ಹನುಮನಹಟ್ಟಿಯಲ್ಲಿ ನಿನ್ನೆಯ ದಿನ ಕಾರ ಹುಣ್ಣಿಮೆ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ಎತ್ತುಗಳ ಓಟದ ಸ್ಪರ್ಧೆಯಲ್ಲಿ ಮುತ್ತು ಎನ್ನುವ ಯವಕ ತನ್ನ ಎತ್ತಿನ ಮೈ ಮೇಲೆ ಮುಂದಿನ ಸಿಎಂ ಸಿದ್ದರಾಮಯ್ಯ ಎಂದು ಬರೆದಿದ್ದಾನೆ.
ವರದಿ: ದೊಡ್ಡೇಶ್ ಯಲಿಗಾರ್ ಏಷ್ಯಾನೆಟ್ ಸುವರ್ಣ ನ್ಯೂಸ್
ಕೊಪ್ಪಳ (ಜೂ.15) : ಮುಂದಿನ ವರ್ಷ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಜರುಗುತ್ತಿವೆ. ಈ ಹಿನ್ನಲೆಯಲ್ಲಿ ಈಗಾಗಲೇ ಮುಂದಿನ ಸಿಎಂ ಬಗ್ಗೆಯೂ ಚರ್ಚೆಗಳು ನಡೆದಿವೆ. ಇದರ ಮದ್ಯೆ ಕಾರ ಹುಣ್ಣಿಮೆಯ ಆಚರಣೆ ವೇಳೆಯಲ್ಲಿ ಮುಂದಿನ ಸಿಎಂ ಸಿದ್ದರಾಮಯ್ಯ ಎನ್ನುವ ಕೂಗು ಕೇಳಿ ಬಂದಿದೆ. ಅಷ್ಟಕ್ಕೂ ಎಲ್ಲಿ ಈ ಕೂಗು ಕೇಳಿ ಬಂದಿರೋದು ಅಂತೀರಾ?
ಎಲ್ಲಿ ಮುಂದಿನ ಸಿಎಂ ಸಿದ್ದರಾಮಯ್ಯ ಕೂಗು ಕೇಳಿಬಂದಿದ್ದು: ಕೊಪ್ಪಳ ಜಿಲ್ಲೆ ಅಂದರೆ ಸಾಕು ಈ ಜಿಲ್ಲೆ ರಾಜಕೀಯವಾಗಿ ಸಾಕಷ್ಟು ಪ್ರಸಿದ್ಧಿ ಪಡೆದ ಜಿಲ್ಲೆಯಾಗಿದೆ.ಈ ಜಿಲ್ಲೆಯ ರಾಜಕೀಯ ವಿಷಯಗಳಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಆಸಕ್ತಿಯೂ ಸಹ ಸಾಕಷ್ಟು ಇದೆ. ಈ ಹಿಂದೆ ಮಾಜಿ ಸಿಎಂ ಸಿದ್ದರಾಮಯ್ಯ ಕೊಪ್ಪಳ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದಿರು. ಇಂತಹ ರಾಜಕೀಯ ಪ್ರಸಿದ್ಧಿ ಪಡೆದಿರುವ ಕೊಪ್ಪಳ ಜಿಲ್ಲೆಯ ಕೊಪ್ಪಳ ತಾಲೂಕಿನ ಹನುಮನಹಟ್ಟಿ ಗ್ರಾಮದಲ್ಲಿ ಮುಂದಿನ ಸಿಎಂ ಸಿದ್ದರಾಮಯ್ಯ ಎನ್ನುವ ಕೂಗು ಕೇಳಿಬಂದಿದೆ.
Raichur; ಮೂರು ದಿನಗಳ ಕಾಲ ಮುಂಗಾರು ಹಬ್ಬದ ಸಂಭ್ರಮ
ಮುಂದಿನ ಸಿಎಂ ಸಿದ್ದರಾಮಯ್ಯ ಎಂದದ್ದು ಯಾರು?
ಕೊಪ್ಪಳ ಜಲ್ಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಅಭಿಮಾನಿಗಳ ಕೊರತೆ ಏನೂ ಇಲ್ಲ.ಈ ಹಿಂದೆ ಅವರು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದರು. ಇದರಿಂದಾಗ ಜಿಲ್ಲೆಯ ಬಹುತೇಕ ಗ್ರಾಮಗಳಲ್ಲಿ ಅವರ ಅಭಿಮಾನಿಗಳು ಇದ್ದೆ ಇದ್ದಾರೆ. ಹೀಗಾಗಿ ಕೊಪ್ಪಳ ತಾಲೂಕಿನ ಹನುಮನಹಟ್ಟಿ ಗ್ರಾಮದ ಮುತ್ತು ಎನ್ನುವ ಯುವಕ ಸಿದ್ದರಾಮಯ್ಯ ಅವರ ಕಟ್ಟಾ ಅಭಿಮಾನಿಯಾಗಿದ್ದಾನೆ.
ಹನುಮನಹಟ್ಟಿಯಲ್ಲಿ ನಿನ್ನೆಯ ದಿನ ಕಾರ ಹುಣ್ಣಿಮೆ ಹಿನ್ನಲೆಯಲ್ಲಿ ಆಯೋಜಿಸಲಾಗಿದ್ದ ಎತ್ತುಗಳ ಓಟದ ಸ್ಪರ್ಧೆಯಲ್ಲಿ ಮುತ್ತು ಎನ್ನುವ ಯವಕ ತನ್ನ ಎತ್ತಿನ ಮೈ ಮೇಲೆ ಮುಂದಿನ ಸಿಎಂ ಸಿದ್ದರಾಮಯ್ಯ ಎಂದು ಬರೆಯುವ ಮೂಲಕ ಸಿದ್ದರಾಮಯ್ಯ ಮುಂದಿನ ಸಿಎಂ ಆಗಲಿ ಎಂದು ಪ್ರಾರ್ಥಿಸಿದ್ದಾನೆ.
ತುಮಕೂರು ಗಡಿಯಲ್ಲಿ ಕನ್ನಡಿಗರ ಮೇಲೆ ಆಂಧ್ರ ಪೊಲೀಸರ ದಬ್ಬಾಳಿಕೆ!
ಮುಂದಿನ ಸಿಎಂ ಸಿದ್ದರಾಮಯ್ಯ ಎಂದು ಬರೆದಿದ್ದ ಎತ್ತು ರೇಸ್ ನಲ್ಲಿ ಫಸ್ಟ್: ಇನ್ನು ಕಾರ ಹುಣ್ಣಿಮೆ ಹಿನ್ನಲೆಯಲ್ಲಿ ಹನುಮನಹಟ್ಟಿ ಗ್ರಾಮದಲ್ಲಿ ಎತ್ತುಗಳ ಓಟದ ಸ್ಪರ್ಧೆ ಆಯೋಜಿಸಲಾಗಿತ್ತು. ಈ ಸ್ಪರ್ಧೆಯಲ್ಲಿ 30 ಕ್ಕೂ ಹೆಚ್ಚು ಜೋಡಿ ಎತ್ತುಗಳು ಓಟದ ಸ್ಪರ್ಧೆಯಲ್ಲಿ ಭಾಗವಹಿಸಿದ್ದವು. ಆದರೆ ಅಂತಿಮವಾಗಿ ಮುಂದಿನ ಸಿಎಂ ಸಿದ್ದರಾಮಯ್ಯ ಎಂದು ಬೆನ್ನ ಮೇಲೆ ಬರೆಯಿಸಿಕೊಂಡಿದ್ದ ಮುತ್ತು ಅವರ ಎತ್ತು ಚೇನ್ನಾಗಿ ಓಡಿ ಪ್ರಥಮ ಸ್ಥಾನಗಿಟ್ಟಿಸಿಕೊಂಡಿತು.
ಇನ್ನು ಈಗಾಗಲೇ ರಾಜ್ಯದಲ್ಲಿ ಚುನಾವಣೆ ಕಾವು ದಿನದಿಂದ ದಿನಕ್ಕೆ ಏರಿಕೆ ಆಗುತ್ತಿದ್ದು,ಸಿದ್ದರಾಮಯ್ಯ ಅವರ ಅಭಿಮಾನಿಗಳು ಮುಂದಿನ ಸಿಎಂ ಸಿದ್ದರಾಮಯ್ಯ ಆಗಬೇಕೆಂದು ಭಾಷಣಗಳಲ್ಲಿ,ಸಾಮಾಜಿಕ ಜಾಲತಾಣಗಳ ಮೂಲಕ ತಮ್ಮ ಅಭಿಮಾನ ಹಂಚಿಕೊಳ್ಳುತ್ತಿದ್ದಾರೆ. ಇದೀಗ ಹನುಮನಹಟ್ಟಿ ಗ್ರಾಮದ ಮುತ್ತು ಎನ್ನುವ ಸಿದ್ದರಾಮಯ್ಯ ಅವರ ಕಟ್ಟಾ ಅಭಿಮಾನಿ ತನ್ನ ಎತ್ತುಗಳ ಮೇಲೆ ಮುಂದಿನ ಸಿಎಂ ಸಿದ್ದರಾಮಯ್ಯ ಎಂದು ಬರೆಯುವ ಮೂಲಕ ಅಭಿಮಾನ ಮೆರೆದಿದ್ದಾನೆ.