ಮುಖ್ಯಮಂತ್ರಿ ಸಿದ್ದರಾಮಯ್ಯ ಪಂಚಮಸಾಲಿ ಸಮುದಾಯದ ನಿಯೋಗದ ಜೊತೆ ಸಭೆಯನ್ನು ಏರ್ಪಡಿಸಿ ಮೀಸಲಾತಿ ಕುರಿತು ಚರ್ಚಿಸಿರುವುದಾಗಿ ಹೇಳಿದ ಪಂಚಮಸಾಲಿ ಜಗದ್ಗುರು ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ
ಬಸವನಬಾಗೇವಾಡಿ(ಡಿ.17): ಮುಂಬರುವ ಜ.20ರ ಒಳಗಾಗಿ ಬೆಂಗಳೂರಿನಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಪಂಚಮಸಾಲಿ ಸಮುದಾಯದ ನಿಯೋಗದ ಜೊತೆ ಸಭೆಯನ್ನು ಏರ್ಪಡಿಸಿ ಮೀಸಲಾತಿ ಕುರಿತು ಚರ್ಚಿಸಿರುವುದಾಗಿ ಪಂಚಮಸಾಲಿ ಜಗದ್ಗುರು ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.
ಪಟ್ಟಣದ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಸಂದರ್ಭದಲ್ಲಿ ಅವರು ಲಿಂಗಾಯತ ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಸಭೆಯಲ್ಲಿ ಮಾತನಾಡಿದ ಶ್ರೀಗಳು, ನಮ್ಮ ಸಮಾಜದ ಸಚಿವ ಶಿವಾನಂದ ಪಾಟೀಲ ಅವರು ಮೊನ್ನೆ ಬೆಳಗಾವಿಯಲ್ಲಿ ನಡೆದ ಹೋರಾಟದಲ್ಲಿ ಭಾಗವಹಿಸಿ, ಹಿಂದಿನ ಸರ್ಕಾರದ ಮೀಸಲಾತಿ ನಿರ್ಣಯವನ್ನು ಪುನರ್ ಪರಿಶೀಲಿಸಿ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವ ವಿಚಾರದಲ್ಲಿ ಆದಷ್ಟು ಬೇಗ ನಿರ್ಣಯವನ್ನು ಮುಖ್ಯಮಂತ್ರಿಗಳು ತೆಗೆದುಕೊಳ್ಳಲಿದ್ದಾರೆ ಎಂದು ಹೇಳಿದ್ದಾರೆ. ಆ ಕಾರಣಕ್ಕೆ ಸುವರ್ಣಸೌಧ ಮುತ್ತಿಗೆ ಹಾಕುವ ಹೋರಾಟವನ್ನು ಕೈಬಿಟ್ಟಿದ್ದೇವೆ ಎಂದರು.
ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿಯಿಲ್ಲ: ಸಚಿವ ಎಂ.ಬಿ.ಪಾಟೀಲ
ಈ ಸಂದರ್ಭದಲ್ಲಿ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಮಹಾಸಭಾ ಯುವ ಘಟಕದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶಂಕರಗೌಡ ಬಿರಾದಾರ, ಪಂಚಮಸಾಲಿ ತಾಲೂಕು ಘಟಕದ ಅದ್ಯಕ್ಷ ಡಾ.ಮಹಾಂತೇಶ ಜಾಲಗೇರಿ, ಮೀಸಲಾತಿ ಹೋರಾಟ ಸಮಿತಿ ತಾಲೂಕು ಘಟಕದ ಗೌರವ ಅಧ್ಯಕ್ಷ ಶ್ರೀಕಾಂತ ಕೊಟ್ರಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಿಂಗನಗೌಡ ಸೋಲಾಪುರ, ತಾಲೂಕು ಯುವ ಘಟಕದ ಅಧ್ಯಕ್ಷ ಸಂಜು ಬಿರಾದಾರ, ಮಣ್ಣೂರ ಗ್ರಾಮ ಪಂಚಾಯತ ಮಾಜಿ ಅಧ್ಯಕ್ಷ ಮಹೇಶ ಮುಳವಾಡ, ಮಾಂತೇಶ ಹಾರಿವಾಳ, ಶಿವಾನಂದ ಮರೋಳ ಇದ್ದರು.