'ದರಿದ್ರ ಸರ್ಕಾರ' ಸಿದ್ದರಾಮಯ್ಯ ಸರ್ಕಾರಕ್ಕೆ ಅನ್ವಯಿಸುತ್ತೆ..'!

By Kannadaprabha NewsFirst Published Feb 13, 2020, 11:51 AM IST
Highlights

ಸಿದ್ದರಾಮಯ್ಯ ನಡೆಸಿದ 5 ವರ್ಷದ ತುಘಲಕ್‌ ದರ್ಬಾರ್‌ ಸರ್ಕಾರಕ್ಕೆ ದರಿದ್ರ ಸರ್ಕಾರ ಅನ್ವಯಿಸುತ್ತದೆ ಎಂದು ವಿಧಾನಪರಿಷತ್‌ ಸದಸ್ಯ ಎನ್‌.ರವಿಕುಮಾರ್‌ ಹೇಳಿದ್ದಾರೆ

ಬೆಂಗಳೂರು(ಫೆ.13): ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರವನ್ನು ದರಿದ್ರ ಸರ್ಕಾರ ಎಂದು ಕರೆದಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾನಸಿಕ ಅವನತಿಯನ್ನು ತೋರಿಸುತ್ತಿದ್ದು, ಅವರು ತಮ್ಮ ಹೇಳಿಕೆಯನ್ನು ಹಿಂಪಡೆಯಬೇಕು ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್‌ ಸದಸ್ಯ ಎನ್‌.ರವಿಕುಮಾರ್‌ ಆಗ್ರಹಿಸಿದ್ದಾರೆ.

ಬುಧವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೆ ಕೆಟ್ಟಭಾಷೆಯನ್ನು ಮುಂದುವರಿಸಿದ್ದಾರೆ. ರಾಜ್ಯದಲ್ಲಿ ದರಿದ್ರ ಸರ್ಕಾರವಿದೆ ಎಂದಿದ್ದಾರೆ. ಆದರೆ, ಸಿದ್ದರಾಮಯ್ಯ ನಡೆಸಿದ 5 ವರ್ಷಗಳ ತುಘಲಕ್‌ ದರ್ಬಾರ್‌ ಸರ್ಕಾರಕ್ಕೆ ಈ ಪದ ಅನ್ವಯಿಸಬಹುದು. ಜೆಡಿಎಸ್‌ನೊಂದಿಗೆ ಸೇರಿ ಕಾಲಹರಣ ಮಾಡಿದ ಸಮ್ಮಿಶ್ರ ಸರ್ಕಾರಕ್ಕೆ ಇದು ಅನ್ವರ್ಥನಾಮವಾಗಬಹುದು ಎಂದು ವಾಗ್ದಾಳಿ ನಡೆಸಿದ್ದಾರೆ.

ಅಪಘಾತದಲ್ಲಿ ಮೂಳೆ ಕಟ್‌: ಪರಿಹಾರ ಮೊತ್ತ ಕೇಳಿ ವಿಮಾ ಕಂಪನಿ ತಬ್ಬಿಬ್ಬು

ರಾಜ್ಯದಲ್ಲಿ ಅಭಿವೃದ್ಧಿಯ, ರೈತಪರ ಸರ್ಕಾರವಿದೆ. ಅಧಿಕಾರಕ್ಕೇರಿದ ಕೇವಲ 6 ತಿಂಗಳಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ರಾಜ್ಯವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುತ್ತಿದ್ದಾರೆ. ಎಲ್ಲ ವರ್ಗಗಳ ಹಿತವನ್ನು ಗಮನದಲ್ಲಿಟ್ಟುಕೊಂಡು ಯೋಜನೆಗಳನ್ನು ಜಾರಿಗೆ ತರುತ್ತಿದ್ದಾರೆ. ಸರ್ಕಾರ ಅಧಿಕಾರಕ್ಕೆ ಬಮದು ಮೊದಲ ಮೂರು ತಿಂಗಳಲ್ಲಿ ರಾಜ್ಯವನ್ನು ಬಾಧಿಸಿದ ನೈಸರ್ಗಿಕ ವಿಕೋಪವನ್ನು ಸರ್ಕಾರ ಸಮರ್ಥವಾಗಿ ಎದುರಿಸಿದೆ.

ದರಿದ್ರದ ಮೂಲವೇ ಸಿದ್ದು: ಸಿ.ಟಿ.ರವಿ!

ನೆರೆ ಸಂತ್ರಸ್ತರಿಗೆ ಅಗತ್ಯ ಮತ್ತು ಸೂಕ್ತ ಪರಿಹಾರಗಳನ್ನು ಒದಗಿಸಿಕೊಟ್ಟಿದೆ. ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದು, ಕೇಂದ್ರದ ಯೋಜನೆಗಳನ್ನು ರಾಜ್ಯ ಸರ್ಕಾರ ಯಶಸ್ವಿಯಾಗಿ ಜಾರಿಗೊಳಿಸುತ್ತಿದೆ. ಈ ಮೂಲಕ ಯೋಜನೆಗಳ ಲಾಭವನ್ನು ಕಟ್ಟಕಡೆಯ ವ್ಯಕ್ತಿಗೆ ತಲುಪಿಸುತ್ತಿದೆ ಎಂದು ಹೇಳಿದರು.

click me!