'ಸಿದ್ದರಾಮಯ್ಯಗೆ ಸೋಲಿನ ಭೀತಿ ಕಾಡುತ್ತಿದೆ : ಇಬ್ಬರ ಬೆಂಬಲ ಬಿಜೆಪಿಗೆ ಅನುಕೂಲ'

By Kannadaprabha News  |  First Published Apr 6, 2023, 7:34 AM IST

ಸಿದ್ದರಾಮಯ್ಯ ಒಬ್ಬ ಪಲಾಯನವಾದಿ. ಅವರಿಗೆ ಸೋಲಿನ ಭೀತಿ ಕಾಡುತ್ತಿದೆ ಎಂದು ಬಿಜೆಪಿ ಸಂಸದ ವಿ. ಶ್ರೀನಿವಾಸಪ್ರಸಾದ್‌ ಟೀಕಿಸಿದರು.


  ಮೈಸೂರು :  ಸಿದ್ದರಾಮಯ್ಯ ಒಬ್ಬ ಪಲಾಯನವಾದಿ. ಅವರಿಗೆ ಸೋಲಿನ ಭೀತಿ ಕಾಡುತ್ತಿದೆ ಎಂದು ಬಿಜೆಪಿ ಸಂಸದ ವಿ. ಶ್ರೀನಿವಾಸಪ್ರಸಾದ್‌ ಟೀಕಿಸಿದರು.

ಮೈಸೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಷ್ಟಾದರೂ ವರುಣಗೆ ಕೇವಲ ನಾಮಪತ್ರ ಸಲ್ಲಿಸಲು ಮಾತ್ರ ಬರುತ್ತೇನೆ. ಚುನಾವಣೆ ಪ್ರಚಾರಕ್ಕೆ ಬರುವುದಿಲ್ಲ ಎಂದು ಧಿಮಾಕಿನಿಂದ ಹೇಳುತ್ತಿದ್ದಾರೆ. ಇಂತಹ ಧಿಮಾಕಿನ ಮಾತಿನಿಂದಲೇ ಸಿದ್ದರಾಮಯ್ಯಗೆ ಸೋಲಾಗಲಿದೆ ಎಂದು ಕುಟುಕಿದರು.

Latest Videos

undefined

ಸಿದ್ದರಾಮಯ್ಯ ಅವರಿಗೆ ಇನ್ನೂ ಸೋಲಿನ ಭೀತಿ ಕಾಡುತ್ತಿದೆ. ಹೀಗಾಗಿ ವರುಣ ಜತೆಗೆ ಕೋಲಾರದಲ್ಲೂ ಸ್ಪರ್ಧೆಗೆ ಮುಂದಾಗಿದ್ದಾರೆ. ವರುಣದಲ್ಲಿ ಸಿದ್ದರಾಮಯ್ಯ ಗೆಲ್ಲುವುದು ಸುಲಭÜವಲ್ಲ. ಹೀಗಾಗಿ ಕೋಲಾರದಿಂದಲೂ ಟಿಕೆಟ್‌ ಕೇಳುತ್ತಿದ್ದಾರೆ. ವರುಣದಲ್ಲಿ ಗೆಲ್ಲುವ ವಿಶ್ವಾಸ ಇಲ್ಲದ ಕಾರಣ ಕೋಲಾರದಿಂದಲೂ ಟಿಕೆಟ್‌ ಕೇಳುತ್ತಿದ್ದಾರೆ ಎಂದರು.

ಬಿಜೆಪಿ ಸ್ಪಷ್ಟಬಹುಮತ

ನಟ ಸುದೀಪ್‌, ಸಂಸದೆ ಸುಮಲತಾ ಅಂಬರೀಷ್‌ ಅವರು ಬಿಜೆಪಿಗೆ ಬೆಂಬಲ ನೀಡಿರುವುದರಿಂದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಅನುಕೂಲವಾಗಲಿದೆ. ಮಾಜಿ ಸಚಿವ ಎಲ್‌.ಆರ್‌. ಶಿವರಾಮೇಗೌಡ ಸೇರಿದಂತೆ ಹಲವು ಮುಖಂಡರು ಬಿಜೆಪಿಗೆ ಸೇರಿರುವುದು ಒಳ್ಳೆಯ ಬೆಳವಣಿಗೆ. ಹಳೇ ಮೈಸೂರು ಭಾಗದಲ್ಲಿ ಈ ಬಾರಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲ್ಲು ಪಕ್ಷ ಪ್ರಯತ್ನ ಮಾಡಿರುವುದು ಫಲ ನೀಡಲಿದೆ. ಜತೆಗೆ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟಬಹುಮತ ಗಳಿಸಲಿದೆ. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇರುವುದರಿಂದ ರಾಜ್ಯದಲ್ಲೂ ಬಿಜೆಪಿ ಅಧಿಕಾರ ಉಳಿಸಿಕೊಳ್ಳಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಶ್ರೀನಿವಾಸಪ್ರಸಾದ್‌ ಆಶೀರ್ವಾದ ಪಡೆದ ಚಿಕ್ಕಣ್ಣ ಪುತ್ರ

ಎಚ್‌.ಡಿ. ಕೋಟೆ ವಿಧಾನಸಭೆ ಕ್ಷೇತ್ರದಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸಲು ಆಕಾಂಕ್ಷಿಯಾಗಿರುವ ಮಾಜಿ ಶಾಸಕ ಚಿಕ್ಕಣ್ಣ ಅವರ ಪುತ್ರ ಜಯಪ್ರಕಾಶ್‌ ತಮ್ಮ ತಂದೆಯೊಂದಿಗೆ ಸಂಸದ ವಿ. ಶ್ರೀನಿವಾಸಪ್ರಸಾದ್‌ ಅವರ ನಿವಾಸಕ್ಕೆ ಬುಧವಾರ ಭೇಟಿ ನೀಡಿ ಆಶೀರ್ವಾದ ಪಡೆದರು. ಚಿಕ್ಕಣ್ಣ ಹಾಗೂ ಅವರ ಪುತ್ರ ನಮ್ಮ ಮನೆಗೆ ಆಗಮಿಸಿದ್ದು ಸೌಜನ್ಯದ ಭೇಟಿಯಷ್ಟೇ. ಚಿಕ್ಕಣ್ಣ ಅವರ ಪುತ್ರ ಜಯಪ್ರಕಾಶ್‌ ಚುನಾವಣೆಗೆ ಸ್ಪರ್ಧಿಸುತ್ತಿರುವುದರಿಂದ ಆಶೀರ್ವಾದ ಪಡೆದುಕೊಂಡು ಹೋಗಲು ಬಂದಿದ್ದರು ಎಂದು ಶ್ರೀನಿವಾಸಪ್ರಸಾದ್‌ ಸ್ಪಷ್ಟಪಡಿಸಿದರು.

ನೂರಕ್ಕೆ ನೂರು ಮತ್ತೊಮ್ಮೆ ಗೆಲುವು

 ನಂಜನಗೂಡು (ನ.29):  ನಂಜನಗೂಡು ಕ್ಷೇತ್ರದಲ್ಲಿ ಶೇ. ನೂರಕ್ಕೆ ನೂರಷ್ಟುಮತ್ತೊಮ್ಮೆ ಗೆಲುವು ಸಾಧಿಸಲಿದ್ದೇವೆ ಎಂದು ಸಂಸದ ವಿ. ಶ್ರೀನಿವಾಸಪ್ರಸಾದ್‌ ಹೇಳಿದರು.

ಗಳಿಂದ ಶ್ರೀಕಂಠೇಶ್ವರ ದ ಆವರಣದಲ್ಲಿ ನುಗು ಏತ ನೀರಾವರಿ ಯೋಜನೆ, ಶ್ರೀಕಂಠೇಶ್ವರ ದೇವಾಲಯದಲ್ಲಿ (Temple)  75 ಕೊಠಡಿಗಳ ಅತಿಥಿಗೃಹ ನಿರ್ಮಾಣ, ಯಡಿಯಾಲ ಭಾಗದ 12 ಕೆರೆಗಳನ್ನು ತುಂಬಿಸುವ ಯೋಜನೆ, 3.5 ಕೋಟಿ ವೆಚ್ಚದ ವಾಲ್ಮೀಕಿ ಭವನ ಉದ್ಘಾಟನೆ ಸೇರಿದಂತೆ ವಿವಿಧ ಅಭಿವೃದ್ಧಿ ಕೆಲಸಗಳಿಗೆ ಚಾಲನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಶಾಸಕ ಬಿ. ಹರ್ಷವರ್ಧನ್‌ ಅವರು ಕ್ಷೇತ್ರದಲ್ಲಿ 7,500 ಕೋಟಿಗಿಂತಲೂ ಹೆಚ್ಚಿನ ಅನುದಾನ ತಂದು ಅಭಿವೃದ್ದಿ ಕೆಲಸಗಳನ್ನು ಮಾಡಿದ್ದಾರೆ, ಆದ್ದರಿಂದ ಶಾಸಕರು ಮತ್ತೆ ಗೆಲ್ಲಲಿದ್ದಾರೆ ಎಂದರು.

ಲೋಕಸಭಾ (Loksabha)  ಸದಸ್ಯನಾದ ನಂತರ 28 ಕ್ಷೇತ್ರಗಳ ಪೈಕಿ ಚಾಮರಾಜನಗರ (Chamarajanagar)  ಕ್ಷೇತ್ರದಲ್ಲಿ ಮಾತ್ರ ಅಂಗವಿಕರಿಗೆ ಸಲಕರಣೆಗಳನ್ನು ಉಚಿತವಾಗಿ ನೀಡುವಂತಹ ಯೋಜನೆಗೆ ಈಗಾಗಲೇ ತಪಾಸಣೆ ನಡೆಸಿ ಮೂರು ಸಾವಿರ ಜನರನ್ನು ಆಯ್ಕೆಗೊಳಿಸಲಾಗಿದೆ. ಮುಂದಿನ ತಿಂಗಳಲ್ಲಿ ಚಾಮರಾಜನಗರದಲ್ಲಿ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಸಲಕರಣೆ ವಿತರಿಸಲಾಗುವುದು ಎಂದರು.

ನಾನು ಎಂದೂ ಸಹ ಸೋಲಿಗೆ ಗುಗ್ಗದೆ, ಗೆಲುವಿಗೆ ಹಿಗ್ಗದೆ ಕಳೆದ 40 ವರ್ಷಗಳಿಂದಲೂ ಸಹ ಅಭಿವೃದ್ದಿ ಕೆಲಸಗಳನ್ನು ಮಾಡಿದ್ದೇನೆ. ಸುಟ್ಟು ಬೂದಿಯಾದರೂ ಸಹ ಫೀನಿಕ್ಸ್‌ ಹಕ್ಕಿಯಂತೆ ಮತ್ತೆ ಎದ್ದು ಬಂದು ಹೋರಾಟ ನಡೆಸಿದ್ದೇನೆ ಎಂದು ಮಾರ್ಮಿಕವಾಗಿ ನುಡಿದರು.

ನಾನು ರಾಜಕಾರಣಕ್ಕೆ ಕಾಲಿಟ್ಟು 50 ವರ್ಷಗಳು ಕಳೆದಿವೆ. ನಾನು ಸಾರ್ಥಕತೆ ಹೊಂದಲು ನಂಜನಗೂಡು ಕ್ಷೇತ್ರದಲ್ಲಿ ಸಮುದಾಯ ಸಕೀರ್ಣ ನಿರ್ಮಿಸಲು 8 ಕೋಟಿ, ಕಪಿಲಾ ನದಿಗೆ ತಡೆಗೋಡೆ ನಿರ್ಮಿಸಲು 55 ಕೋಟಿ, ಬಿಡುಗಡೆಗೊಳಿಸಬೇಕು ಎಂದು ಮನವಿ ಮಾಡಿದರು.

click me!