ಸಿದ್ದರಾಮಯ್ಯ ಸರ್ಕಾರ ರಾಷ್ಟ್ರದ್ರೋಹಿಗಳನ್ನು ರಕ್ಷಿಸುತ್ತಿದೆ: ಸಂಸದ ಕಾಗೇರಿ ಕಿಡಿ

Published : Oct 13, 2024, 03:12 PM IST
ಸಿದ್ದರಾಮಯ್ಯ ಸರ್ಕಾರ ರಾಷ್ಟ್ರದ್ರೋಹಿಗಳನ್ನು ರಕ್ಷಿಸುತ್ತಿದೆ: ಸಂಸದ ಕಾಗೇರಿ ಕಿಡಿ

ಸಾರಾಂಶ

ಅಹಂಕಾರದ ನಡುವಳಿಕೆಯಿಂದ ಸಿದ್ಧರಾಮಯ್ಯ ರಾಜ್ಯದ ಜನತೆಗೆ ಅವಮಾನ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ, ತಾಕತ್ತಿದ್ದರೆ ತನಿಖೆ ಎದುರಿಸಲಿ ಸವಾಲು ಹಾಕಿದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ  

ಉತ್ತರಕನ್ನಡ(ಅ.13):  ರಾಜ್ಯದ ಕಾಂಗ್ರೆಸ್ ಸರ್ಕಾರ ರಾಷ್ಟ್ರದ್ರೋಹದ ಅಪರಾಧಿಗಳನ್ನು ರಕ್ಷಿಸುತ್ತಿದೆ. ಹುಬ್ಬಳ್ಳಿಯಲ್ಲಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ 157 ಅಪರಾಧಿಗಳು ವಿದ್ವಂಸಕ ಕೃತ್ಯ ನಡೆಸಿದ್ದರು. ರಾಷ್ಟ್ರ ದ್ರೋಹದ ಪ್ರಕರಣ ಹಿಂಪಡೆಯುವ ಮೂಲಕ ಅಪರಾಧಿ ರಕ್ಷಣೆಗೆ ನಾವಿದ್ದೇವೆ ಎಂಬ ಸ್ಪಷ್ಟ ಸಂದೇಶ ಕಾಂಗ್ರೆಸ್ ನೀಡಿದೆ. ಪ್ರಕರಣವನ್ನು ಹಿಂಪಡೆದು ಕಾಂಗ್ರೆಸ್ ಸರ್ಕಾರ ದೊಡ್ಡ ಅಪರಾಧ ಮಾಡಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಕಿಡಿ ಕಾರಿದ್ದಾರೆ. 

ಇಂದು(ಭಾನುವಾರ) ಜಿಲ್ಲೆಯ ಶಿರಸಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು, ಮುಸ್ಲಿಂ, ಕ್ರಿಶ್ಚಿಯನ್ ಸಮುದಾಯದವರು ಸಮಾಜದ ಮುಖ್ಯ ವಾಹಿನಿಗೆ ಬರಬಾರದು ಎಂದು ಕಾಂಗ್ರೆಸ್ ಓಲೈಕೆಯ ರಾಜಕಾರಣ ಮಾಡುತ್ತಿದೆ. ಕಾಂಗ್ರೆಸ್ ಗೆ ಹಿಂದೂಗಳ ಕುರಿತು ಮಾತನಾಡುವಾಗ ಜಾತಿಯೇ ಮುಖ್ಯವಾಗುತ್ತದೆ. ಮುಸ್ಲಿಂ, ಕ್ರಿಶ್ಚಿಯನ್ ಸಮುದಾಯದಲ್ಲಿ ಅನೇಕ ಜಾತಿಗಳಿವೆ. ಅಲ್ಲಿ ಯಾಕೆ ಜಾತಿ ಗಣತಿ ನಡೆಸಲು   ಕಾಂಗ್ರೆಸ್ ಮುಂದಾಗಲ್ಲ..?. ಕಾಂಗ್ರೆಸ್ ನ ಷಡ್ಯಂತರಕ್ಕೆ ಅಲ್ಪ ಸಂಖ್ಯಾತರು ಬಲಿಯಾಗಬಾರದು. ರಾಜ್ಯದ ಕಾಂಗ್ರೆಸ್ ಬ್ರಿಟೀಷ್ ಮಾನಸಿಕತೆ ಬೆಳೆಸಿಕೊಂಡಿದೆ ಎಂದು ಗಂಭೀರವಾಗಿ ಆರೋಪಿಸಿದ್ದಾರೆ. 

5 ವರ್ಷ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಎಂ.ಬಿ. ಪಾಟೀಲ್

ರಾಜ್ಯದಲ್ಲಿ ಸರ್ಕಾರವಿದೆ. ಆದರೆ, ಆಡಳಿತ ಶೂನ್ಯವಾಗಿದೆ. ರಾಜಕೀಯ ದ್ವೇಷ, ಸೇಡಿನ ರಾಜಕಾರಣದಲ್ಲಿ ಕಾಂಗ್ರೆಸ್ ಮುಳುಗಿದೆ. ರಾಜ್ಯದ ಅಭಿವೃದ್ಧಿಗೆ ಹಣವಿಲ್ಲ, ಸರ್ಕಾರಿ ನೌಕರರಿಗೆ ಸಂಬಳ ನೀಡಲು ಹಣವಿಲ್ಲ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಓಲೈಕೆ ರಾಜಕಾರಣ, ಭ್ರಷ್ಟಾಚಾರ ಸರ್ಕಾರೀಕರಣವಾಗಿದೆ. ಅಹಂಕಾರದ ನಡುವಳಿಕೆಯಿಂದ ಸಿದ್ಧರಾಮಯ್ಯ ರಾಜ್ಯದ ಜನತೆಗೆ ಅವಮಾನ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ, ತಾಕತ್ತಿದ್ದರೆ ತನಿಖೆ ಎದುರಿಸಲಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಸವಾಲು ಹಾಕಿದ್ದಾರೆ. 

PREV
Read more Articles on
click me!

Recommended Stories

ದ್ವೇಷ ಭಾಷಣ ತಡೆಗೆ ಹೊಸ ಕಾನೂನು: ಈ ಕಾಯ್ದೆ ತರ್ತಿರೋ ಟಾರ್ಗೆಟ್ ನಾನೇ ಎಂದ ಯತ್ನಾಳ್!
'ನಮ್ಮ ವಯಸ್ಸು ಮೀರುತ್ತಿದೆ, ಬೇಗ ಜಾಬ್ ಕರೆಯಲು ಹೇಳಿ ಸರ್' ಪೊಲೀಸ್ ಕಮಿಷನರ್ ಎದುರು ಗಳಗಳನೇ ಅತ್ತ ಕೊಪ್ಪಳ ಯುವತಿ