'ಸಿಎಂಗೆ ಹೈಕಮಾಂಡ್ ಯಾವುದೇ ಅಧಿಕಾರ ನೀಡಿಲ್ಲ, ಇಕ್ಕಟ್ಟಿನ ಸ್ಥಿತಿಯಲ್ಲಿ BSY'

By Suvarna NewsFirst Published Feb 8, 2020, 2:59 PM IST
Highlights

ರಾಜ್ಯದ 13 ಜಿಲ್ಲೆಗಳಿಗೆ ಸಚಿವ ಸಂಪುಟದಲ್ಲಿ ಪ್ರಾಧಾನ್ಯತೆ ಸಿಕ್ಕಿಲ್ಲ| ಪ್ರಾದೇಶಿಕ ಮತ್ತು ಸಾಮಾಜಿಕ ನ್ಯಾಯವೂ ಇಲ್ಲದಂತಾಗಿದೆ| ಅಸಮಧಾನ ತೀವ್ರಗೊಳ್ಳುವ ಸಾಧ್ಯತೆ|

ಕಲಬುರಗಿ[ಫೆ.08]: ಬಡ್ತಿ ಮೀಸಲಾತಿ ಆಯಾ ರಾಜ್ಯ ಸರ್ಕಾರಗಳ ವಿವೇಚನೆಗೆ ಬಿಟ್ಟಿದ್ದು ಅಂತ ಸುಪ್ರೀಂಕೋರ್ಟ್ ಹೇಳಿದೆ. ಆದರೆ ಎಲ್ಲೂ ನಮ್ಮ ಕಾನೂನು ಸ್ಟ್ರಕ್  ಡೌನ್ ಮಾಡಿಲ್ಲ. ಆದೇಶವನ್ನ ಪೂರ್ಣವಾಗಿ ಪರಿಶೀಲಿಸಿದ ನಂತರ ಉತ್ತರಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. 

ಶನಿವಾರ ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪಗೆ ಹೈಕಮಾಂಡ್ ಯಾವುದೇ ಅಧಿಕಾರ ನೀಡಿಲ್ಲ. ಸಚಿವ ಸಂಪುಟ ವಿಸ್ತರಣೆಯಲ್ಲಿ ಸಿಎಂಗೆ ಸ್ವಾತಂತ್ರ್ಯ ನೀಡಿಲ್ಲ, ಇಕ್ಕಟ್ಟಿನ ಸ್ಥಿತಿಯಲ್ಲಿ ಸಿಎಂ ಇದ್ದಾರೆ ಎಂದು ಹೇಳಿದ್ದಾರೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ರಾಜ್ಯದ 13 ಜಿಲ್ಲೆಗಳಿಗೆ ಸಚಿವ ಸಂಪುಟದಲ್ಲಿ ಪ್ರಾಧಾನ್ಯತೆ ಸಿಕ್ಕಿಲ್ಲ. ಪ್ರಾದೇಶಿಕ ಮತ್ತು ಸಾಮಾಜಿಕ ನ್ಯಾಯವೂ ಇಲ್ಲದಂತಾಗಿದೆ. ಇದರಿಂದ ಅಸಮಧಾನ ತೀವ್ರಗೊಳ್ಳುವ ಸಾಧ್ಯತೆ ಇದೆ. ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಸಂಬಂಧ ಮಾತನಾಡಿದ ಅವರು, ದೆಹಲಿ ಚುನಾವಣೆ ಇರುವುದರಿಂದ ಕೆಪಿಸಿಸಿ ಅಧ್ಯಕ್ಷರ ಆಯ್ಕೆ ತಡವಾಗಿದೆ. ಸದ್ಯದಲ್ಲೇ ಪ್ರಕ್ರಿಯೆ ಮುಂದುವರೆಯಲಿದೆ ಎಂದು ತಿಳಿಸಿದ್ದಾರೆ. 
 

click me!