ಚಾಮುಂಡೇಶ್ವರಿ ಕ್ಷೇತ್ರದಿಂದಲೇ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಫರ್ಧಿಸಬೇಕು ಎಂದು ದೊಡ್ಡಹುಂಡಿ ಗ್ರಾಮಸ್ಥರು ಪ್ರತಿಪಕ್ಷನಾಯಕ ಸಿದ್ದರಾಮಯ್ಯ ಅವರನ್ನು ಬೆಂಗಳೂರಿನ ಅವರ ನಿವಾಸದಲ್ಲಿ ಒತ್ತಾಯಿಸಿದರು.
ಮೈಸೂರು : ಚಾಮುಂಡೇಶ್ವರಿ ಕ್ಷೇತ್ರದಿಂದಲೇ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಫರ್ಧಿಸಬೇಕು ಎಂದು ದೊಡ್ಡಹುಂಡಿ ಗ್ರಾಮಸ್ಥರು ಪ್ರತಿಪಕ್ಷನಾಯಕ ಸಿದ್ದರಾಮಯ್ಯ ಅವರನ್ನು ಬೆಂಗಳೂರಿನ ಅವರ ನಿವಾಸದಲ್ಲಿ ಒತ್ತಾಯಿಸಿದರು.
ಮೈಸೂರು ತಾಲೂಕು ದೊಡ್ಡಹುಂಡಿಯ ಗ್ರಾಮಸ್ಥರು ಗುರುವಾರ ರಾತ್ರಿ ಬೆಂಗಳೂರಿನ ಸಿದ್ದರಾಮಯ್ಯ ಅವರ ನಿವಾಸಕ್ಕೆ ಭೇಟಿ ನೀಡಿ ಚಾಮುಂಡೇಶ್ವರಿ ಕ್ಷೇತ್ರಕ್ಕೆ ನೀವೆ ನಿಲ್ಲಬೇಕು, ಈ ಬಾರಿ ನಿಮ್ಮನ್ನು ಗೆಲ್ಲಿಸುತ್ತೇವೆ, ನೀವು ನಿಲ್ಲದಿದ್ದರೆ, ಡಾ. ಯತೀಂದ್ರ ಸಿದ್ದರಾಮಯ್ಯ ಅವರನ್ನು ನಿಲ್ಲಿಸಿ ಎಂದು ಮನವಿ ಮಾಡಿದರು.
undefined
ಈ ವೇಳೆ ಮಾತನಾಡಿದ ಸಿದ್ದರಾಮಯ್ಯ, ಚಾಮುಂಡೇಶ್ವರಿ ಕ್ಷೇತ್ರದ ಋುಣ ನನ್ನ ಮೇಲೆ ಇದೆ. ಆದರೆ ನನ್ನನ್ನು ಸೋಲಿಸಿದ ಕ್ಷೇತ್ರದಲ್ಲಿ ಮತ್ತೆ ನಾನು ನಿಲ್ಲುವುದಿಲ್ಲ. ಈ ಬಾರಿ ಹೈಕಮಾಂಡ್ ಒಪ್ಪಿದರೆ ಕೋಲಾರದಿಂದ ಸ್ಪರ್ಧಿಸುತ್ತೇನೆ. ಡಾ. ಯತೀಂದ್ರ ವರುಣದಿಂದ ಸ್ಪರ್ಧಿಸುತ್ತಿದ್ದಾರೆ, ಚಾಮುಂಡೇಶ್ವರಿ ಕ್ಷೇತ್ರಕ್ಕೆ ಒಮ್ಮತದ ಅಭ್ಯರ್ಥಿಯನ್ನು ಆಯ್ಕೆಮಾಡುತ್ತೇವೆ. ನಾನೇ ಅಭ್ಯರ್ಥಿ ಎಂದು ತಿಳಿದು, ಕಾಂಗ್ರೆಸ್ ಅಭ್ಯರ್ಥಿಯನ್ನು ಎಲ್ಲರೂ ಒಗ್ಗಟ್ಟಿನಿಂದ ಗೆಲ್ಲಿಸಬೇಕು. ಮುಂದಿನ ಚುನಾವಣೆಯಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದೇ ಬರುತ್ತದೆ. ಆಗ ಚಾಮುಂಡೇಶ್ವರಿ ಕ್ಷೇತ್ರದ ಉಳಿದ ಅಭಿವೃದ್ಧಿ ಕಾರ್ಯಕ್ರಮಗಳನ್ನು ಮಾಡೋಣ ಎಂದರು.
ಈ ವೇಳೆ ಧನಗಳ್ಳಿ ವಿಎಸ್‌ಎಸ್‌ಎನ್ ಮಾಜಿ ಅಧ್ಯಕ್ಷ ಪುಟ್ಟಬಸವೇಗೌಡ, ಗ್ರಾಪಂ ಮಾಜಿ ಅಧ್ಯಕ್ಷ ಸೋಮಣ್ಣ, ಗೌಡಿಕೆ ಚಿಕ್ಕೇಗೌಡ, ಮಾಲೇಗೌಡ, ಡಿ.ಸಿ. ಬಸವೇಗೌಡ, ಪೋಸ್ಟ್ ಬಸವರಾಜಪ್ಪ, ಸಿ. ಚಿಕ್ಕಣ್ಣ, ಎನ್. ಚಿಕ್ಕೇಗೌಡ, ಅಂಗಡಿ ನಾಗರಾಜು, ವದರಯ್ಯನ ಚಿಕ್ಕೇಗೌಡ, ಕ್ಲಬ್ ಮಹಾದೇವು, ಎಂ. ಎತ್ತೇಗೌಡ, ಮರಣಿ ಬಸಪ್ಪ, ಸಿ. ನಾಗೇಂದ್ರ, ಡಿ. ಬಸವರಾಜು, ಡೈರಿ ಬಸಪ್ಪ, ಕೆ. ಬಸವೇಗೌಡ, ಪಿ. ನಾಗೇಗೌಡ, ಕೆರೆಹುಂಡಿ ಕನಕೇಗೌಡ, ಬಸವಲಿಂಗು, ಮಹಾದೇವಸ್ವಾಮಿ, ಶ್ರೀನಿವಾಸ್ ಹಾಗೂ ಗ್ರಾಮಸ್ಥರು ಇದ್ದರು.
ನೀವೆ ಕೋವಿ ತನ್ನಿ
ಬೆಂಗಳೂರು (ಫೆ.16): ‘ಟಿಪ್ಪುವನ್ನು ಹೊಡೆದು ಹಾಕಿದಂತೆ ನನ್ನನ್ನೂ ಹೊಡೆದು ಹಾಕಬೇಕು ಎಂದು ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ್ ಜನರಿಗೆ ಕರೆ ನೀಡಿದ್ದಾರೆ. ಜನರನ್ನು ಯಾಕೆ ಪ್ರಚೋದಿಸುತ್ತೀರಿ ಸಚಿವರೇ? ನೀವೇ ಕೋವಿ ಹಿಡಿದುಕೊಂಡು ಬಂದು ಬಿಡಿ’ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಟಿಪ್ಪುವನ್ನು ಹೊಡೆದು ಹಾಕಿದಂತೆ ಸಿದ್ದರಾಮಯ್ಯ ಅವರನ್ನೂ ಹೊಡೆದುಹಾಕಬೇಕು ಎಂದು ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ್‌ಗೆ ನೀಡಿರುವ ಹೇಳಿಕೆಗೆ ಸರಣಿ ಟ್ವೀಟ್‌ಗಳ ಮೂಲಕ ಪ್ರತಿಕ್ರಿಯಿಸಿರುವ ಅವರು, ರಾಜ್ಯದ ಒಬ್ಬ ಸಚಿವ ಈ ರೀತಿ ಬಹಿರಂಗವಾಗಿ ಹತ್ಯೆಗೆ ಕರೆ ನೀಡಿದ ನಂತರವೂ ಅವರ ವಿರುದ್ಧ ಪೊಲೀಸರು ಕ್ರಮಕೈಗೊಂಡಿಲ್ಲ ಎಂದಾದರೆ ಈ ರಾಜ್ಯವನ್ನು ಆಳುವವರು ಜೀವಂತವಾಗಿಲ್ಲ, ಸರ್ಕಾರ ಸತ್ತುಹೋಗಿದ್ದಾರೆ ಎಂದೇ ಲೆಕ್ಕ ಎಂದಿದ್ದಾರೆ.
ಕೋಲಾರದಿಂದ ಸ್ಪರ್ಧೆ, ಸಿದ್ದು ಕೈಗೊಂಡ ತಪ್ಪು ನಿರ್ಧಾರ: ಸಿ.ಎಂ.ಇಬ್ರಾಹಿಂ
ಅಲ್ಲದೆ, ಅಶ್ವತ್ಥನಾರಾಯಣ್ ನೀಡಿರುವ ಹತ್ಯೆಯ ಕರೆಯ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಪ್ರತಿಕ್ರಿಯೆ ತಿಳಿಯಲು ಬಯಸುತ್ತೇನೆ. ಮೌನ ಸಮ್ಮತಿಯ ಲಕ್ಷಣವೇ? ಎಂದು ಪ್ರಶ್ನಿಸಿದ್ದಾರೆ. ನನ್ನ ಹತ್ಯೆಗೆ ಅಶ್ವತ್ಥನಾರಾಯಣ್ ನೀಡಿದ ಕರೆಯಿಂದ ನನಗೆ ಆಶ್ಚರ್ಯವಾಗಿಲ್ಲ. ಗಾಂಧೀಜಿಯನ್ನು ಕೊಂದವರನ್ನೇ ಆರಾಧಿಸುತ್ತಿರುವ ಪಕ್ಷದ ನಾಯಕರಿಂದ ಕೊಲೆಗಡುಕತನವಲ್ಲದೇ ಪ್ರೀತಿ, ಕರುಣೆ, ಸ್ನೇಹವನ್ನು ನಿರೀಕ್ಷಿಸಲು ಸಾಧ್ಯವೇ?’ ಎಂದು ಪ್ರಶ್ನಿಸಿದ್ದಾರೆ.
ಹೊಡೆದು ಹಾಕಲು ನೀವು ಬಿಡುತ್ತೀರಾ?: ಇದೇ ವಿಚಾರವಾಗಿ ಬಾಗಲಕೋಟೆಯ ಕಲಾದಗಿಯಲ್ಲಿ ನಡೆದ ಪ್ರಜಾಧ್ವನಿ ಸಮಾವೇಶದಲ್ಲಿ ಮಾತನಾಡಿದ ಅವರು, ‘ಅಶ್ವತ್ಥ ನಾರಾಯಣ ಮನುಷ್ಯರೋ, ರಾಕ್ಷಸರೋ ನೀವೆ ತಿಳಿದುಕೊಳ್ಳಿ. ಸಿದ್ದರಾಮಯ್ಯರನ್ನು ಟಿಪ್ಪುವಿನಂತೆ ಹೊಡೆದು ಹಾಕಬೇಕು ಎಂದಿದ್ದಾರಂತೆ. ಹೊಡೆದು ಹಾಕೋಕೆ ನೀವು ಬಿಡ್ತಿರಾ?’ ಎಂದು ಜನರನ್ನು ಪ್ರಶ್ನಿಸಿದರು. ಇದೇ ವೇಳೆ ನಾನು ಟಿಪ್ಪು, ಬಸವಣ್ಣ, ಸಂಗೊಳ್ಳಿ ರಾಯಣ್ಣ ಎಲ್ಲರನ್ನೂ ಗೌರವಿಸ್ತೇನೆ. ನಾನು ಮನುಷ್ಯತ್ವ ಇರುವವನು. ಹಿಂದುಗಳನ್ನು ಪ್ರೀತಿಸ್ತೀನಿ, ಮುಸ್ಲಿಂ, ಕ್ರೈಸ್ತ, ವಾಲ್ಮೀಕಿ ಎಲ್ಲರನ್ನೂ ಪ್ರೀತಿಸ್ತೀನಿ’ ಎಂದು ಹೇಳಿದರು.