ಕೆಪಿಸಿಸಿ ನೂತನ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಬಿಜೆಪಿಗಿಂತ ಸಿದ್ದರಾಮಯ್ಯ ಅವರ ಕಾಟನೇ ಜಾಸ್ತಿಯಾಗಿದೆ. ಅವರು ಮೊದಲು ಈ ಕಾಟದಿಂದ ತಪ್ಪಿಸಿಕೊಂಡು ಹೊರಬರಲಿ, ನಂತರ ರಾಜ್ಯ ಸರ್ಕಾರದ ವಿರುದ್ಧ ಟೀಕೆ ಮಾಡಲಿ ಎಂದು ಕಂದಾಯ ಸಚಿವ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ.
ಉಡುಪಿ(ಆ.08): ಕೆಪಿಸಿಸಿ ನೂತನ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಬಿಜೆಪಿಗಿಂತ ಸಿದ್ದರಾಮಯ್ಯ ಅವರ ಕಾಟನೇ ಜಾಸ್ತಿಯಾಗಿದೆ. ಅವರು ಮೊದಲು ಈ ಕಾಟದಿಂದ ತಪ್ಪಿಸಿಕೊಂಡು ಹೊರಬರಲಿ, ನಂತರ ರಾಜ್ಯ ಸರ್ಕಾರದ ವಿರುದ್ಧ ಟೀಕೆ ಮಾಡಲಿ ಎಂದು ಕಂದಾಯ ಸಚಿವ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ.
ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸರ್ಕಾರ ಇದೆಯೋ ಇಲ್ಲವೋ ಎಂಬ ವಿಪಕ್ಷ ನಾಯಕರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.
undefined
ಸಿಎಂಗೆ ಕೊರೋನಾ: ಯಾರನ್ನೆಲ್ಲಾ ಭೇಟಿಯಾಗಿದ್ರು, ಯಾರೆಲ್ಲಾ ಕ್ವಾರಂಟೈನ್ ಆದ್ರು...?
ವಿರೋಧ ಪಕ್ಷ ಇದೆಯೋ ಇಲ್ಲವೋ ಗೊತ್ತಿಲ್ಲ, ಸಿದ್ದರಾಮಯ್ಯನವರೂ ಕೊರೋನಾದಿಂದ ಆಸ್ಪತ್ರೆಯಲ್ಲಿದ್ದಾರೆ. ಡಿ.ಕೆ.ಶಿವಕುಮಾರ್ ಇನ್ನೂ ಕೂಡ ಪದಗ್ರಹಣ, ಸನ್ಮಾನದ ಗುಂಗಿನಲ್ಲಿಯೇ ಇದ್ದಾರೆ. ಕಾಂಗ್ರೆಸ್ ಅಧ್ಯಕ್ಷರಿನ್ನೂ ಫೀಲ್ಡಿಗೇ ಇಳಿದಿಲ್ಲ, ನಮ್ಮ ಸಿಎಂ ಯಡಿಯೂರಪ್ಪ ಅವರು ಅಷ್ಟುವಯಸ್ಸಾದ್ರೂ ಕ್ರಿಯಾಶೀಲರಾಗಿದ್ದಾರೆ ಎಂದರು.
ವಿಪಕ್ಷದವರು ಕಾಮಾಲೆ ಕಣ್ಣಿಂದ ನೋಡಿದರೆ ನಮ್ಮ ಕೆಲಸ ಕಾಣುವುದಿಲ್ಲ, ಸರ್ಕಾರ ಎಲ್ಲದಕ್ಕೂ ಉತ್ತರ ಕೊಡಲು ಸಿದ್ಧವಿದೆ ಎಂದಷ್ಟೇ ಹೇಳಿದರು.