ರಾಜಕೀಯ ಪುನರ್ಜನ್ಮ ನೀಡಿದ ಬಾದಾಮಿ ಕ್ಷೇತ್ರದ ಜನರು ಹಿತ ಕಾಯಲು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಬೆಂಗಳೂರು, (ಏ.18): ಲಾಕ್ಡೌನ್ ಹಿನ್ನೆಲೆ ಮಾಜಿ ಸಿಎಂ ಸಿದ್ದರಾಮಯ್ಯ, ಬೆಂಗಳೂರಿನ ನಿವಾಸದಿಂದಲೇ ತಮ್ಮ ಕ್ಷೇತ್ರದ ಅಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿದರು.
ಬಾದಾಮಿ ತಹಶೀಲ್ದಾರ್ ಎಸ್ ಎಸ್ ಇಂಗಳೆ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಲಾಕ್ಡೌನ್ ಸಂಬಂಧ ಕೈಗೊಂಡಿರುವ ಕ್ರಮಗಳ ಬಗ್ಗೆ ಚರ್ಚೆ ಮಾಡಿದರು.
ಅಬ್ಬಬ್ಬಾ..! ಕರ್ನಾಟಕದಲ್ಲಿ 370ರ ಗಡಿ ದಾಟಿದ ಕೊರೋನಾ ಪೀಡಿತರ ಸಂಖ್ಯೆ..!
ಕ್ಷೇತ್ರದ ಬಡ ಜನತೆಗೆ ಅಗತ್ಯ ನೆರವು, ಜೊತೆಗೆ ಆರೋಗ್ಯದ ಬಗ್ಗೆ ನಿಗಾವಹಿಸುವಂತೆ ಅಧಿಕಾರಿಗಳಿಗೆ ಕೆಲವೊಂದು ಸಲಹೆ, ಸೂಚನೆಗಳನ್ನು ಸಭೆಯಲ್ಲಿ ನೀಡಿದರು.
ಮಂಗಳೂರು, ಉಡುಪಿ ಹಾಗೂ ಇತರೆ ರಾಜ್ಯಗಳಿಂದ ವಲಸೆ ಬಂದ ಕಾರ್ಮಿಕರ ಸ್ಥಿತಿಗತಿಗಳ ಬಗ್ಗೆ ಸಿದ್ದರಾಮಯ್ಯ ಚರ್ಚೆ ನಡೆಸಿದ್ರು. ಬಳಿಕ ಕಾರ್ಮಿಕರಿಗೆ ಸೂಕ್ತ ಭದ್ರತೆ, ಮೂಲಭೂತ ಸೌಕರ್ಯಗಳನ್ನ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.