹಸ ಸುಧಾಕರ್ ಮಾಡಿದ್ದಾರೆ: ಸಚಿವ ಸೋಮಶೇಖರ್
ಶಾಸಕರಾದ ಎಂ.ಪಿ. ಅಪ್ಪಚ್ಚುರಂಜನ್ ಅವರು ಮಾತನಾಡಿ ಶಿವಕುಮಾರ ಸ್ವಾಮೀಜಿ ಅವರು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿದರು. ಮಕ್ಕಳ ಬಗ್ಗೆ ಇದ್ದ ಗೌರವ ಪ್ರೀತಿ ಸ್ಮರಣೀಯವಾದದ್ದು ಎಂದರು. ಶಿವಕುಮಾರ ಸ್ವಾಮೀಜಿ ಅವರ ತಾಳ್ಮೆ, ಸಹನೆ ಮತ್ತು ಸಮಯಪ್ರಜ್ಞೆಯನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಳ್ಳುವಂತಾಗಬೇಕು. ಅವರ ಆದರ್ಶ ಬದುಕು ಸ್ಮರಣೀಯ ಎಂದರು. ವಿರಾಜಪೇಟೆಯ ಅರಮೇರಿ ಕಳಂಚೇರಿ ಮಠದ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಅವರು ಮಾತನಾಡಿ ಬಸ್ಸು ನಿಲ್ದಾಣದಲ್ಲಿ ಶಾಂತಿ ಸಮಾಧಾನ, ನೆರಳು ಸಿಗುತ್ತದೆ. ಆ ನಿಟ್ಟಿನಲ್ಲಿ ಡಾ.ಶಿವಕುಮಾರ ಸ್ವಾಮೀಜಿ ಅವರ ಹೆಸರಿಟ್ಟಿರುವುದು ಸ್ಮರಣೀಯ ಎಂದರು.
ಬಸವ ಪಟ್ಟಣದ ತೋಂಟದಾರ್ಯ ಸಂಸ್ಥಾನ ಮಠದ ಸ್ವತಂತ್ರ ಬಸವಲಿಂಗ ಸ್ವಾಮೀಜಿ ಅವರು ಮಾತನಾಡಿ ಶಿವಕುಮಾರ ಸ್ವಾಮೀಜಿ ಅವರು ಹಿಮಾಲಯ ಪರ್ವತಕ್ಕಿಂತ ಎತ್ತರದ ವ್ಯಕ್ತಿತ್ವ ಹೊಂದಿದ್ದರು ಎಂದು ನುಡಿದರು. ಸಮಾಜಕ್ಕಾಗಿ, ಮಕ್ಕಳ ಭವಿಷ್ಯಕ್ಕಾಗಿ ದುಡಿದಿದ್ದಾರೆ. ಬಸವಣ್ಣನವರ ತತ್ವಗಳನ್ನು ಅಳವಡಿಸಿಕೊಂಡು ದೊಡ್ಡ ಆಲದ ಮರದ ರೀತಿ ಕೆಲಸ ಮಾಡಿದ್ದಾರೆ ಎಂದು ಅವರು ಹೇಳಿದರು. ಕೊಡ್ಲಿಪೇಟೆಯ ಕಿರಿಕೊಡ್ಲಿ ಮಠದ ಸದಾಶಿವ ಸ್ವಾಮೀಜಿ ಅವರು ಮಾತನಾಡಿ ರಾಜ್ಯದಲ್ಲಿ ಮಠಗಳು ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚು ಒತ್ತು ನೀಡಿವೆ. ಬಸ್ಸು ನಿಲ್ದಾಣ ಬಳಿ ಕುಡಿಯುವ ನೀರಿನ ಘಟಕ ಕಲ್ಪಿಸುವಂತಾಗಬೇಕು ಎಂದರು.
ಅಮ್ಮತ್ತಿಯ ಕನ್ನಡ ಮಠದ ಚನ್ನಬಸವ ದೇಶಿಕೇಂದ್ರ ಸ್ವಾಮೀಜಿ, ಪ್ರಮುಖರಾದ ಎಚ್.ಎಸ್. ಚಂದ್ರಮೌಳಿ ಅವರು ಮಾತನಾಡಿದರು. ಕೊಡ್ಲಿಪೇಟೆಯ ಕಲ್ಲು ಮಠದ ಮಹಾಂತ ಸ್ವಾಮೀಜಿ, ತೊರೆನೂರು ವಿರಕ್ತ ಮಠದ ಮಲ್ಲೇಶ ಸ್ವಾಮೀಜಿ, ಅಂಕನಹಳ್ಳಿ ತಪೋಕ್ಷೇತ್ರದ ಮನೆಹಳ್ಳಿ ಮಠದ ಮಹಾಂತ ಶಿವಲಿಂಗ ಸ್ವಾಮೀಜಿ, ಸೋಮವಾರಪೇಟೆಯ ಮಲ್ಲಿಕಾರ್ಜುನ ಸ್ವಾಮೀಜಿ, ಚಿಕ್ಕಬಳ್ಳಾಪುರದ ನಿಶ್ಚಲ ದೇಶಿಕೇಂದ್ರ ಸ್ವಾಮೀಜಿ, ಅರಕಲಗೋಡು ಚಿಲುಮೆ ಮಠದ ಜಯದೇವ ಸ್ವಾಮೀಜಿ, ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಪಿ.ಕೆ.ಚಂದ್ರ, ಪ.ಪಂ.ಸ್ಥಾಯಿ ಸಮಿತಿ ಅಧ್ಯಕ್ಷರಾದ ಜಯಂತಿ ಶಿವಕುಮಾರ, ಮಾದ್ರೆ ಮುದ್ದಿನಕಟ್ಟೆ ಮಠದ ಅಭಿನವ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ, ಶಿಡಿಗಳಲೆ ಮಠದ ಇಮ್ಮಡಿ ಶಿವಲಿಂಗ ಸ್ವಾಮೀಜಿ.
ಅಲ್ಪಸಂಖ್ಯಾತರ ಅಭಿವೃದ್ಧಿಗೆ ಹಿನ್ನಡೆ ಮಾಡಿಲ್ಲ: ಸಚಿವ ಎಂಟಿಬಿ ನಾಗರಾಜ್
ಕಲ್ಲಳ್ಳಿ ಮಠದ ರುದ್ರಮುನಿ ಸ್ವಾಮೀಜಿ, ಪ.ಪಂ.ಸ್ಥಳೀಯ ಸದಸ್ಯರಾದ ಶೀಲಾ ಡಿಸೋಜ, ಪ.ಪಂ. ಮುಖ್ಯಾಧಿಕಾರಿ ನಾಚಪ್ಪ, ಕಿರುತೆರೆಯ ನಟಿ ಮೌನ, ತಾಲ್ಲೂಕು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಎಚ್.ರೋಹಿತ್, ಇತರರು ಇದ್ದರು. ಶಿವಕುಮಾರ ಸ್ವಾಮೀಜಿ ಜಯಂತಿ ಉತ್ಸವ ಸಮಿತಿಯ ಅಧ್ಯಕ್ಷರಾದ ಎಸ್.ಮಹೇಶ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಪುರುಷೋತ್ತಮ ಅವರು ಬಸವಗೀತೆ ಹಾಡಿದರು. ವಿಜಯ ಹಾನಗಲ್ ಸ್ವಾಗತಿಸಿದರು. ಸರ್ವಜ್ಞಮೂರ್ತಿ ನಿರೂಪಿಸಿದರು. ಶಾಸಕರಾದ ಎಂ.ಪಿ. ಅಪ್ಪಚ್ಚುರಂಜನ್ ಅವರು ತಾಲ್ಲೂಕು ಕಚೇರಿ ಬಳಿ ಮೆರವಣಿಗೆಗೆ ಚಾಲನೆ ನೀಡಿದರು. ವೀರಗಾಸೆ, ಡೊಳ್ಳುಕುಣಿತ, ನಂದಿಧ್ವಜ ಕುಣಿತ, ಪೂಜಾ ಕುಣಿತ ಮತ್ತಿತರ ಕಲಾತಂಡದೊಂದಿಗೆ ಹಾಗೂ ಪೂರ್ಣಕುಂಭ ಕಳಸದೊಂದಿಗೆ ಮೆರವಣಿಗೆ ಗಮನ ಸೆಳೆಯಿತು.