ಜನ ಜಾಸ್ತಿ ಇದ್ದಾರೆ ಅಂತಿದ್ರೆ ಕಾರ್ಯಕ್ರಮಕ್ಕೆ ಬರ್ತಿರ್ಲಿಲ್ಲ ಎಂದ ಸಿದ್ದು

Kannadaprabha News   | Asianet News
Published : Jun 11, 2020, 10:57 AM ISTUpdated : Jun 11, 2020, 11:16 AM IST
ಜನ ಜಾಸ್ತಿ ಇದ್ದಾರೆ ಅಂತಿದ್ರೆ ಕಾರ್ಯಕ್ರಮಕ್ಕೆ ಬರ್ತಿರ್ಲಿಲ್ಲ ಎಂದ ಸಿದ್ದು

ಸಾರಾಂಶ

ಈಗ ದೇಶದಲ್ಲಿ ಕೋವಿಡ್‌- 19 ವ್ಯಾಪಕವಾಗಿ ಹರಡಿದೆ. ಎಲ್ಲರೂ ಸಾಮಾಜಿಕ ಅಂತರ ಪಾಲಿಸಿ, ಮಾಸ್ಕ್‌ ಮತ್ತು ಸ್ಯಾನಿಟೈಸರ್‌ ಬಳಸಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರಿದ್ದಾರೆ ಎಂಬ ಮಾಹಿತಿ ಗೊತ್ತಿದ್ದರೆ ಕಾರ್ಯಕ್ರಮಕ್ಕೆ ಬರಿತ್ತಿರಲಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರು(ಜೂ.11): ವರಕೊಡು ಗ್ರಾಮದ ಬೀರೇಶ್ವರ ಸ್ವಾಮಿ ದೇವಸ್ಥಾನ ಜೀರ್ಣೋದ್ಧಾರಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಗುದ್ದಲಿಪೂಜೆ ನೆರವೇರಿಸಿದರು.

ಸಿದ್ದರಾಮಯ್ಯ ಆಗಮನದ ಹಿನ್ನೆಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಭಕ್ತರು, ಅಭಿಮಾನಿಗಳು ಹಾಗೂ ಪಕ್ಷದ ಕಾರ್ಯಕರ್ತರು ನೆರೆದಿದ್ದರು. ವೇದಿಕೆಯಲ್ಲಿ ಸಿದ್ದರಾಮಯ್ಯ ಅವರಿಗೆ ಹಾರ ಹಾಕಲು ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳು ಮುಗಿಬಿದ್ದರು. ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸುಮಾರು 500ಕ್ಕೂ ಹೆಚ್ಚು ಮಂದಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದರು.

ಹೋಂಸ್ಟೇಗಳ ತೆರವಿಗೆ ಹೈಕೋರ್ಟ್‌ ತಡೆ

ಈ ವೇಳೆ ಮಾತನಾಡಿದ ಸಿದ್ದರಾಮಯ್ಯ, ಕೊರೋನಾ ಇರುವ ಸಂದರ್ಭದಲ್ಲಿ ಧಾರ್ಮಿಕ ಆಚರಣೆಗಳಿಗೆ ನಮ್ಮ ವಿರೋಧವಿಲ್ಲ. ದೇವಸ್ಥಾನವನ್ನು ಅಭಿವೃದ್ಧಿಪಡಿಸಲು ನನ್ನ ಸಹಮತವಿದೆ. ಈಗ ದೇಶದಲ್ಲಿ ಕೋವಿಡ್‌- 19 ವ್ಯಾಪಕವಾಗಿ ಹರಡಿದೆ. ಎಲ್ಲರೂ ಸಾಮಾಜಿಕ ಅಂತರ ಪಾಲಿಸಿ, ಮಾಸ್ಕ್‌ ಮತ್ತು ಸ್ಯಾನಿಟೈಸರ್‌ ಬಳಸಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರಿದ್ದಾರೆ ಎಂಬ ಮಾಹಿತಿ ಗೊತ್ತಿದ್ದರೆ ಕಾರ್ಯಕ್ರಮಕ್ಕೆ ಬರಿತ್ತಿರಲಿಲ್ಲ ಎಂದರು. ಕಾಂಗ್ರೆಸ್‌ ಮುಖಂಡರು, ದೇವಸ್ಥಾನ ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಇದ್ದರು.

PREV
click me!

Recommended Stories

ಭದ್ರಾವತಿ: ಜೈ ಭೀಮ್ ನಗರದಲ್ಲಿ ಪ್ರೇಮಿಗಳ ವಿಚಾರಕ್ಕೆ ರಕ್ತಪಾತ: ಇಬ್ಬರು ದುರ್ಮರಣ!
'ನಿಮ್ಮ ಸುರಕ್ಷತೆ ನನಗೂ ಮುಖ್ಯ..' ಮಹಿಳಾ ಪ್ರಯಾಣಿಕರ ಮನ ಗೆದ್ದ ಆಟೋ ಚಾಲಕ, ಸಂದೇಶ ವೈರಲ್ ಮಾಡಿದ ಬೆಂಗಳೂರು ಪೊಲೀಸರು!