ಖಂಡ್ರೆ ಸಾಹೇಬ್ರ ಘನಂದಾರಿ ಐಡಿಯಾ, ಪಶ್ಚಿಮಘಟ್ಟದ ನದಿ ನೀರು ಕುಡೀತಾ ಇದ್ರೆ ಬೀಳುತ್ತೆ ಗ್ರೀನ್‌ ಸೆಸ್‌!

By Santosh Naik  |  First Published Nov 13, 2024, 9:57 PM IST

ಒಂದೆಡೆ ಅಭಿವೃದ್ಧಿ ಕಾಮಗಾರಿಗಳಿಗೆ ಹಣವಿಲ್ಲದೆ ಪರದಾಟ ನಡೆಸುತ್ತಿದ್ದರೂ, ಯಾವ ಸಮಸ್ಯೆಯೂ ಇಲ್ಲ ಎಂದು ಬೀಗುತ್ತಿರುವ ರಾಜ್ಯ ಸರ್ಕಾರ, ಒಂದೊಂದಾಗಿ ಜನರ ಮೇಲೆ ಬರೆ ಎಳೆಯುವ ಕೆಲಸವನ್ನು ಮಾಡುತ್ತಿದೆ.


ಬೆಂಗಳೂರು (ನ.13): ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದ ಬಳಿಕ ಸ್ಟಾಂಪ್‌ ಡ್ಯೂಟಿ, ಅಬಕಾರಿ ಸುಂಕ, ಪೆಟ್ರೋಲ್‌, ಡೀಸೆಲ್‌ ಮೇಲಿನ ಸುಂಕ ಎಲ್ಲವನ್ನೂ ಏರಿಕೆ ಮಾಡಿದೆ. ಆಸ್ತಿಗಳನ್ನು ರಿಜಿಸ್ಟ್ರೇಷನ್‌ ಮಾಡಿಕೊಳ್ಳೋದು ಅಂದ್ರೆ ಈಗ ಬಡವರಿಗೆ ಅಸಾಧ್ಯವಾದ ಮಾತು. ಅಧಿಕಾರಕ್ಕೆ ಬಂದ ಬೆನ್ನಲ್ಲೇ ರಾಜ್ಯಾದ್ಯಂತ ವಿದ್ಯುತ್‌ ಬಿಲ್‌ ಏರಿಕೆ ಮಾಡಿತ್ತು. ಈಗ ಮತ್ತೊಂದು ಹೊಸ ಪ್ರಸ್ತಾವದ ಮೂಲಕ ಜನರ ಬದುಕಿನ ಮೇಲೆ ಬರೆ ಎಳೆಯುವ ಪ್ರಯತ್ನ ಮಾಡಲಾಗುತ್ತಿದೆ. ಹೆಂಗಾದ್ರೂ ಮಾಡಿ ಸರ್ಕಾರಕ್ಕೆ ದುಡ್ಡು ಬರಲೇಬೇಕು ಎನ್ನುವ ನಿಟ್ಟಿನಲ್ಲಿ ಪ್ರಯತ್ನ ಮಾಡುತ್ತಿರುವ ಸಚಿವ ಪೈಕಿ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಸಾಹೇಬರೇ ಮುಂದಿದ್ದಂತೆ ಕಾಣುತ್ತಿದೆ. ಅದಕ್ಕಾಗಿ  ಪಶ್ಚಿಮಘಟ್ಟದ ಸಂರಕ್ಷಣೆ ಎನ್ನುವ ನೆಪದಲ್ಲಿ  ಹಸಿರು ಸೆಸ್ ವಿಧಿಸಲು ಚಿಂತನೆ ಮಾಡಿದ್ದಾರೆ.

ಹೌದು ರಾಜ್ಯ ಸರ್ಕಾರಕ್ಕೆ ಅರಣ್ಯ ಸಚಿವ ಖಂಡ್ರೆ ಸಾಹೇಬರು ಹೊಸ ಐಡಿಯಾ ನೀಡಿದ್ದಾರೆ. ಪಶ್ಚಿಮಘಟ್ಟಗಳಿಂದ ಹರಿಯುವ ನದಿ ನೀರು ಬಳಕೆಯ ನಗರಗಳಿಗೆ ಸೆಸ್ ವಿಧಿಸಲು ಪ್ಲ್ಯಾನ್‌ ನೀಡಿದ್ದಾರೆ. ನೀರಿನ ಬಿಲ್ ನಲ್ಲಿ ಹಸಿರು ಸೆಸ್ ವಿಧಿಸಲು ಪ್ರಸ್ತಾವನೆ ಸಲ್ಲಿಸಲು ಸೂಚನೆ ನೀಡಿದ್ದಾರೆ. ಅರಣ್ಯ ಇಲಾಖೆ ಅಪರ ಮುಖ್ಯಕಾರ್ಯದರ್ಶಿಗೆ ಅರಣ್ಯ ಸಚಿವ ಸೂಚನೆ ನೀಡಿದ್ದಾರೆ. ಸೆಸ್ ನಿಂದ ಸಂಗ್ರಹವಾಗುವ ಮೊತ್ತದಲ್ಲಿ ಪಶ್ಚಿಮಘಟ್ಟಗಳ ಸಂರಕ್ಷಣೆಗೆ ಬಳಕೆ ಮಾಡುವುದಾಗಿ ತಿಳಿಸಿದ್ದಾರೆ. ವೃಕ್ಷ ಸಂವರ್ಧನೆಗೆ ಮತ್ತು ರೈತರ ಕೃಷಿ ಭೂಮಿ ಖರೀದಿಗೆ ಸೆಸ್ ಮೊತ್ತದ ವಿನಿಯೋಗವಾಗಲಿದೆ ಎಂದಿದ್ದಾರೆ. ವನ್ಯಜೀವಿ - ಮಾನವ ಸಂಘರ್ಷ ನಿಯಂತ್ರಿಸಲು ಸಹ ಸೆಸ್ ಹಣ ಬಳಕೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಈ ಬಗ್ಗೆ ಪ್ರಸ್ತಾವನೆ ಸಲ್ಲಿಸುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆಯಿಂದ ನಿರ್ದೇಶನ ಬಂದಿದೆ.

ಪಶ್ಚಿಮಘಟ್ಟದಲ್ಲಿ ಹರಿಯುವ ತುಂಗಾ, ಭದ್ರಾ, ಕಾವೇರಿ, ಕಬಿನಿ, ಹೇಮಾವತಿ, ಕೃಷ್ಣಾ, ಮಲಪ್ರಭಾ, ಘಟಪ್ರಭಾ ಸೇರಿದಂತೆ ಹಲವು ನದಿಗಳ ಮೂಲವೂ ಆಗಿದೆ. ರಾಜ್ಯದ ಹಲವು ನಗರ, ಪಟ್ಟಣ ಪ್ರದೇಶಗಳಿಗೆ ಈ ನದಿಗಳ ನೀರನ್ನೇ ಪೂರೈಕೆ ಮಾಡಲಾಗುತ್ತಿದೆ. ಮುಂದೆಯೂ ರಾಜ್ಯದ ನೀರಿನ ಅಗತ್ಯವನ್ನು ಈ ನದಿಗಳೇ ಪೂರೈಸಬೇಕಾಗುತ್ತದೆ. ಹೀಗಾಗಿ ಈ ಎಲ್ಲ ನದಿಗಳ ಮೂಲವಾಗಿರುವ ಪಶ್ಚಿಮಘಟ್ಟವನ್ನು ಸಂರಕ್ಷಿಸಿದರೆ ಮಾತ್ರ ಮುಂದಿನ ದಿನಗಳಲ್ಲಿ ನದಿಗಳು ತುಂಬಿ ಹರಿಯಲು ಸಾಧ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ.

Shivamogga: ಸಿಗಂದೂರಿನಲ್ಲಿ ತೆಪ್ಪ ಮುಳುಗಿ ಮೂವರು ಯುವಕರು ನಾಪತ್ತೆ

Tap to resize

Latest Videos

undefined

ಮಂಗಾರು ಮಳೆಯ ಮಾರುತಗಳನ್ನು ತಡೆದು ದೇಶದಾದ್ಯಂತ ವ್ಯಾಪಕ ಮಳೆ ಆಗುವಂತೆ ಮಾಡುವಲ್ಲಿ ಪಶ್ಚಿಮಘಟ್ಟಗಳು ಮಹತ್ವದ ಪಾತ್ರ ವಹಿಸುತ್ತವೆ. ಈ ನಿಟ್ಟಿನಲ್ಲಿ ಪಶ್ಚಿಮಘಟ್ಟದ ನದಿಗಳಿಂದ ನಗರ, ಪಟ್ಟಣಗಳಿಗೆ ಪೂರೈಕೆ ಆಗುವ ನೀರಿನ ಬಳಕೆಯ ಬಿಲ್ ನಲ್ಲಿ ಕೆಲವೇ ಕೆಲವು ರೂಪಾಯಿ ಹಸಿರು ಸೆಸ್ ವಿಧಿಸಿ, ಕಾಪು ನಿಧಿ ಸ್ಥಾಪಿಸಿದರೆ, ಈ ಹಣವನ್ನು ಪಶ್ಚಿಮಘಟ್ಟ ಅರಣ್ಯ ಅಭಿವೃದ್ಧಿಗಾಗಿ, ವೃಕ್ಷ ಸಂವರ್ಧನೆಗಾಗಿ, ಅರಣ್ಯದಂಚಿನ ರೈತರು ಸ್ವಯಂ ಪ್ರೇರಿತವಾಗಿ ಅರಣ್ಯ ಇಲಾಖೆಗೆ ಮಾರಾಟ ಮಾಡಲು ಇಚ್ಛಿಸುವ ಕೃಷಿ ಭೂಮಿ ಖರೀದಿಸಲು ಬಳಸಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ. ಅರಣ್ಯ ಸಂರಕ್ಷಿಸಲು ಮತ್ತು ವನ್ಯಜೀವಿ- ಮಾನವ ಸಂಘರ್ಷ ನಿಯಂತ್ರಿಸಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೂ ಈ ಹಣ ಬಳಸಬಹುದು, ಈ ನಿಟ್ಟಿನಲ್ಲಿ ಪ್ರಸ್ತಾವನೆ ಸಲ್ಲಿಸುವಂತೆ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.

6 ಸಾವಿರ ಟ್ರಾಫಿಕ್‌ ಉಲ್ಲಂಘನೆ, ಡೆಲಿವರಿ ಬಾಯ್ಸ್‌ಗೆ 30.57 ಲಕ್ಷ ದಂಡ ವಿಧಿಸಿದ ಬೆಂಗಳೂರು ಟ್ರಾಫಿಕ್‌ ಪೊಲೀಸ್‌!

'ನೀರಿನ ಬಿಲ್ ಜೊತಯಲ್ಲಿ ಬಳಕೆದಾರರು 2 ಅಥವಾ 3 ರೂ. ಪಾವತಿಸಿದರೆ, ಅವರಲ್ಲಿ ಪರಿಸರ ಸಂರಕ್ಷಣೆ ಮತ್ತು ಪಶ್ಚಿಮ ಘಟ್ಟದ ಮಹತ್ವದ ಅರಿವು ಮೂಡುತ್ತದೆ. ಹೀಗೆ ಸಂಗ್ರಹವಾಗುವ ಹಣವನ್ನು ಅನ್ಯ ಉದ್ದೇಶಕ್ಕೆ ಬಳಸಲಾಗುವುದಿಲ್ಲ' ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.

click me!