Tumakur : ಗೆಲ್ಲುವ ವಿಶ್ವಾಸವಿಲ್ಲದ್ದಕ್ಕೆ ಸಿದ್ದು ಬೇರೆ ಕಡೆ: ಬಿಎಸ್‌ವೈ

By Kannadaprabha NewsFirst Published Nov 14, 2022, 5:06 AM IST
Highlights

ಇದ್ದ ಕ್ಷೇತ್ರವನ್ನು ಬಿಟ್ಟು ಸಿದ್ದರಾಮಯ್ಯ ಅವರು ಬೇಕೆ ಕಡೆ ಹೋಗುತ್ತಿರುವುದು ಗೆಲ್ಲುವ ವಿಶ್ವಾಸವಿಲ್ಲದ್ದಕ್ಕೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ವ್ಯಂಗ್ಯವಾಡಿದ್ದಾರೆ.

ಕುಣಿಗಲ್‌ (ನ.14) : ಇದ್ದ ಕ್ಷೇತ್ರವನ್ನು ಬಿಟ್ಟು ಸಿದ್ದರಾಮಯ್ಯ ಅವರು ಬೇಕೆ ಕಡೆ ಹೋಗುತ್ತಿರುವುದು ಗೆಲ್ಲುವ ವಿಶ್ವಾಸವಿಲ್ಲದ್ದಕ್ಕೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ವ್ಯಂಗ್ಯವಾಡಿದ್ದಾರೆ.

ಯಡಿಯೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಅವರು ಏಕೆ ಇದ್ದ ಕ್ಷೇತ್ರವನ್ನ ಬಿಟ್ಟು ಬೇರೆ ಕಡೆ ಹೋಗುತ್ತಿದ್ದಾರೆ ಅಂತಾ ನಮಗೆ ಅರ್ಥವಾಗುತ್ತಿಲ್ಲ. ಈ ಬಗ್ಗೆ ನಾನು ಟೀಕೆ ಟಿಪ್ಪಣಿ ಮಾಡುವುದಿಲ್ಲ ಎಂದರು.

Latest Videos

ಕೆಂಪೇಗೌಡ ಪ್ರತಿಮೆ ಅನಾವರಣಕ್ಕೆ ರಿಗೆ (Devegowda)  ಆಹ್ವಾನ ನೀಡಿಲ್ಲ ಎನ್ನುವ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು ನನಗೆ ಗೊತ್ತಿರುವ ಪ್ರಕಾರ ಆಮಂತ್ರಣ ಪತ್ರಿಕೆ ಮಾಡಿರಲಿಲ್ಲ. ವೈಯಕ್ತಿಕವಾಗಿ ಪ್ರತಿಯೊಬ್ಬರಿಗೆ ಪತ್ರ ಬರೆದು ಸಿಎಂ ಆಹ್ವಾನಿಸಿದ್ದಾರೆ. ಎಸ್‌.ಎಂ. ಕೃಷ್ಣ (SM Krishna)  ಸೇರಿದಂತೆ ಉಳಿದೆಲ್ಲ ನಾಯಕರು ಬಂದಿದ್ದರು. ದೇವೇಗೌಡರಿಗೂ ಪತ್ರ ಬರೆದು ಸಿಎಂ ದೂರವಾಣಿ ಕರೆ ಮಾಡಿಯೂ ಆಹ್ವಾನಿಸಿದ್ದಾರೆ. ಈ ಬಗ್ಗೆ ಅನಗತ್ಯವಾಗಿ ಚರ್ಚೆಯಾಗುತ್ತಿದೆ. ದೇವೇಗೌಡರು ಈ ವಿಚಾರವನ್ನು ವೈಯಕ್ತಿಕವಾಗಿ ತೆಗೆದುಕೊಳ್ಳುವುದಿಲ್ಲ ಎನ್ನುವ ವಿಶ್ವಾಸ ನನಗಿದೆ. ಯಾವುದೋ ಕಾರಣಕ್ಕೆ ಅವರಿಗೆ ಬರಲಿಕ್ಕೆ ಆಗಲಿಲ್ವ ಅನ್ನಿಸುತ್ತದೆ. ಅದನ್ನು ದೊಡ್ಡದು ಮಾಡುವ ಅವಶ್ಯಕತೆ ಇಲ್ಲ ಎಂದರು.

ಟಿಪ್ಪು ಪ್ರತಿಮೆ ನಿರ್ಮಾಣ ಅವರಿಗೆ ಬಿಟ್ಟವಿಚಾರ. ಸರ್ಕಾರ ಏನು ತೀರ್ಮಾನ ಮಾಡುತ್ತದೆ ನೋಡೋಣ ಎಂದರು. ವಿಧಾನಸೌಧದ ಮುಂದೆ ಬಸವಣ್ಣನವರ ಪ್ರತಿಮೆ ನಿರ್ಮಾಣ ಮಾಡಲು ಕ್ಯಾಬಿನೆಚ್‌ ಒಪ್ಪಿಗೆ ದೊರೆತಿದೆ. ಮುಂದೆ ಮುಖ್ಯಮಂತ್ರಿಗಳು ಅದನ್ನು ಮಾಡುತ್ತಾರೆ ಎಂದರು.

ಯಡಿಯೂರಪ್ಪ ಹಿಂದೂ ಅಲ್ಲ ಎಂಬ ಹೇಳಿಕೆಗೆಲ್ಲ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಹಿಂದೂ ಸಮಾಜ ಬಹಳ ದೊಡ್ಡ ಸಮಾಜ. ಮೊದಲು ನಾವೆಲ್ಲರೂ ಹಿಂದೂ, ಆ ಮೇಲೆ ಜಾತಿ, ಉಪಪಂಗಡಗಳು. ಅನಗತ್ಯವಾಗಿ ಇದನ್ನು ಚರ್ಚೆ ಮಾಡುವ ಅವಶ್ಯಕತೆ ಇಲ್ಲ. ಹಿಂದೂ ಅನ್ನುವಂತದ್ದು ಒಂದು ದೊಡ್ಡ ಸಮೂಹಕ್ಕೆ ಇರುವಂತಹ ಹೆಸರು ಎಂದರು.

ಮುದ್ದಹನುಮೇಗೌಡರು ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ್ದಾರೆ. ಆದರೆ ಟಿಕೆಚ್‌ ಕೊಡುವ ಭರವಸೆ ನೀಡಿಲ್ಲ. ಪಕ್ಷ ಆ ಬಗ್ಗೆ ತೀರ್ಮಾನ ಮಾಡುತ್ತದೆ ಎಂದರು.

ಹಿಂದೂ ಅಶ್ಲೀಲ ಪದ ಎಂಬ ಸತೀಶ್‌ ಜಾರಕಿಹೊಳಿ ಹೇಳಿಕೆ ಬಗ್ಗೆ ನಾನು ಏನನ್ನೂ ಹೇಳಲೂ ಇಷ್ಟಪಡುವುದಿಲ್ಲ. ಆದರೆ ಕಾಂಗ್ರೆಸ್‌ನ 90% ನಾಯಕರು ಕೂಡ ನಾವು ಮೊದಲು ಹಿಂದೂಗಳು ಅನ್ನುವುದನ್ನು ಒಪ್ಪಿಕೊಳ್ಳುತ್ತಾರೆ ಎಂದರು.

ಮೈತ್ರಾದೇವಿ ಯಡಿಯೂರಪ್ಪ ಸ್ಮಾರಕ ಭವನ ಉದ್ಘಾಟನೆ

 ಕುಣಿಗಲ್‌ :  ತಾಲೂಕಿನ ಪ್ರಸಿದ್ಧ ಧಾರ್ಮಿಕ ಸ್ಥಳ ತೋಂಟದ ಸಿದ್ಧಲಿಂಗೇಶ್ವರರ ಐಕ್ಯ ಸ್ಥಳವಾದ ಯಡಿಯೂರಿನಲ್ಲಿ ಮೈತ್ರಾದೇವಿ ಯಡಿಯೂರಪ್ಪ ಸ್ಮಾರಕ ಭವನ ನಿರ್ಮಾಣವಾಗಿದ್ದು, ಉದ್ಘಾಟನೆಯನ್ನು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು ನಾಡಿನ ಪ್ರಸಿದ್ಧ ಪುಣ್ಯಕ್ಷೇತ್ರದಲ್ಲಿ ಒಂದಾದ ಯಡಿಯೂರು ಸಿದ್ದಲಿಂಗೇಶ್ವರ ಸ್ವಾಮಿ ಕ್ಷೇತ್ರ ಮನೆದೇವರ ಸನ್ನಿಧಿಯಲ್ಲಿ ಧರ್ಮಪತ್ನಿ ದಿವಂಗತ ಮೈತ್ರಾದೇವಿ ಅವರ ಸ್ಮರಣಾರ್ಥ ಸ್ಮಾರಕ ಭವನ ನಿರ್ಮಿಸಿದ್ದು ಬಡ ಕುಟುಂಬದ ದೀನದಲಿತರಿಗೆ ಕಡಿಮೆ ವೆಚ್ಚದಲ್ಲಿ ಉಚಿತ ವಿವಾಹವನ್ನು ನೆರವೇರಿಸುವ ಕಾರ್ಯವನ್ನು ಪಿಇಎಸ್‌ ಟ್ರಸ್ಟ್‌ ವತಿಯಿಂದ ಈ ಸ್ಮಾರಕ ಭವನದಿಂದ ಹಮ್ಮಿಕೊಳ್ಳಲಾಗಿದೆ. ಎಂದರು.

ದೇವಾಲಯವನ್ನು ವಿವಿಧ ಹೂಗಳು ಹಾಗೂ ವಿದ್ಯುತ್‌ ದೀಪಗಳಿಂದ ಮದುವಣಗಿತ್ತಿಯಂತೆ ಶೃಂಗರಿಸಲಾಗಿತ್ತು. ಸ್ಮಾರಕ ಭವನದಲ್ಲಿ ಗಣಹೋಮ, ನವಗ್ರಹ ಹೋಮ, ವಾಸ್ತು ಪುರುಷ ಪ್ರತಿಷ್ಠಾಪನೆ, ಸಹಸ್ರ ಕಳಶ ಪ್ರತಿಷ್ಠಾಪನೆ, ವಾಸ್ತು ಪುರುಷ ಮಂಡಲ ಸೇರಿದಂತೆ ಹಲವಾರು ವಿಶೇಷ ಪೂಜೆಗಳನ್ನು ಅರ್ಚಕರು ಶಾಸ್ತ್ರಬದ್ಧವಾಗಿ ನೆರವೇರಿಸಿದರು.

ಭಕ್ತರಿಗೆ ಹೋಳಿಗೆ, ಮೈಸೂರು ಪಾಕ್‌ ಸೇರಿದಂತೆ ಹಲವಾರು ಭಕ್ಷ್ಯ ಭೋಜನಗಳನ್ನು 200 ಬಾಣಸಿಗರು ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ಭಕ್ತರು ಅಭಿಮಾನಿಗಳಿಗೆ ಭೋಜನವನ್ನು ಬಡಿಸಿದರು.

ಬೆಳಗ್ಗೆ ಸಿದ್ಧಲಿಂಗೇಶ್ವರರ ಗದ್ದುಗೆಯಲ್ಲಿ ವಿಶೇಷವಾಗಿ ಪೂಜಿ ಸಲ್ಲಿಸಿದ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಲೋಕಸಭಾ ಸದಸ್ಯ ಬಿ.ವೈ. ರಾಘವೇಂದ್ರ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ. ವೈ.ವಿಜಯೇಂದ್ರ ಸೇರಿದಂತೆ ಅವರ ಕುಟುಂಬದವರು ಸ್ವಾಮಿಗೆ ರುದ್ರಾಭಿಷೇಕ ಅರ್ಚನೆ ಸೇರಿದಂತೆ ಹಲವಾರು ವಿಶೇಷ ಪೂಜೆಗಳಲ್ಲಿ ಭಾಗವಹಿಸಿದ್ದರು.

ರುದ್ರಾಭಿಷೇಕದ ನಂತರ ಸಿದ್ಧಲಿಂಗೇಶ್ವರರರನ್ನು ವೀರಗಾಸೆ ಕಲಾ ತಂಡಗಳ ಸಮೇತ ಶೃಂಗಾರಗೊಂಡ ಸ್ಮಾರಕ ಭವನಕ್ಕೆ ಕರೆತರಲಾಯಿತು. ಈ ಸಂದರ್ಭದಲ್ಲಿ ಸಿದ್ಧಗಂಗಾ ಮಠದ ಸಿದ್ದಲಿಂಗ ಸ್ವಾಮಿಗಳು, ಯಡಿಯೂರು ಬಾಳೆಹೊನ್ನೂರ ಖಾಸಾ ಶಾಖಾ ಮಠದ ಪೀಠಾಧಿಪತಿ ರೇಣುಕಾ ಶಿವಾಚಾರ್ಯ ಸ್ವಾಮೀಜಿಗಳು ಸಾನಿಧ್ಯ ವಹಿಸಿದ್ದರು.

ರಾಜ್ಯ ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ ಮಾತನಾಡಿ, ನಮ್ಮ ತಾಯಿಯವರ ಹೆಸರಿನಲ್ಲಿ ಈ ಪವಿತ್ರವಾದ ಕ್ಷೇತ್ರದಲ್ಲಿ ಮೈತ್ರಾದೇವಿ ಯಡಿಯೂರಪ್ಪನವರ ಸ್ಮಾರಕ ನಿರ್ಮಿಸಿದ್ದು ಬಡವರಿಗೆ ಅನುಕೂಲವಾಗಲಿದೆ ಎಂದು ಆಶಿಸಿದರು. 

click me!