ಡಾ. ಬಿ.ಆರ್. ಅಂಬೇಡ್ಕರ್‌ ಅವರಿಗೆ ಊಟ ಬಡಿಸಿದ್ದ ಬೆಳಗಾವಿ ಸಿದ್ದವ್ವ ಇನ್ನಿಲ್ಲ

Published : Jul 31, 2020, 05:16 PM ISTUpdated : Jul 31, 2020, 05:19 PM IST
ಡಾ. ಬಿ.ಆರ್. ಅಂಬೇಡ್ಕರ್‌ ಅವರಿಗೆ ಊಟ ಬಡಿಸಿದ್ದ ಬೆಳಗಾವಿ ಸಿದ್ದವ್ವ ಇನ್ನಿಲ್ಲ

ಸಾರಾಂಶ

ಸಂವಿಧಾನ  ಶಿಲ್ಪಿ ದಿವಂಗತ ಬಿ ಆರ್ ಅಂಬೇಡ್ಕರ್ ಅವರ ಅನುಯಾಯಿ ಬೆಳಗಾವಿ ಸಿದ್ದವ್ವ ನಿಧನರಾಗಿದ್ದಾರೆ.  ಡಾ. ಬಿಆರ್ ಅಂಬೇಡ್ಕರ್‌ ಅವರಿಗೆ ಊಟ ಬಡಿಸಿದ್ದ  ಸಿದ್ದವ್ವ

ಬೆಳಗಾವಿ, (ಜುಲೈ.31): ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರು ಬೆಳಗಾವಿಗೆ ಬಂದಾಗ ಅವರನ್ನ ತಮ್ಮ ಮನೆಯಲ್ಲಿ ಇರಿಸಿಕೊಂಡು ಉಟೋಪಚಾರ ಮಾಡಿದ್ದ 95ವರ್ಷ ವಯಸ್ಸಿನ ವಯೋವೃದ್ಧೆ ಸಿದ್ಧವ್ವ ಮೇತ್ರಿ(95) ಕೊನೆಯುಸಿರೆಳೆದಿದ್ದಾರೆ.

ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸಿದ್ಧವ್ವ, ಇವತ್ತು (ಶುಕ್ರವಾರ) ಬೆಳಿಗ್ಗೆ  ತಮ್ಮ ನಿವಾಸ ಕಂಗ್ರಾಳಿ ಗಲ್ಲಿಯಲ್ಲಿ ಕೊನೆಯುಸಿರೆಳೆದಿದ್ದಾರೆ.

ನಾಳೆ ಪ್ರಧಾನಿ ಮೋದಿ ಭಾಷಣ, ಸೆಕ್ಸ್ ವರ್ಕರ್ ಮಕ್ಕಳಿಗೆ ಉಚಿತ ಶಿಕ್ಷಣ; ಜು.31ರ ಟಾಪ್ 10 ಸುದ್ದಿ!

1939ರಲ್ಲಿ ಬೆಳಗಾವಿಗೆ ಆಗಮಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ತಮ್ಮ ಮನೆಯಲ್ಲಿ ಉಳಿದುಕೊಳ್ಳಲು ಅವಕಾಶ ನೀಡಿದ್ದ ಸಿದ್ಧವ್ವ, ಊಟದ ವ್ಯವಸ್ಥೆ ಮಾಡಿದ್ದರು.

ಇದರಿಂದ ತೀವ್ರ ಸಂತೋಷಗೊಂಡ ಅಂಬೇಡ್ಕರ್ ಅವರು, ನಿಮ್ಮಂತ ಹೆಣ್ಣು ಮಕ್ಕಳು ವಿದ್ಯಾಭ್ಯಾಸ ಮಾಡಿ, ಸಮಾಜದಲ್ಲಿ ಬೆಳೆಯಬೇಕೆಂದು ಸಲಹೆ ನೀಡಿದ್ದರು. ಇದರಿಂದ ತೀವ್ರ ಪ್ರಭಾವಿತಳಾಗಿದ್ದ ಸಿದ್ಧವ್ವ, ಜೀವಿತ ಅವಧಿಯಲ್ಲಿ ಅಂಬೇಡ್ಕರ್ ಸಿದ್ಧಾಂತದ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದರು.

PREV
click me!

Recommended Stories

ಸಿಎಂ ಗೊಂದಲಕ್ಕೆ ಮತ್ತೆ ಬೆಂಕಿ: ಸಿದ್ದರಾಮಯ್ಯ 5 ವರ್ಷ ಸಿಎಂ, ಬದಲಾದರೆ ಡಿಕೆಶಿ ಒಬ್ರೇ ರೇಸ್‌ನಲ್ಲಿಲ್ಲ..; - ಕೆಎನ್ ರಾಜಣ್ಣ
ಬೆಂಗಳೂರು ಜನರಿಗೆ ಹೊಟ್ಟೆತುಂಬಾ ಬಿರಿಯಾನಿ ಬಾಡೂಟ ಕೊಟ್ಟ ಕುಟುಂಬ ಸಾಲದ ಸುಳಿಗೆ ಸಿಲುಕಿ ಆತ್ಮ*ಹತ್ಯೆ!