‘ಬಿಎಸ್‌ವೈ ಅಲ್ಲ ಅಲ್ಲ... ಈಶ್ವರಪ್ಪ ಮೂರ್ಖ’

Published : Aug 29, 2019, 07:23 AM IST
‘ಬಿಎಸ್‌ವೈ ಅಲ್ಲ ಅಲ್ಲ... ಈಶ್ವರಪ್ಪ ಮೂರ್ಖ’

ಸಾರಾಂಶ

ಸಚಿವ ಯಡಿಯೂರಪ್ಪ ಓರ್ವ ಮೂರ್ಖ, ಅವರ ನಾಲಿಗೆ ಹಾಗೂ ಮೆದುಳಿಗೆ ಲಿಂಕ್ ಇಲ್ಲ ಎಂದು ಸಿದ್ದರಾಮಯ್ಯ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ. 

ಬೆಳಗಾವಿ [ ಆ.29]:  ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ, ಆಪರೇಷನ್‌ ಕಮಲದ ಅನೈತಿಕ ಶಿಶು. ಈ ಅನೈತಿಕ ಸರ್ಕಾರ ಯಾವುದೇ ಕ್ಷಣದಲ್ಲಿ ಬಿದ್ದು, ಮಧ್ಯಂತರ ಚುನಾವಣೆ ಬರಬಹುದು ಎಂದು ಪುನರುಚ್ಚರಿಸಿದ್ದಾರೆ.

ಸಿದ್ದರಾಮಯ್ಯ ಆಪರೇಷನ್‌ ಕಮಲದ ಜನಕ ಎಂಬ ಸಚಿವ ಕೆ.ಎಸ್‌.ಈಶ್ವರಪ್ಪ ಹೇಳಿಕೆಗೆ ತಿರುಗೇಟು ನೀಡುವ ಭರದಲ್ಲಿ ಸಿದ್ದರಾಮಯ್ಯ ಅವರು ಯಡಿಯೂರಪ್ಪ ಒಬ್ಬ ಮೂರ್ಖ ಮೂದಲಿಸಿದರು. ತಕ್ಷಣ ತಾವು ಮಾಡಿದ ತಪ್ಪಿನ ಅರಿವಾಗುತ್ತಿದ್ದಂತೆ ಯಡಿಯೂರಪ್ಪ ಅಲ್ಲ, ಈಶ್ವರಪ್ಪ ಮೂರ್ಖ. ಅವರ ನಾಲಿಗೆಗೂ, ಬ್ರೈನ್‌ಗೂ ಲಿಂಕ್‌ ಇಲ್ಲ ಎಂದರು.

ಸಿದ್ದು ಕೊಂಡಾಡಿ ಗೌಡರ ಕುಟುಂಬದ ಮೇಲೆ ವಾಗ್ದಾಳಿ ಮಾಡಿದ ಸ್ವಾಮೀಜಿ

ಉಪಚುನಾವಣೆ ನಡೆಯಲಿರುವ ಕ್ಷೇತ್ರಗಳಿಗೆ ಇನ್ನೂ ಪಕ್ಷದ ಅಭ್ಯರ್ಥಿಗಳನ್ನು ಅಂತಿಮಗೊಳಿಸಿಲ್ಲ. ವೀಕ್ಷಕರ ವರದಿ ಆಧರಿಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಹೇಳಿದರು. ಆರ್‌ಎಸ್‌ಎಸ್‌ನ ಬಹಳ ಮಂದಿ ಸಿಎಂ ಯಡಿಯೂರಪ್ಪಗೆ ಸಲಹೆ ನೀಡುತ್ತಾರೆ ಎಂದು ವ್ಯಂಗ್ಯ ಮಾಡಿದರು.

PREV
click me!

Recommended Stories

ಗಂಡ ಹೆಂಡಿರ ಜಗಳದಲ್ಲಿ ಕೂಸು ಬಡವಾದಂತಿದೆ ರಾಜ್ಯದ ಸ್ಥಿತಿ: ಎಂ.ಪಿ.ರೇಣುಕಾಚಾರ್ಯ ಟೀಕೆ
ಭದ್ರಾವತಿ: ಜೈ ಭೀಮ್ ನಗರದಲ್ಲಿ ಪ್ರೇಮಿಗಳ ವಿಚಾರಕ್ಕೆ ರಕ್ತಪಾತ: ಇಬ್ಬರು ದುರ್ಮರಣ!