ಸೊಸೆ ಮನೆಗೆ ಬಂದ್ಮೇಲೆ ಮನೆಯವಳೇ: ಸಿದ್ದರಾಮಯ್ಯ

Kannadaprabha News   | Asianet News
Published : Jul 02, 2021, 09:35 AM ISTUpdated : Jul 02, 2021, 09:46 AM IST
ಸೊಸೆ ಮನೆಗೆ ಬಂದ್ಮೇಲೆ ಮನೆಯವಳೇ: ಸಿದ್ದರಾಮಯ್ಯ

ಸಾರಾಂಶ

* ಕಾಂಗ್ರೆಸ್‌ನಲ್ಲಿ ಮೂಲ, ವಲಸಿಗ ಎಂಬ ಪ್ರಶ್ನೆಯೂ ಇಲ್ಲ  * ನನ್ನ ಮತ್ತು ಡಿ.ಕೆ. ಶಿವಕುಮಾರ್‌ ನಡುವೆ ಯಾವುದೇ ಸಮನ್ವಯ ಸಮಿತಿ ರಚನೆ ಆಗುತ್ತಿಲ್ಲ * ಬಂದ ಮೇಲೆ ನಾನು 5 ವರ್ಷ ಸಿಎಮ ಆಗಿದ್ದೇನೆ, ನಾನು ಮನೆಯವನೇ 

ಮೈಸೂರು(ಜು.02):  ಸೊಸೆ ಮನೆಗೆ ಬಂದ ಮೇಲೆ ಮನೆಯವಳೇ ಆಗುತ್ತಾಳೆ ಎಂಬ ಸಿ.ಎಂ.ಇಬ್ರಾಹಿಂ ಅವರ ಮಾತನ್ನು ಪುನರುಚ್ಚರಿಸುವ ಮೂಲಕ ಕಾಂಗ್ರೆಸ್‌ನಲ್ಲಿ ಮೂಲ, ವಲಸಿಗ ಎಂಬ ಪ್ರಶ್ನೆಯಿಲ್ಲ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. 

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ನಡುವೆ ಯಾವುದೇ ಸಮನ್ವಯ ಸಮಿತಿ ರಚನೆ ಆಗುತ್ತಿಲ್ಲ. ಕಾಂಗ್ರೆಸ್‌ನಲ್ಲಿ ಮೂಲ, ವಲಸಿಗ ಎಂಬ ಪ್ರಶ್ನೆಯೂ ಇಲ್ಲ ಎಂದರು. ಮೊನ್ನೆ ಸಿಎಂ ಇಬ್ರಾಹಿಂ ಹೇಳಿದ್ದಾರೆ. 

ಯೂತ್ ಕಾಂಗ್ರೆಸ್ ಅಧ್ಯಕ್ಷರ ಜಟಾಪಟಿ : ಅಂತರ ಕಾಯ್ದುಕೊಂಡ ಸಿದ್ದರಾಮಯ್ಯ

ಸೊಸೆ ಮನೆಗೆ ಬರುವವರೆಗೂ ಹೊರಗಿನವಳು. ಬಂದ ಮೇಲೆ ಸೊಸೆ ಮನೆಯವಳೇ ಆಗುತ್ತಾಳೆ ಅಂತ. ಅದೇ ರೀತಿ ನಾನು ಹೊರಗಿನಿಂದ ಬಂದವನು. ಬಂದ ಮೇಲೆ ನಾನು 5 ವರ್ಷ ಮುಖ್ಯಮಂತ್ರಿ ಆಗಿದ್ದೇನೆ. ನಾನು ಮನೆಯವನೇ ಎಂದು ಅವರು ಸಮರ್ಥಿಸಿಕೊಂಡರು.
 

PREV
click me!

Recommended Stories

'ಕುಡುಕರ ಲಿವರ್‌ಗೆ ಸರ್ಕಾರದ ಗ್ಯಾರಂಟಿ ಕೊಡಿ..' ಅಬಕಾರಿ ಆದಾಯ ಹೆಚ್ಚಿಸಲು ಖತರ್ನಾಕ್‌ ಐಡಿಯಾ ಕೊಟ್ಟ ಬಿಜೆಪಿ MLC
ನೆಲಮಂಗಲದಲ್ಲಿ ಹಸುವಿನ ಕತ್ತು ಕೊಯ್ದು ವಿಕೃತಿ ಮೆರೆದ ಕಳ್ಳರು; ಬೆಚ್ಚಿಬಿದ್ದ ಗ್ರಾಮಸ್ಥರು